ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ಉಡುಪಿ: ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು (ಸೋಮವಾರ) ಪ್ರಕಟಿಸಿದೆ.61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಉಡುಪಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕಾಪು ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಜೆ ಪರಿಶಿಷ್ಟ ಜಾತಿ, ಕಾರ್ಕಳ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ […]

ಹಿರಿಯಡಕ: ಸುಲಿಗೆ ಪ್ರಕರಣ; 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಡುಪಿ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಸುರೇಶ್‌‌ ಪುರುಷ(45) ಬಂಧಿತ ಆರೋಪಿ. ಈತ ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಳಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದನು. ಹಿರಿಯಡ್ಕ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಮಂಜುನಾಥ ಮರಬದರವರ ನೇತೃತ್ವದಲ್ಲಿ ಠಾಣಾ ಹೆಚ್‌ಸಿ ಗುರುರಾಜ್ ಸಿಹೆಚ್‌ಸಿ ದಯಾನಂದ ಪ್ರಭು ಹಾಗೂ ಸಿಪಿಸಿ ಕೃಷ್ಣ ಪೂಜಾರಿ ಅವರು 18 ವರ್ಷಗಳ ಬಳಿಕ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ […]

ಸುನಿಲ್ ಕುಮಾರ್ ಧರ್ಮದ ಹೆಸರಿನಲ್ಲಿ ಸುಳ್ಳು ಹೇಳಿ ಗೆದ್ದಿದ್ದಾರೆ

ಉಡುಪಿ: ಜನಗಳ ಧಾರ್ಮಿಕ ಭಾವನೆಯನ್ನು ಕದಡಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಸುನಿಲ್ ಕುಮಾರ್ ಅವರು ಶಾಸಕನಾಗಲು ಸುಳ್ಳು ಹೇಳಿ ನಕಲಿ ಮೂರ್ತಿ ಸೃಷ್ಟಿಸಿದ್ದಾರೆ. ಅವರು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಆರೋಪಿಸಿದ್ರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ ಮರ್ಯಾದೆ ಇದ್ರೆ ಸುನಿಲ್ ಕುಮಾರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ದೇವರ ಹೆಸರಲ್ಲಿ, ಧಾರ್ಮಿಕತೆಗೆ ಮೋಸ ಮಾಡಬಾರದು ಎಂದು ಕಿಡಿಕಾರಿದರು. ಒಂದು ವರ್ಷದ ಹೋರಾಟಕ್ಕೆ ಒಂದು […]

ಉಡುಪಿ: ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದೆ. ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರಿನ ಮನೆಗೆ ತೆರಳಿ ಕಾಂಗ್ರೆಸ್‌ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ದೂರಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು, ಕಾರ್ಕಳ ಶಾಸಕ ಸುನಿಲ್ ಕುಮಾರ್ […]