ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಟ್ಟು, ತನಿಖೆ ಎದುರಿಸಲಿ: ವಿ. ಸುನೀಲ್ ಕುಮಾರ್

ಉಡುಪಿ: ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅವಕಾಶ ಕೊಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣ ರಾಜೀನಾಮೆ ಕೊಟ್ಟು, ತನಿಖೆಯನ್ನು ಎದುರಿಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅಧಿಕಾರದಲ್ಲಿ ಇರಬಾರದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಭಂಡತನವನ್ನು ದೂರ ಮಾಡಬೇಕು. ನೈತಿಕತೆಯ ಸಿದ್ಧಾಂತ ಹೇಳುವ ಅವರು, ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.ಮೂಡ ಹಗರಣ ಸಂಬಂಧಪಟ್ಟಂತೆ ಮೂರು ಮಂದಿ ಖಾಸಗಿ ವ್ಯಕ್ತಿಗಳು ದೂರು […]

ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವ: ಆಕರ್ಷಕ ಸಾಂಪ್ರದಾಯಿಕ ಸ್ಪರ್ಧೆ

ಉಡುಪಿ: ಉಡುಪಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದಲ್ಲಿ ವಿವಿಧ ಆಕರ್ಷಕ ಸಾಂಪ್ರದಾಯಿಕ ಸ್ಪರ್ಧೆಗಳನ್ನು ಆ.27ರಂದು ಸಂಜೆ 4ಗಂಟೆಗೆ ರಾಜಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲಿವೇಷ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ ಪ್ರಥಮ 1.15ಲಕ್ಷ ರೂ. ವೌಲ್ಯದ ಟಿವಿಎಸ್ ಎಲೆಕ್ಟ್ರಿಕಲ್ ಸ್ಕೂಟರ್, ದ್ವಿತೀಯ 50ಸಾವಿರ ರೂ., ತೃತೀಯ 25ಸಾವಿರ ರೂ., ಜಾನಪದ ವೇಷ ಸ್ಪರ್ಧೆಯಲ್ಲಿ ಪ್ರಥಮ 25ಸಾವಿರ […]

ಬ್ರಹ್ಮಾವರ: ಅಂಗಡಿ ಮಾರಾಟಕ್ಕಿದೆ

ಬ್ರಹ್ಮಾವರ: ಬ್ರಹ್ಮಾವರ ಬಸ್ ಸ್ಟ್ಯಾಂಡ್ ಬಳಿ ಬಾರ್ನ್ಸ್ ಪ್ಲಾಜಾದ ಗ್ರೌಂಡ್ ಫ್ಲೋರಿನಲ್ಲಿ 385 ಚದರ ಅಡಿಗಳ ಅಂಗಡಿ ಮಾರಾಟಕ್ಕಿದೆ. ಹಾಗೂ ವಾಶ್ ರೂಂ ಸೌಲಭ್ಯ ಹೊಂದಿದೆ.ಮೊ: 8197815875

ಉಡುಪಿ ಎಪಿಎಂಸಿ ನಿವೇಶನ ಮಾರಾಟದ ವಿರುದ್ಧ ವರ್ತಕರ ಪ್ರತಿಭಟನೆ

ಉಡುಪಿ: ಉಡುಪಿ ಎಪಿಎಂಸಿ ಪ್ರಾಂಗಣದಲ್ಲಿ ನಿವೇಶನ ಮಾರಾಟಕ್ಕೆ ಸಂಬಂಧಿಸಿ ಸರ್ವೇ ನಡೆಸಲು ಮುಂದಾದ ಅಧಿಕಾರಿಗಳ ಕ್ರಮವನ್ನು ಖಂಡಿಸಿ ವರ್ತಕರು ಇಂದು ಕಪ್ಪು ಬಾವುಟ ಪ್ರದರ್ಶಿಸಿ ಉರುಳು ಸೇವೆ ನಡೆಸಿ ಪ್ರತಿಭಟಿಸಿದರು. ಎಪಿಎಂಸಿ ಪ್ರಾಂಗಣದಲ್ಲಿ ವರ್ತಕರು ಕಪ್ಪು ಬಾವುಟ ಪ್ರದರ್ಶಿಸಿ ಉರುಳು ಸೇವೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಕೆಲವು ವರ್ತಕರು ತೀವ್ರ ಅಸ್ವಸ್ಥಗೊಂಡಿದ್ದು ಕೂಡಲೇ ಆಂಬುಲೆನ್ಸ್ ಮೂಲಕ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಪಿಎಂಸಿ ಗೆ ಸಂಬಂಧಿಸಿದ ನಿವೇಶನವನ್ನು 11 ಮಂದಿಗೆ ಲೀಸ್ […]

ತ್ರಿಶಾ ಕ್ಲಾಸಸ್ : ಸಿಎ ಫೌಂಡೇಶನ್ ಮಾಹಿತಿ ಕಾರ್ಯಾಗಾರ

ಕಟಪಾಡಿ: ಯಶಸ್ವಿಯಾಗಿ 26ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ತ್ರಿಶಾ ಸಂಸ್ಥೆಯು ಸಿ ಎ , ಸಿಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿದ್ದು ಇದುವರೆಗೂ ಸುಮಾರು 75,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗವನ್ನು ಮುಗಿಸಿದ್ದಾರೆ. ಸಿಎ ಫೌಂಡೇಶನ್ ಮಾಹಿತಿ ಕಾರ್ಯಾಗಾರವು ಆಗಸ್ಟ್ 20ರಂದು ಪೂರ್ವಾಹ್ನ 9 ಗಂಟೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಲಿದೆ. ತರಗತಿಯ ವಿಶೇಷತೆಗಳು : ಸಿ ಎ, ಸಿ ಎಸ್ ಪರೀಕ್ಷೆಗಳು ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಪರೀಕ್ಷೆಗಳಾಗಿದ್ದು ತ್ರಿಶಾ […]