ಉಡುಪಿ ನಗರಸಭೆ ಚುನಾವಣೆ :ಪರಿಷ್ಕೃತ ಚುನಾವಣಾ ಅಧಿಕಾರಿಗಳ ನೇಮಕ
ಉಡುಪಿ: ಉಡುಪಿ ನಗರಸಭೆಯ ಅಧ್ಯಕ್ಷಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ),ಚುನಾವಣಾ ಅಧಿಕಾರಿಯಾಗಿ ಕುಂದಾಪುರ ಉಪವಿಭಾಗದ ಸಹಾಯಕ ಕಮೀಷನರ್ ಮಹೇಶ್‌ಚಂದ್ರ ಅವರನ್ನು ನೇಮಿಸಲಾಗಿದ್ದು, ನೇಮಕಗೊಂಡ ಅಧಿಕಾರಿಗಳು ಕರ್ನಾಟಕಪೌರಸಭೆ ನಿಯಮ 1965 ರ ನಿಯಮ 01 ರಿಂದ 18 ರ ವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ರಾಜ್ಯ ಕಾಡುಗೊಲ್ಲಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು),ಗಂಗಾ ಕಲ್ಯಾಣ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶಿ ವ್ಯಾಸಾಂಗ ಯೋಜನೆಯ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸೇವಾಸಿಂಧುಪೋರ್ಟಲ್ ನಲ್ಲಿ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ […]
ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಅಲೆಮಾರಿ ಮತ್ತುಅರೆಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು – ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗಸಾಲ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ […]
ಮಳೆಯಿಂದ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್‌ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಿ :ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್
ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಮುಂಗಾರು ಮಳೆಯು ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ. 41 ರಷ್ಟು ಹೆಚ್ಚುವರಿ ಮಳೆ ಉಂಟಾಗಿ […]
ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮಂಗಳೂರಿನ ಯುವಕ ಮೃತ್ಯು; ಎಸಿ ಟೆಕ್ನಿಷಿಯನ್’ಆಗಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ನಡೆದ ದುರ್ಘಟನೆ.
ಮಂಗಳೂರು: ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ. ಅಬುಧಾಬಿಯಲ್ಲಿ ಎ.ಸಿ ಟೆಕ್ನೀಷಿಯನ್ ಆಗಿ ಕೆಲಸಮಾಡುತ್ತಿದ್ದ ನೌಫಲ್ ಕಟ್ಟಡವೊಂದರಲ್ಲಿ ಕೆಲಸ ಮಾಡುವಾಗ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.