ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲ ಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ […]
ಹೆಚ್.ಐ.ವಿ ರೋಗದ ಹರಡುವಿಕೆಯ ಅರಿವು ಹೊಂದಿ ಇದರಿಂದ ಮುಕ್ತರಾಗಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಏಡ್ಸ್ ರೋಗ ಹರಡುವಿಕೆ, ಅವುಗಳ ಲಕ್ಷಣಗಳ ಬಗ್ಗೆ ಅರಿವು ಹೊಂದಿ ಎಚ್ಚರವಹಿಸಿದಾಗ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ, ಲಯನ್ಸ್ ಕ್ಲಬ್ ಉಡುಪಿ […]
ಮಾದಕ ವಸ್ತುಗಳ ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಮಾದಕ ವಸ್ತುಗಳ ದುಶ್ಚಟದಿಂದ ದೂರವಿದ್ದಾಗ ಮಾತ್ರ ಯುವಜನರು ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ ಕ್ರಾಸ್, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಯುವ ಸಬಲೀಕರಣ […]
ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ.
ಹೆಬ್ರಿ: ಕಳೆದ ಹತ್ತು ವರ್ಷಗಳಿಂದ ಪಠ್ಯದ ಜತೆ ಪಟ್ಟಿಯ ತರ ಚಟುವಟಿಕೆಗಳಿಗೆ ತರಬೇತಿ ನೀಡಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ನಿರಂತರವಾಗಿ ವೇದಿಕೆ ಕಲ್ಪಿಸುತ್ತಿರುದು ಶ್ಲಾಘನೀಯ ಎಂದು ಮುದ್ರಾಡಿ ನೇತಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಸಂತೋಷ್ ಪೂಜಾರಿ ಬಲ್ಲಾಡಿ ಹೇಳಿದರು. ಅವರು ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಹೆಬ್ರಿಯ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ನಡೆದ 8ನೇ ವರ್ಷದ […]
ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮ.
ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 12 ಆಗಸ್ಟ್ 2024 ರಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ‘ನಶಾಮುಕ್ತ ಭಾರತ ಅಭಿಯಾನ’ 5ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಾದಕ ವ್ಯಸನವು ವ್ಯಸನಿ, ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ, ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. […]