ಎಲ್ಲರಲ್ಲೂ ಕ್ಷಮೇ ಕೇಳುತ್ತಾ, ಕುಸ್ತಿಗೆ ವಿದಾಯ ಘೋಷಿಸಿದ ವಿನೇಶ್ ಫೋಗಟ್.

ನವದೆಹಲಿ: ಆ.8: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50ಕೆಜಿ ವಿಭಾಗದ ಕುಸ್ತಿಯ ಫೈನಲ್ನಲ್ಲಿ ಭಾರತದ ಚಿನ್ನದ ಕನಸು ಸಾಕಾರಗೊಳಿಸಲು ಮುನ್ನುಗ್ಗುತ್ತಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ ಭಾರಿ ನಿರಾಸೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ 100 ಗ್ರಾಂ ತೂಕ ಹೆಚ್ಚಾದ ಕಾರಣ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದರು. ವಿದಾಯ ಘೋಷಿಣೆ: ಭಾರತದ ಮನವಿ, ಪ್ರತಿಭಟನೆಗಳಿಂದ ಒಲಿಂಪಿಕ್ಸ್ ಸಮಿತಿ ನಿರ್ಧಾರ ಬದಲಾಗಲಿಲ್ಲ. ಇತ್ತ ಅನರ್ಹದ ಬೆನ್ನಲ್ಲೇ ವಿನೇಶ್ ಫೋಗಟ್ ವಿದಾಯ ಘೋಷಿಸಿದ್ದಾರೆ. ವಿದಾಯ ಘೋಷಿಸುತ್ತಿದ್ದಂತೆ ವಿನೇಶ್ ಫೋಗಟ್ ಭಾವುಕರಾಗಿದ್ದಾರೆ. […]

ಶಿರ್ವ: ಎಳೆನೀರು ಕೊಯ್ಯುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಮೃತ್ಯು

ಉಡುಪಿ: ಎಳೆನೀರು ಕೊಯ್ಯುವ ವೇಳೆ ವಿದ್ಯುತ್‌ ತಗುಲಿ ಕೂಲಿಕಾರ್ಮಿಕರೋರ್ವರು ಮೃತಪಟ್ಟ ಘಟನೆ ಶಿರ್ವ ನಡೀಬೆಟ್ಟು ಎಂಬಲ್ಲಿ ಆ.8ರಂದು ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ನಡೀಬೆಟ್ಟು ಪನಿಮಾರ್‌ ಮನೆಯ ಕೆಲಸದಾಳು ಸುರೇಶ್‌ ಶೆಟ್ಟಿ(68) ಎಂದು ಗುರುತಿಸಲಾಗಿದೆ. ಇವರು ಕಬ್ಬಿಣದ ಸಲಾಕೆಯಿಂದ ಸೀಯಾಳ ತೆಗೆಯಲು ಹೋಗಿದ್ದರು. ಈ ವೇಳೆ ತೋಟದಲ್ಲಿರುವ ಹೈ ಟೆನ್ಷನ್‌ ವಯರ್‌ ಕಬ್ಬಿಣದ ಸಲಾಕೆಗೆ ತಗಲಿ ಈ ಅವಘಡ ಸಂಭವಿಸಿದೆ. ಈ ಸಂದರ್ಭದಲ್ಲಿ ಮನೆಯ ಮಾಲೀಕ ದೇವಸ್ಥಾನಕ್ಕೆ ಹೋಗಿದ್ದರು ಎನ್ನಲಾಗಿದೆ.

ಮಂಗಳೂರು: ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೊಕ್ಕೊಟ್ಟು ನಿವಾಸಿ ಮಂಜುಳಾ (31) ಎಂಬಾಕೆ ಜು. 31ರಂದು ತನ್ನ ಇಬ್ಬರು ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಬರುವುದಾಗಿ ಹೇಳಿ ವಾಪಸ್ ಮನೆಗೆ ಬಾರದೇ ನಾಪತ್ತೆಯಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. 5 ಅಡಿ ಎತ್ತರದ, ಸಾಧಾರಣ ಶರೀರದ, ಎಣ್ಣೆ ಕಪ್ಪು ಮೈಬಣ್ಣದ, ಕೋಲು ಮುಖದ ಈಕೆ ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಈಕೆಯು ತನ್ನ 8ರ ಹರೆಯದ ಮಗ ಕೃಷ್ಣ ಮತ್ತು 6 ವರ್ಷ ಪ್ರಾಯದ ಖುಷಿಯೊಂದಿಗೆ ನಾಪತ್ತೆಯಾಗಿದ್ದಾರೆ. […]

ಸ್ಟೆನೋಗ್ರಾಫರ್ ಗ್ರೇಡ್ ಸಿ, ಡಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಹ ಅಭ್ಯರ್ಥಿಗಳು 2024 ರ ಆಗಸ್ಟ್ 01 ರಂತೆ ಸಾಮಾನ್ಯ ಅಭ್ಯರ್ಥಿಗಳು 18 ರಿಂದ 30 ವರ್ಷಗಳ ನಿರ್ದಿಷ್ಠ ವಯೋಮಿತಿ ಹೊಂದಿರಬೇಕು, ಮಾನ್ಯತೆ ಪಡೆದ ಮಂಡಳಿಯಿಂದ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ […]

ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ […]