ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ವಿರೋಧಿಸಿ ಮಾನವ ಸರಪಳಿ ರಚಿಸಿ ಪ್ರತಿಭಟನೆ

ಉಡುಪಿ: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಆಕ್ರಮಣವನ್ನು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿ ನಗರದಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಲಾಯಿತು. ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಕಡಿಯಾಲಿಯವರೆಗೆ ರಸ್ತೆ ಬದಿಯಲ್ಲಿ ಮಾನವ ಸರಪಳಿಯನ್ನು ರಚಿಸಿ ಪ್ಲೇ ಕಾರ್ಡುಗಳನ್ನು ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, […]

ಬೈಂದೂರು: ಶಾಸಕ ಗಂಟಿಹೊಳೆಯಿಂದ ತಾಲೂಕು ಕಚೇರಿ ಎದುರು ದಿಢೀರ್ ಅಹೋರಾತ್ರಿ ಧರಣಿ

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಾಸಕರ ಜನತಾ ಕಾರ್ಯಾಲಯಗಳಲ್ಲಿ ಅಧಿಕಾರಿಗಳ ಸಭೆ ಕರೆದರೆ ಅಧಿಕಾರಿಗಳು ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಅಧಿಕಾರಿಗಳ ಅಸಹಕಾರದಿಂದ ಬೇಸತ್ತ ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲೂಕು ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉಪ್ಪುಂದದ ಕಾರ್ಯಕರ್ತ […]

ಮಣಿಪಾಲ: ವ್ಯಕ್ತಿ ನಾಪತ್ತೆ

ಮಣಿಪಾಲ: ಮಣಿಪಾಲದಲ್ಲಿ ಚಪ್ಪಲಿ ಹೊಲಿಯುವ ಕೆಲಸ ಮಾಡಿಕೊಂಡಿದ್ದ ರವಿಕುಮಾರ್‌ (32) ಎಂಬವರು ವಿಪರೀತ ಶರಾಬು ಕುಡಿಯುವ ಚಟವನ್ನು ಹೊಂದಿದ್ದರು. ಅಂಗಡಿಯಲ್ಲಿ ಸರಿಯಾಗಿ ಕೆಲಸ ಮಾಡದೇ ಇದ್ದ ಇವರು ಆ.07 ರಂದು ಬೆಳಿಗ್ಗೆ ಸುಮಾರು 10:00 ಗಂಟೆಗೆ ಅಂಗಡಿಯಿಂದ ಹೋದವರು ಅಂಗಡಿಗೂ ಬಾರದೇ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಕಪ್ಪು ಮೈಬಣ್ಣ, ಕನ್ನಡ, ಹಿಂದಿ ಹಾಗೂ ತಮಿಳು ಭಾಷೆ ಮಾತಾನಾಡುತ್ತಾರೆ. ಬಿಳಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿರುತ್ತಾರೆ. ಈ […]

ಉಡುಪಿ: ಫೇಸ್ ಬುಕ್ ಗೆಳತಿಯನ್ನು ನಂಬಿ 11 ಲಕ್ಷ ರೂ. ಕಳೆದುಕೊಂಡ ಕಾರ್ಕಳದ ಮಹಿಳೆ..!

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು ಫೇಸ್‌ ಬುಕ್‌ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿ 11 ಲಕ್ಷಕ್ಕೂ ಹೆಚ್ಚು ಹಣ ಪಂಗನಾಮ ಹಾಕಿಸಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್‌ ಬುಕ್‌ ಮೂಲಕ ಮಾರ್ಕ್‌ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ […]

ಆ.15ರಂದು ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ನ ಆನ್ ಲೈನ್ ವ್ಯಾಸಂಗ- ಸಮಾಲೋಚನೆ ಕೋರ್ಸ್ ಗಳ ಉದ್ಘಾಟನೆ

ಐಐಟಿ ಮದ್ರಾಸ್ ಪ್ರವರ್ತಕ್ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಐಐಟಿ ಯಂತಹ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಿದ್ದೇನೆ ಎಂದು ಉದ್ಯಮಿ ಡಾ. ಎಚ್.ಎಸ್. ಶೆಟ್ಟಿ ಹೇಳಿದರು. ಉಡುಪಿಯ ಪತ್ರಿಕಾಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ […]