ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ
ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂಬ […]
ವಿದ್ವತ್ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ.
ಬೆಳ್ತಂಗಡಿ: ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಆಡಳಿತಾಧಿಕಾರಿಗಳಾದ ಶ್ರೀ ಚಂದ್ರಶೇಖರ ಗೌಡ ರವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ನಂತರ ವಿದ್ವತ್ ಪಿಯು ಕಾಲೇಜಿನ ತನ್ನ ಪ್ರಪ್ರಥಮಸ್ವಾತಂತ್ರ್ಯ ದಿನಾಚರಣೆಯನ್ನ ಸ್ಮರಣೀಯ ಮಾಡಲು “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಜಗತ್ತಿನ […]
ಬೈಂದೂರು : 78 ನೇ ಸ್ವಾತಂತ್ರ್ಯೋತ್ಸವ ಮತ್ತು ಹಿರಿಯ ನಾಗರಿಕರ ಪುನಃಶ್ಚೇತನ ಕಾರ್ಯಾಗಾರ.
ಹಿರಿಯ ನಾಗರಿಕರ ವೇದಿಕೆ ಬೈಂದೂರು ಮತ್ತು ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಬೈಂದೂರು ತಾಲೋಕು ಘಟಕ ಇವರ ಜಂಟಿ ಆಶ್ರಯದೊಂದಿಗೆ ಬೈಂದೂರು ಶ್ರೀ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಹಿರಿಯ ಸದಸ್ಯರು ನಿವೃತ್ತ ಮುಖ್ಯೋಪಾಧ್ಯಾಯರೂ ಆದ ಶ್ರೀ ಡಿ.ಶೇಷಗಿರಿಯವರು ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಸರಕಾರಿನೌಕರರ ಸಂಘದ ಅಧ್ಯಕ್ಷ ಶ್ರೀ ಐ. ನಾರಾಯಣ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು.ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಶ್ರೀ ಕೆ.ಪುಂಡಲೀಕ ನಾಯಕ್ […]
ಟೋಲ್ ಗೇಟ್ ರದ್ದತಿಗೆ ಕ್ರಮ: ಲಕ್ಷ್ಮೀ ಹೆಬ್ಬಾಳಕರ್ ಭರವಸೆ
ಉಡುಪಿ: ಪಡುಬಿದ್ರಿ-ಬೆಳ್ಮಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು ಸರಿಯಲ್ಲ. ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ […]