ಕುಂದಗನ್ನಡ ಹಾಡುಗಾರಿಕೆಯಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ
ಕುಂದಾಪುರ: ರೇಡಿಯೋ ಕುಂದಾಪುರ 89.6 ಎಫ್. ಎಂ. ಮತ್ತು “ಕುಂದಪ್ರಭ” ಆಶ್ರಯದಲ್ಲಿ ನಡೆದ ಕುಂದಗನ್ನಡ ಹಾಡುಗಾರಿಕೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಹಿರಿಯ ಉಡುಪಿ ಸೀರೆ ನೇಕಾರರಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ನೇಕಾರ ರತ್ನ ಪ್ರಶಸ್ತಿ
ಉಡುಪಿ: ಉಡುಪಿ ಸೀರೆ ನೇಕಾರರಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ನೇಕಾರ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಸಂಜೀವ ಶೆಟ್ಟಿಗಾರ್(86 ವರ್ಷ ) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89 ವರ್ಷ) ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ, ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ನಿರಂತರ […]
ಉಡುಪಿ: ಸರಕಾರಿ ಆಸ್ಪತ್ರೆಗೆ ಹಣ್ಣು ಹಂಪಲು ವಿತರಣೆ
ಉಡುಪಿ: ರಾಜ್ಯಸಭಾ ಸದಸ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗರಿ ಅವರ ಹುಟ್ಟುಹಬ್ಬದ ಪ್ರಯುಕ್ತ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ಪ್ರಧಾನ ಕಾರ್ಯದರ್ಶಿ, ಗೌರವ ಡಾಕ್ಟರೇಟ್ ಪುರಸ್ಕೃತ ಡಾ. ಶೇಕ್ ವಹಿದ್ ಉಡುಪಿ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ಡಾ. ಶೇಕ್ ವಹಿದ್ ಉಡುಪಿ, ಕಷ್ಟದಲ್ಲಿರುವ ರೋಗಿಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಜಿಲ್ಲಾ ಸರಕಾರಿ […]
ಉಡುಪಿ: ಆರೋಗ್ಯವಂತ ಮಹಿಳೆಯಿಂದ ಭವ್ಯ ಸಮಾಜ ನಿರ್ಮಾಣ ಸಾಧ್ಯ: ಡಾ.ಜೇಸ್ಮಾ ಸ್ಟೇಲ್ಲಾ ಪಿಕಾರ್ಡೊ.
ಉಡುಪಿ: ಸುಮನಸಾ ಕೊಡವೂರು ಉಡುಪಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಡವೂರು, ಶ್ರೀ ದುರ್ಗಾ ಮಹಿಳಾ ಮಂಡಲ ಕೊಡವೂರು ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ವಿವಿಧ ಆರೋಗ್ಯ ಘಟಕಗಳ ಸಹಯೋಗದೊಂದಿಗೆ ಕೊಡವೂರು “ವಿಪ್ರಶ್ರೀ” ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸೆ ಮತ್ತು ಮಾಹಿತಿ ಕಾರ್ಯಕ್ರಮ ನೆರವೇರಿತು. ಶಿಬಿರವನ್ನು ಉದ್ಘಾಟಿಸಿದ ಮಲ್ಪೆಯ ವೈದ್ಯಾಧಿಕಾರಿಗಳಾದ ಡಾಕ್ಟರ್ ಜೇಸ್ಮಾ ಸ್ಟೇಲ್ಲಾ ಪಿಕಾರ್ಡೋ ಅವರ ಮಾತನಾಡುತ್ತಾ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸಂಘಸಂಸ್ಥೆಗಳ ಪಾತ್ರ ಹಿರಿದು ಹಾಗೂ ವಿಶೇಷವಾಗಿ ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು, […]
ಕಾರ್ಕಳ: ವ್ಯಕ್ತಿ ನಾಪತ್ತೆ
ಕಾರ್ಕಳ, ಆಗಸ್ಟ್ 06: ಕಾರ್ಕಳ ತಾಲೂಕು ಕಸಬಾ ಗ್ರಾಮದ ಮೀನು ಮಾರ್ಕೆಟ್ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಾಳಪ್ಪ (30) ಎಂಬ ವ್ಯಕ್ತಿಯು ಮೇ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100 ಅಥವಾ 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ […]