ಕುಡ್ಲದಲ್ಲಿ ವಿಶ್ವ ಕುಂದಾಪ್ರ ದಿನಾಚರಣೆ

ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ವತಿಯಿಂದ ದಿನಾಂಕ: 11/08/2024 ನೇ ಆದಿತ್ಯವಾರದಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಕಾಲೇಜಿನ ವಠಾರದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯು ಅದ್ಧೂರಿಯಾಗಿ ನಡೆಯಿತು. ಕಾರ‍್ಯಕ್ರಮವು ಬೆಳಿಗ್ಗೆ ಗ್ರಾಮೀಣ ಕ್ರೀಡಾ ಚಟುವಟಿಕೆಗಳೊಂದಿಗೆ ಪ್ರಾರಂಭವಾಯಿತು. ರಾಮಕೃಷ್ಣ ಕಾಲೇಜಿನ ಸಂಚಾಲಕರಾದ ಡಾ.ಸಂಜೀವ ರೈ ಇವರು ಬಲೂನು ಹಾರಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ನಿಂಬೆ ಹಣ್ಣಿನ ಓಟ, ಮೂರು ಕಾಲಿನ ಓಟ, ಗೋಣಿಚೀಲದ ಓಟ, ಗೂಟ ಸುತ್ತಿ ಓಡುವುದು, ಹಗ್ಗಜಗ್ಗಾಟದ ಮುಂತಾದ ಕ್ರೀಡಾ ಚಟುವಟಿಕೆಗಳ ಜೊತೆಗೆ […]

ಸುರತ್ಕಲ್: ಉದ್ಯಮಿ ಹೇಮಂತ್ ಕುಮಾರ್ ನಿಧನ

ಸುರತ್ಕಲ್: ಉದ್ಯಮಿ ಹೇಮಂತ್ ಕುಮಾರ್(56) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಸುರತ್ಕಲ್’ನ ಕಡಂಬೋಡಿ ನಿವಾಸಿಯಾಗಿದ್ದ ಇವರು ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಹಾಲಿ ಬ್ಲಾಕ್‌ ಕಾಂಗ್ರೆಸ್ ಉಪಾ ಧ್ಯಕ್ಷ, ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಉಪ್ಪಿನಂಗಡಿಯಲ್ಲಿ ಎಲೆಕ್ನಿಕಲ್‌ ಡಿಪ್ಲೋಮವರೆಗೆ ಶಿಕ್ಷಣ ಪೂರೈಸಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟಿಕಲ್ ಉದ್ಯಮ ನಡೆಸಿದ್ದರು. ಕೆಎಸ್‌ಐ ಮಾಜಿ ಕೋಶಾಧಿಕಾರಿ, ಕೆಐಎ ಆಡಳಿತ ಸಮಿತಿ ಸದಸ್ಯರಾಗಿದ್ದರು. ಅವರು ಅವಿವಾಹಿತರಾಗಿದ್ದು ತಾಯಿ, ಮೂವರು ಸಹೋದರರು, ಇಬ್ಬರು ಸಹೋದರಿ […]

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತೀಕಾರ; ರೌಡಿಶೀಟರ್ ಕಡಪ್ಪರ ಸಮೀರ್‌ನ ಬರ್ಬರ ಹತ್ಯೆ.

ಮಂಗಳೂರು: ಉಳ್ಳಾಲದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣ ಆರೋಪ ಹೊತ್ತು ನ್ಯಾಯಾಲಯದಿಂದ ಖುಲಾಸೆಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್‌ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿ ಕೊಲೆಗೈದ ಘಟನೆ ನಗರದ ಹೊರವಲಯದ ಕಲ್ಲಾಪುನಲ್ಲಿ ನಡೆದಿದೆ. ತನ್ನ ತಾಯಿ ಜೊತೆ ಹೊಟೇಲ್‌ಗೆ ಕಾರಿನಲ್ಲಿ ಬಂದಿದ್ದ ಸಮೀರ್‌ನನ್ನು ದುಷ್ಕರ್ಮಿಗಳ ತಂಡ ಕಾರಿನಲ್ಲಿ ಹಿಂಬಾಲಿಸುತ್ತಾ ಬಂದಿತ್ತು ಎನ್ನಲಾಗಿದೆ. ಸಮೀರ್ ಹೊಟೇಲ್ ಮುಂದೆ ಕಾರಿನಿಂದ ಇಳಿಯುತ್ತಿದ್ದಂತೆ ತಂಡ ಮಾರಕಾಯುಧಗಳಿಂದ ಹಲ್ಲೆ ನಡೆಸಿತ್ತು. ಅಪಾಯ ಅರಿತ ಸಮೀರ್ ಓಡಿ ಬಚಾವಾಗಲು ಯತ್ನಿಸಿದ್ದು, ತಂಡ ಸುಮಾರು 500 ಮೀಟರ್ ವರೆಗೆ […]

ಉಡುಪಿ: ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ

ಉಡುಪಿ: ಶ್ರೀ ಶಿರೂರುಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಬಹು ವೈಭವದಿಂದ ಜರಗಿತು. ಶ್ರೀಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು. ಪ್ರಾತಃಕಾಲದಲ್ಲಿ ಶ್ರೀರಾಘವೇಂದ್ರ ಗುರುಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪವಮಾನ ಕಲಶಾಭಿಷೇಕ ಹೋಮ ಹಾಗೂ ವಿರಜಾ ಹೋಮವನ್ನು ವೇದಮೂರ್ತಿ ಶ್ರೀನಟರಾಜ ಉಪಾಧ್ಯಾಯ ಹಾಗೂ ವೇದಮೂರ್ತಿ ಶ್ರೀಗಣೇಶ ನಡೆಸಿಕೊಟ್ಟರು. ತದನಂತರ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ಪಂಚಾಮೃತಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ […]

ಸೇವೆಯಿಂದ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ: ಡಾ. ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ: ಸೇವೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅಂಬಾಗಿಲು ಕಕ್ಕುಂಜೆ ಸಮೀಪದ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಕ್ರೈಸ್ತ ಸಮುದಾಯದ ಸೇವೆಯನ್ನು ಎಲ್ಲಾ ವ್ಯಕ್ತಿಗಳು ಗುರುತಿಸುತ್ತಾರೆ. ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಹಾಗೂ ಸಾಮಾಜಿಕ ಸೇವೆ ಸಂಘಟನೆಗಳಲ್ಲಿ ಚುನಾಯಿತರಾದವರು ದೀನದಲಿತರ ಹಿಂದುಳಿದವರ ನೋವುಗಳಿಗೆ […]