ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ

ಮಂಗಳೂರು: ಪಿಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರ್ತಿಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮವು ಆಗಸ್ಟ್ 9 ರಂದು ಆಯೋಜಿಸಲಾಗಿತ್ತು. ಸಮಾರಂಭವು ಇಮಾಮ್ ಜನಾಬ್ ಇಝೂದ್ದೀನ್ ಕೌಸರಿ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾರ್ಥನೆಯನ್ನು ಶ್ರೀ ಸಾಲಿ ಅಶಾಮ್, ಸಹಾಯಕ ಪ್ರಾಧ್ಯಾಪಕರು, ಇವರು ಅನುವಾದಿಸಿದರು. ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ (ಮೌಲ್ಯಮಾಪನ) ಡಾ. ದೇವೇಂದ್ರಪ್ಪ ಹೆಚ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿ ಉನ್ನತ ಶಿಕ್ಷಣದ ಮಹತ್ವ […]

ಕುಂದಾಪುರ ಶ್ರೀ ವೆಂಕಟರಮಣ ಕಾಲೇಜುನಲ್ಲಿ ಉಡುಪಿ ಜಿಲ್ಲಾ ಪ್ರಾಂಶುಪಾಲರ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಭೆ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಇದರ ಸಹಭಾಗಿತ್ವದಲ್ಲಿ 2024- 25 ನೇ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಪೂರ್ವಭಾವಿ ಸಮಾಲೋಚನೆ ಸಭೆ ಶ್ರೀ ವೆಂಕಟರಮಣ ಕಾಲೇಜಿನ ಆಡಿಟೋರಿಯಂನಲ್ಲಿ ಆಗಸ್ಟ್ 08 ರಂದು ಜರುಗಿತು.ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಅಂಡ್ ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ಕೆ. ರಾಧಾಕೃಷ್ಣ ಶೆಣೈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ […]

ಉಡುಪಿ: ಹಿರಿಯ ಪತ್ರಕರ್ತರ ಜಯಕರ ಸುವರ್ಣರಿಗೆ ನುಡಿನಮನ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ನುಡಿನಮನ ಸಲ್ಲಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ ಅವರು, ಪ್ರಾಮಾಣಿಕ ಪತ್ರಕರ್ತ, ಯಾವುದೇ ಅಹಂ ಇಲ್ಲದೆ ಸ್ನೇಹಜೀವಿಯಾಗಿದ್ದ ಜಯಕರ ಸುವರ್ಣ, […]

ತಕ್ಷಣ ಬೇಕಾಗಿದ್ದಾರೆ

ಉಡುಪಿ: ಉಡುಪಿಯ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಗೆ ಅನುಭವಿ ಗ್ರಾಫಿಕ್ ಡಿಸೈನರ್ ಬೇಕಾಗಿದ್ದಾರೆ.

ಬ್ರಹ್ಮಾವರ: ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ಹೊಳೆಯಲ್ಲಿ ಮುಳುಗಿ ಮೃತ್ಯು

ಉಡುಪಿ: ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಎಂದು ಗುರುತಿಸಲಾಗಿದೆ. ರಾಜು ಅವರು ನಿನ್ನೆ ಸಂಜೆ ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋಗಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು‌. ಇಂದು ಬೆಳಿಗ್ಗೆ ಸಾಸ್ತಾನ ಕೋಡಿ ಹೊಳೆಯಲ್ಲಿ ಅವರ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು […]