ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಕೊಲೆ ಪ್ರಕರಣ: ಉಡುಪಿ ಜಿಲ್ಲೆಯಾದ್ಯಂತ 650ಕ್ಕೂ ಅಧಿಕ ವೈದ್ಯರಿಂದ ಮುಷ್ಕರ

ಉಡುಪಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ವಿರೋಧಿಸಿ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯ ಕರೆಯಂತೆ ಉಡುಪಿ ಜಿಲ್ಲೆಯಾದ್ಯಂತ ವೈದ್ಯರು ಇಂದು ಬೆಳಿಗ್ಗೆ 6ಗಂಟೆಯಿಂದ ತುರ್ತು ಚಿಕಿತ್ಸೆ ಹೊರತುಪಡಿಸಿ ತಮ್ಮ ಕ್ಲಿನಿಕ್ ಹಾಗೂ ಆಸ್ಪತ್ರೆಗಳನ್ನು ಮುಚ್ಚಿ ಮುಷ್ಕರ ನಡೆಸಿದರು. ಕೊಲ್ಕತ್ತಾ ಘಟನೆಯನ್ನು ಖಂಡಿಸಿ ಐಎಂಎ ಉಡುಪಿ ಕರಾವಳಿ ಶಾಖೆಯ ವ್ಯಾಪ್ತಿಯ ಸುಮಾರು 260 ಮಂದಿ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಆ.17ರ ಬೆಳಗ್ಗೆ 6ಗಂಟೆಯಿಂದ 18ರ ರವಿವಾರ ಬೆಳಗ್ಗೆ 6ಗಂಟೆಯವರೆಗೆ […]
ವಿದ್ಯಾರ್ಥಿನಿ ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ.

ಕುಂದಾಪುರ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನಾರಾಯಣ ಗುರುಗಳ ತತ್ವ ಹಾಗೂ ಜೀವನ ಚರಿತ್ರೆ’ ಈ ವಿಷಯದ ಕುರಿತು ನಡೆದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ರಕ್ಷಿತಾ ಭಟ್ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು […]
ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ,ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ […]
ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಡಿವಾಳ ಮಾಚೀದೇವಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗಸಾಲ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ […]
ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತಸಾಲಿನಲ್ಲಿ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೈಯಕ್ತಿಕ ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿಪತ್ರ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, ನಿಗಧಿತ ಮೊತ್ತದ ಛಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿಯಲ್ಲಿ ಆಗಸ್ಟ್ 20 ರ ಒಳಗಾಗಿಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಬೇಲರ್ ಅನ್ನು ಕಡ್ಡಾಯವಾಗಿ ಖರೀದಿಸಬೇಕು. ಇವುಗಳೊಂದಿಗೆ […]