ಜಮ್ಮುವಿನಲ್ಲಿ ವೇದ ಪಾಠಶಾಲೆ ಪ್ರಾರಂಭ
ಜಮ್ಮು ಮತ್ತು ಕಾಶ್ಮೀರದಲ್ಲಿ ನಶಿಸುತ್ತಿರುವ ಪ್ರಾಚೀನ ಸನಾತನ ಧರ್ಮದ ಸಂರಕ್ಷಣೆಗಾಗಿ ಮೊದಲ ಹೆಜ್ಜೆಯಾಗಿ ಮಹಾದೇವ ಸಂಸ್ಕೃತ ವೇದಾಗಮ ಪಾಠಶಾಲೆಯನ್ನು ಉದ್ಘಾಟಿಸಲಾಯಿತು. ಜಮ್ಮುವಿನ ಹೃದಯ ಭಾಗದಲ್ಲಿರುವ ಅತ್ಯಂತ ಪ್ರಾಚೀನವಾದ ಪಂಚವಕ್ತ್ರ ಮಹಾದೇವ ಮಂದಿರದಲ್ಲಿ ವೇದ ಪಾಠಶಾಲೆಯ ಮತ್ತು ಶ್ರಾವಣ ಮಾಸದ ಭಜನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ಸಹಯೋಗದಲ್ಲಿ ಶುಕ್ಲ ಕಾಣ್ವಶಾಖೆಯ ವೇದ, ಕರ್ಮಕಾಂಡದಲ್ಲಿ ಆಗಮಾಧ್ಯಯನ, ಸಂಸ್ಕೃತ-ಭಗವದ್ಗೀತಾ ಅಧ್ಯಯನದ ಒಟ್ಟು ಏಳು ವರ್ಷಗಳ ಶಿಕ್ಷಣದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪಾಠಶಾಲೆಯ ಉದ್ಘಾಟನಾ […]
ಉಡುಪಿ: ಸುನಾಗ್ ಆಸ್ಪತ್ರೆಯ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ.
ಉಡುಪಿ: ಸುನಾಗ್ ಆಸ್ಪತ್ರೆಯ ವತಿಯಿಂದ 78ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ವೈದ್ಯಾಧಿಕಾರಿ ಹಾಗೂ ನಿರ್ದೇಶಕರಾದ ಡಾ.ನರೇಂದ್ರ ಕುಮಾರ್ ಹೆಚ್. ಎಸ್ ಹಾಗೂ ಡಾ.ವೀಣಾ ನರೇಂದ್ರ ಇವರ ಅದ್ಯಕ್ಷತೆಯಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಆಸ್ಪತ್ರೆಯ ಲೆಕ್ಕ ಪರಿಶೋಧಕರಾದ ಶ್ರೀಮತಿ ಕವಿತಾ ಎಂ.ಪೈ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸುನಾಗ್ ಆಸ್ಪತ್ರೆಯ ತನ್ನ 6 ವರ್ಷಗಳ ಸಾರ್ವಜನಿಕ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ ವೈದ್ಯಾಧಿಕಾರಿಯಾದ ಡಾ.ನರೇಂದ್ರ ಕುಮಾರ್ ಹೆಚ್.ಎಸ್ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ ಹಿತವಚನವನ್ನು ನೀಡಿದರು. ಆಸ್ಪತ್ರೆಯ ವೈದ್ಯಾಧಿಕಾರಿಯಾದ […]
ಉಡುಪಿ: ಉಪ್ಪೂರು ಸಹಕಾರಿ ಸಂಘಕ್ಕೆ ‘ರಾಜ್ಯ ಅಪೆಕ್ಸ್ ಬ್ಯಾಂಕ್’ ಪ್ರಶಸ್ತಿ.
ಉಡುಪಿ: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಇವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ನೀಡುತ್ತಿರುವ ‘ರಾಜ್ಯ ಅಪೆಕ್ಸ್ ಪ್ರಶಸ್ತಿಗೆ’ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಆಯ್ಕೆಯಾಗಿದ್ದು, ಸಂಘವನ್ನು ಅಭಿನಂದಿಸುತ್ತಾ, ಆ.14ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಮಹಾಸಭೆಯಲ್ಲಿ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಎನ್.ರಮೇಶ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭದ […]
ಹೆಬ್ರಿ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಚಾಣಕ್ಯ ಕರಾಟೆ ತರಬೇತಿ ಕೇಂದ್ರದ ಆರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ.
ಹೆಬ್ರಿ: ಶಿವಮೊಗ್ಗದ ಇಂಡೋ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಕುಬುಡೊ ಬುಡೋಕಾನ್ ಕರಾಟೆ ಡೋ ಅಸೋಸಿಯೇಶನ್ ಕರ್ನಾಟಕ (ರಿ.) ಸಂಸ್ಥೆ ಹಾಗೂ ಚಾಣಕ್ಯ ಕರಾಟೆ ತರಬೇತಿ ಕೇಂದ್ರದ ವಿದ್ಯಾರ್ಥಿಯರಾದ ಶತ್ರುಘ್ನ ಶೆಟ್ಟಿ ಸೀತಾನದಿ ,ಟೆಸ್ಲಿಟ್, ರಚಿತಾ ಕುಲಾಲ್ ಕಬ್ಬಿನಾಲೆ, ಕ್ರಿಸ್ಟಿನಾ ಟ್ಯಾಲೀಯ, ಟಿಯೋನ್ ಅವರು ಕಟಾ ವಿಭಾಗದಲ್ಲಿ ಟ್ರೋಫಿಯೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ಭಾರತದ ವಿದ್ಯಾರ್ಥಿಗಳು ಮಾತ್ರವಲ್ಲದೆ ಶ್ರೀಲಂಕಾ, ಭೂತಾನ್, ನೇಪಾಳ, ಬಾಂಗ್ಲಾದೇಶ, ದುಬೈ ರಾಷ್ಟ್ರದ ವಿದ್ಯಾರ್ಥಿಗಳು ಭಾಗವಹಿಸಿದ್ದು ಗ್ರಾಮೀಣ ಪ್ರದೇಶವಾದ ಹೆಬ್ರಿಯ […]
ಉಡುಪಿ: ಯುವ ವಿಚಾರ ವೇದಿಕೆ (ರಿ.) ಉಪ್ಪೂರು, ಕೊಳಲಗಿರಿ – 78ನೇ ಸ್ವಾತಂತ್ಯೋತ್ಸವ ಆಚರಣೆ
ಉಡುಪಿ: ಯುವ ವಿಚಾರ ವೇದಿಕೆ (ರಿ.) ಉಪ್ಪೂರು ಕೊಳಲಗಿರಿ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಜಾತಬೆಟ್ಟು ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರೂ ಹಾಗು ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಜಯಪ್ರಕಾಶ್ ರವರು ನೆರವೇರಿಸಿದರು. ಸಭಾಕಾರ್ಯಕ್ರಮದಲ್ಲಿ ಉಧ್ಯಮಿ ಗಣೇಶ್ ಪೂಜಾರಿ, ಉಪ್ಪೂರು ವ್ಯ.ಸೇ.ಸ. ಸಂಘದ ನಿರ್ದೇಶಕರಾದ ಶ್ರೀ ರಮೇಶ್ ಕರ್ಕೇರಾ, ನಿವೃತ್ತ ಬ್ಯಾಂಕ್ ಉದ್ಯಮಿ ಪ್ರಭಾಕರ್, ಯುವ ಉದ್ಯಮಿ ಸಂದೀಪ್ ನಾಯಕ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಸಲಾದ ವಿವಿಧ ಮನೋರಂಜನಾ ಕ್ರೀಡೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ರೀಡಾ ಕಾರ್ಯದರ್ಶಿ […]