ಆಗಸ್ಟ್ 10 ರಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿಸ್ತರಿತ ಆಡಳಿತ ಕಚೇರಿ ಉದ್ಘಾಟನೆ: ಯಶ್ ಪಾಲ್ ಸುವರ್ಣ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವಿಸ್ತರಿತ ಹಾಗೂ ನವೀಕರಣಗೊಂಡ ಆಡಳಿತ ಕಚೇರಿಯ ಉದ್ಘಾಟನೆಯನ್ನು ಆಗಸ್ಟ್ 10 ರಂದು ಆಯೋಜಿಸಿರುವುದಾಗಿ ಮಹಾಲಕ್ಷ್ಮೀ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಆಗಸ್ಟ್ 10 ರಂದು ಬೆಳಿಗ್ಗೆ 10 ಗಂಟೆಗೆ ಅಜ್ಜರಕಾಡು ಕಲ್ಮಂಜೆ ಟವರ್ಸ್ ನಲ್ಲಿರುವ ಸ್ವಂತ ಕಟ್ಟಡದಲ್ಲಿ ಬ್ಯಾಂಕಿನ ವಿಸ್ತರಿತ ಹಾಗೂ ನವೀಕರಣಗೊಂಡ ಆಡಳಿತ ಕಚೇರಿಯ ಉದ್ಘಾಟನೆಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ […]
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ

ಉಡುಪಿ: ದೊಡ್ಡನ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದ ನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ಇದೇ ತಿಂಗಳ ತಾರೀಕು 9ರ ಶುಕ್ರವಾರದಂದು ನಾಗರ ಪಂಚಮಿ ಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಚಕ ಅನೀಶ್ ಆಚಾರ್ಯ ಅವರ ನೇತೃತ್ವದಲ್ಲಿ ನೆರವೇರಲಿರುವುದು..ಆ ಪ್ರಯುಕ್ತ ಸನ್ನಿಧಾನದಲ್ಲಿ ವಿಶೇಷ ಪೂಜೆ ತನು ತಂಬಿಲ ಸೇವೆ ಪಂಚಾಮೃತ ಅಭಿಷೇಕ ಪ್ರಸನ್ನ ಪೂಜೆ ನೆರವೇರಲಿರುವುದು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ ತಿಳಿಸಿರುತ್ತಾರೆ
ಬ್ರಹ್ಮಾವರ: ಎಸ್.ಎಮ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

ಬ್ರಹ್ಮಾವರ: ಎಸ್.ಎಮ್.ಎಸ್. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಅಗಸ್ಟ್ 6 ರಂದು ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಈ ಮಹಾಸಭೆ 2023-24 ನೇ ಶೈಕ್ಷಣಿಕ ವರ್ಷದಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ವಿಷಿಷ್ಠ ಶ್ರೇಣಿಯಲ್ಲಿ ಉತ್ತೀರ್ಣಗೊಂಡ 70 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ನಾಗರಾಜ ಅರಸ್ ಸಂಪ್ನಮೂಲ ವ್ಯಕ್ತಿಯಾಗಿ ಹಾಜರಿದ್ದು, ಪೋಷಕರ ಜವಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಲಯನ್ ಐವನ್ ದೊನಾತ್ […]
ಮಲ್ಪೆ ಬಂದರಿನಲ್ಲಿ ವಿಶಿಷ್ಟ ಸ್ವಚ್ಛತಾ ಅಭಿಯಾನ

ಉಡುಪಿ: ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ರೀತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಕಸ ಸಮುದ್ರ ಸೇರುತ್ತದೆ. ಹೀಗೆ ಸಂಗ್ರಹವಾದ ಕಸ ಹಿನ್ನಿರಿನ ಮೂಲಕ ಮಲ್ಪೆ ಬಂದರು ಪ್ರದೇಶದಲ್ಲಿ ರಾಶಿ ಬಿದ್ದಿತ್ತು. ಇದೀಗ ಮೀನುಗಾರಿಕಾ ಚಟುವಟಿಕೆಗಳು ಆರಂಭವಾಗಿದೆ. ದಿನನಿತ್ಯ ಲಕ್ಷಾಂತರ ಜನ ಬಂದರು ಪ್ರದೇಶದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ಹಾಗಾಗಿ ಲೋಡುಗಟ್ಟಲೆ ಕಸಗಳನ್ನು ತೆರವು ಮಾಡುವ ಕಾರ್ಯಕ್ಕೆ ಸಾಮಾಜಿಕ […]
ಉಡುಪಿ: ಬೀದಿನಾಯಿಯಿಂದ ದಾಳಿಗೊಳಗಾದ ನವಿಲಿನ ರಕ್ಷಣೆ

ಉಡುಪಿ: ಬೀದಿನಾಯಿಯ ದಾಳಿಯಿಂದ ಕಾಲುಮುರಿತಗೊಂಡು ಹಾರಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದ ಹೆಣ್ಣು ನವಿಲನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿದ್ದಾರೆ. ಕೆಸರಿನಲ್ಲಿ ನವಿಲು ಬಿದ್ದು ಒದ್ದಾಡುವುದನ್ನು ಗಮನಿಸಿದ ಸ್ಥಳೀಯರು ಸಮಾಜಸೇವಕ ಒಳಕಾಡು ಅವರಿಗೆ ತಿಳಿಸಿದ್ದರು. ತಕ್ಷಣ ಅವರು ನವಿಲನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆಗೆ ಒಪ್ಪಿಸಿದರು. ಇಲಾಖೆಯವರು ನವಿಲನ್ನು ಚಿಕಿತ್ಸೆಗೆ ಒಳಪಡಿಸುವುದಾಗಿ ಹೇಳಿದ್ದಾರೆ. ಈ ಸಂದರ್ಭ ವಲಯ ಅರಣ್ಯ ಅಧಿಕಾರಿ ಗುರುರಾಜ್ ಕಾವ್ರಾಡಿ, ಅರಣ್ಯ ಗಸ್ತು ಪಾಲಕ ಕೇಶವ ಪೂಜಾರಿ ಇದ್ದರು. ಪ್ರದೀಪ್ ಅಜ್ಜರಕಾಡು ಕಾರ್ಯಚರಣೆಗೆ ಸಹಕರಿಸಿದರು