ಮಂಗಳೂರು: ಬಾಲಕಿ ಹತ್ಯೆ ಪ್ರಕರಣ; ಆರೋಪಿ ಪೊಲೀಸರ ವಶಕ್ಕೆ.
ಮಂಗಳೂರು: ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಫಕೀರಪ್ಪ ಹಣಮಪ್ಪ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಪ್ಪ ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಫಕೀರಪ್ಪ ಹಣಮಪ್ಪ ಪ್ರಸ್ತುತ ವಿಜಯ ವಿಠಲ ಭಜನಾ ಮಂದಿರದ ಹಿಂಭಾಗ, ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿದ್ದು, ಕಳೆದ 6 ತಿಂಗಳಿನಿಂದ […]
ಕೋಟ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ- ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರಯಾಣಿಕರು
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೋಟ ಹೈಸ್ಕೂಲ್ ಸಮೀಪ ಇಂದು ಸಂಭವಿಸಿದೆ. ಕಾರನ್ನು ಚಲಾಯಿಸುತ್ತಿದ್ದಾಗ ಚಾಲಕನಿಗೆ ತಲೆ ಸುತ್ತು ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಮೆಸ್ಕಾಂನ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಉಡುಪಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಜೂಜುಕೋರರು ಪರಾರಿ, 9 ಕೋಳಿಗಳ ವಶ.
ಉಡುಪಿ: ಇಲ್ಲಿನ ಅಂಬಲಪಾಡಿ ಎಂಬಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಕಂಡ ಸ್ಥಳೀಯರು ಹಾಗೂ ಜೂಜುಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.ಮಾರಿ ಹಬ್ಬದ ಹಿನ್ನೆಲೆಯಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಆದರೆ ಈ ಬಾರಿ ಕೋಳಿ ಅಂಕವನ್ನು ಅನುಮತಿ ಇಲ್ಲದೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಪೊಲೀಸರು ಕೋಳಿ ಅಂಕಕ್ಕೆ ದಾಳಿ ನಡೆಸಿ ಕೋಳಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರಿನ ಅತಿದೊಡ್ಡ ಮೆರೈನ್ ಶಿಪ್ಪಿಂಗ್ ಕಂಪೆನಿಯಲ್ಲಿ ಉದ್ಯೋಗವಕಾಶಗಳು.
ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್
ಮಣಿಪಾಲ: ಕಳೆದ 12 ವರ್ಷಗಳಿಂದ ಕಾರ್ಯಚರಿಸುವ ‘ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’, ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ. 2024-25ರ ಪ್ರವೇಶಾತಿ ಆರಂಭವಾಗಿದ್ದು, ಆಸಕ್ತರು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿ, ಡಿ.ಸಿ.ಆಫೀಸ್ ಬಳಿ, ಮಣಿಪಾಲ (9901722527) ಅರ್ಜಿ ನಮೂನೆಯನ್ನು ಪಡಕೊಂಡು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ.