ಉಡುಪಿ: ಯಶಸ್ವಿ ದೂರದರ್ಶನ ಕೇಂದ್ರದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ.

ಉಡುಪಿ: ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಯಶಸ್ವಿ ಇವರು ಬೆಂಗಳೂರು ದೂರದರ್ಶನ ಕೇಂದ್ರದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ. ಇವರು ಉಡುಪಿಯ ಪ್ರತಿಷ್ಠಿತ ನೃತ್ಯ ಸಂಸ್ಥೆ ಶ್ರೀ ಭ್ರಾಮರೀ ನಾಟ್ಯಾಲಯ (ರಿ.) ಅಮ್ಮುಂಜೆ ಇಲ್ಲಿನ ಗುರು ವಿದ್ವಾನ್ ಕೆ. ಭವಾನಿಶಂಕರ್ ಇವರ ಶಿಷ್ಯೆಯಾಗಿದ್ದು, ಪುತ್ತೂರು ಸುಬ್ರಹ್ಮಣ್ಯ ನಗರದ ವಿಜಯ್ ಸನಿಲ್ ಹಾಗೂ ಸುಮ ಸನಿಲ್ ಇವರ ಸುಪುತ್ರಿ. ಪ್ರಸ್ತುತ ಇವರು ಡಾ ಜಿ ಶಂಕರ್ ಕಾಲೇಜು ಸ್ನಾತಕೋತ್ತರ ಹಾಗೂ ಸಂಶೋಧನ ಕೇಂದ್ರ, ಉಡುಪಿ ಇಲ್ಲಿ ಪ್ರಥಮ ವರ್ಷದ ಎಂಕಾಂ […]

ಉಡುಪಿ: ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳ ಅಟ್ಯಾಕ್

ಉಡುಪಿ: ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿದ ಭಯಾನಕ ಘಟನೆ ಉಡುಪಿಯ ಹೂಡೆ ಪರಿಸರದಲ್ಲಿ ನಡೆದಿದೆ.ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನಾಯಿಗಳು ದಾಳಿ ಮಾಡಿವೆ. ಕೈಯಲ್ಲಿ ಕೊಡೆ ಹಿಡಿದು ನಿಂತಿದ್ದ ವಿದ್ಯಾರ್ಥಿನಿಯತ್ತ ಬೀದಿ ನಾಯಿಗಳು ಒಮ್ಮೇಲೆ ನುಗ್ಗಿ ಬಂದಿವೆ. ನಾಲ್ಕೈದು ನಾಯಿಗಳು ಒಮ್ಮೆಲೇ ಅಟ್ಯಾಕ್ ಮಾಡಿದ್ದರಿಂದ ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದಾಳೆ. ಬಳಿಕ ಕೈಯಲ್ಲಿದ್ದ ಕೊಡೆಯನ್ನು ಬೀಸಿ, ನಾಯಿಗಳಿಂದ ರಕ್ಷಿಸಿಕೊಂಡು ಬಚಾವಾಗಿದ್ದಾಳೆ. ವಿದ್ಯಾರ್ಥಿನಿಯ ಮೇಲೆ ನಡೆದ ನಾಯಿ ದಾಳಿಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. […]

ಕುಂದಾಪುರ: ಕೊಳೆತ ಸ್ಥಿತಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಶವ ಪತ್ತೆ

ಉಡುಪಿ: ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ ಎಂಬವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ಕಟ್ಟಡದಲ್ಲಿ ಶವ ಪತ್ತೆಯಾಗಿದೆ. ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಳ್ಳೂರಿನಲ್ಲಿರುವ ತನ್ನ ಮನಗೆ ಹೋಗಿ ಬರುತ್ತಿದ್ದರು. ನಾಗರ ಪಂಚಮಿಯ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್ ಆಚಾರ್ಯ ಅವರು ಫೋನ್ ಮಾಡಿದ್ದರು. ಆಗ ಫೋನ್ […]

ಕುಂದಾಪುರ: ಬಸ್ ಗೆ ಲಾರಿ ಡಿಕ್ಕಿ; ಓರ್ವ ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ

ಉಡುಪಿ: ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಹಿತ ಹಲವು ಮಂದಿ ಗಾಯಗೊಂಡ ಘಟನೆ ಕುಂದಾಪುರ ತಲ್ಲೂರು ಪ್ರವಾಸಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಬಸ್ ಬೈಂದೂರಿಂದ ಕುಂದಾಪುರಕ್ಕೆ ಬರುತ್ತಿತ್ತು. ಅದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ಸಿಲ್ಲಿದ್ದ ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, 7-8 ಮಂದಿ ವಿದ್ಯಾರ್ಥಿಗಳು ಸಹಿತ ಹಲವರಿಗೆ ಗಾಯವಾಗಿದೆ. ಲಾರಿಯ ಚಾಲಕ, ನಿರ್ವಾಹಕ ಕೂಡ ಗಾಯಗೊಂಡಿದ್ದಾರೆ. […]

ಜೀವವಿಜ್ಞಾನದ ಪ್ರಾಧ್ಯಾಪಕರುಗಳು ಮುಂದಿನ ನೂರು ವರ್ಷಗಳ ಮಾನವಕುಲದ ನಿರ್ಮಾತೃಗಳು: ಡಾ ಎಂ ಮೋಹನ ಆಳ್ವ

ಮೂಡುಬಿದಿರೆ: ಜೀವಶಾಸ್ತ್ರದ ಶಿಕ್ಷಕರು ಈ ಕಾಲಕ್ಕನುಗುಣವಾದ ಕೌಶಲ್ಯಗಳನ್ನು ಆಳವಡಿಸಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಯನ್ನು ಪೂರೈಸುವಲ್ಲಿ ಕಾರ‍್ಯಪ್ರವೃತ್ತರಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತ್ರ ಉಪನ್ಯಾಸಕರ ಸಂಘದ ದಶಮಾನೋತ್ಸವದ ಹಿನ್ನಲೆಯಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದ.ಕ ಜಿಲ್ಲಾ ಪದವಿಪೂರ್ವ ಜೀವಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಪ್ರಾಚರ‍್ಯರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ‘’ಬಯೋದಶಕ, ಒಂದು ದಿನದ ಕಾರ‍್ಯಾಗಾರ’’ವನ್ನು ಉದ್ಘಾಟಿಸಿ ಮಾತನಾಡಿದರು. […]