ಮಂಗಳೂರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಸೈನಿಕರ ಹೋರಾಟವನ್ನು ಗೌರವಿಸಬೇಕು ಮತ್ತು ತಮ್ಮ ಜೀವನದಲ್ಲಿ ಸ್ವಯಂ ಶಿಸ್ತುನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ತಿನ ಮಾಜಿ ಸದಸ್ಯರು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಹೇಳಿದರು. ದೇಶಕ್ಕಾಗಿ ಹೋರಾಟದಲ್ಲಿ ಪಾಲ್ಗೊಂಡ ಸೈನಿಕ ರಂಗಪ್ಪ ಅವರ ಯಶೋಗಾಥೆಯನ್ನು ವಿದ್ಯಾರ್ಥಿಗಳಿಗೆ ವಿವರಿಸುತ್ತ ಭಾರತೀಯರಾದ ನಾವು ದೇಶದ ಕಾನೂನನ್ನು ಗೌರವಿಸುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು. ನಮಗೆ ದೇಶ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾನು ದೇಶಕ್ಕೆ ಏನು ಕೊಟ್ಟಿದ್ದೇನೆ ಎನ್ನುವುದನ್ನು ನಾವು ವಿಮರ್ಶಿಸಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನು ಸಾಧಿಸಲು […]

ಉಡುಪಿ: ಆ.20ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.

ಉಡುಪಿ: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊ೦ಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳ೦ತೆ 18 ವರ್ಷ ತುಂಬುವ ಯುವ ಮತದಾರರ ಹೆಸರು […]

ಉಡುಪಿ: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ: ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಬೇದಾರ್ ಮೇಜರ್ ಗೌರವ ಲೆಫ್ಟಿನೆಂಟ್(ನಿವೃತ್ತ) ಶ್ರೀ ಗಣೇಶ್ ಅಡಿಗ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸಶಸ್ತ್ರ ಪಡೆಗಳ ತ್ಯಾಗ ಮತ್ತು ರಾಷ್ಟ್ರೀಯ ಐಕ್ಯತೆಯ ಮಹತ್ವದ ಬಗ್ಗೆ ತಿಳಿಸಿದರು. ಭಾರತೀಯ ಸೇನೆಯಲ್ಲಿರುವ ವಿವಿಧ ಉದ್ಯೋಗಾವಕಾಶಗಳ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲರು ಅವರು ಮಾತನಾಡಿ ದೇಶದ ಬಗ್ಗೆ ಎಲ್ಲರೂ ಅಭಿಮಾನ […]

ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ: ತಾ 15.08.2024ರಂದು ಮಧ್ಯಾಹ್ನ ಇಂಚರ ಸರ್ಜಿಕಲ್ ಕ್ಲಿನಿಕ್ ಉಡುಪಿಯ ಇಂದಿರ ಚಂದಿರ ಸಭಾಭವನ ದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯ ಬಹುಮಾನ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಕಿಟ್ ನೀಡುವ ಕಾರ್ಯಕ್ರಮವು ಜರಗಿತು. ಪೂರ್ವಭಾವಿಯಾಗಿ ವಾರದ ಹಿಂದೆ 9, 10, 11, 12ನೇ ತರಗತಿಯ ಹಾಗೂ ತತ್ಸಮಾನ ಇತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ “ಭಾರತಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಭಗತ್ ಸಿಂಗ್ ಹಾಗೂ ಚಂದ್ರಶೇಖರ್ ಆಜಾದ್ ಇತ್ಯಾದಿ ಕ್ರಾಂತಿವೀರರ ಪಾತ್ರ” ಎಂಬ ವಿಷಯದ […]

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನಿಂದ 78ನೇ ಸ್ವಾತಂತ್ರ್ಯ ದಿನಾಚರಣೆ.

ಉಡುಪಿ: ನಮ್ಮ ಜನ್ಮ ಭೂಮಿ ಭಾರತ ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ ಜಿಲ್ಲಾಯುವ ಬ್ರಾಹ್ಮಣ ಪರಿಷತ್ತಿನಿಂದ ಬ್ರಾಹ್ಮಿ ಸಭಾಭವನದಲ್ಲಿ ಆ.15 ರಂದು ಮುಂಜಾನೆ ಅದ್ದೂರಿಯಿಂದ ನಡೆಯಿತು. ಸುಮಾರು 20 ವರ್ಷಗಳ ಕಾಲ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ ತಾಯಿನಾಡಿಗಾಗಿ ಹೋರಾಡಿದ ಯೋಧ ಶ್ರೀಪತಿ ಭಟ್ ರವರು ಧ್ವಜಾರೋಹಣವನ್ನು ಮಾಡಿ ತಮ್ಮ ಅನುಭವವನ್ನು ಹಂಚಿಕೊಂಡರು. ಪಾಕಿಸ್ತಾನದ ಗಡಿ ಭಾಗದಲ್ಲಿ, ಹಿಮ ಪರ್ವತದ , ನೆರೆ ಪೀಡಿತ, ಪಾಕೃತಿಕ ವಿಕೋಪಗಳಿಗೆ ತುತ್ತಾದ ಪ್ರದೇಶಗಳಲ್ಲಿ ಬುಲ್ಡೋಜರ್ ಇತ್ಯಾದಿ ಯಂತ್ರಗಳನ್ನು […]