ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ

ಉಡುಪಿ: ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಕಾಣಿಕೆ ಡಬ್ಬಿಯಲ್ಲಿದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾನೆ. ಕಳ್ಳತನದ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲ ತಿಂಗಳ ಹಿಂದಷ್ಟೇ 7 ಕೋಟಿ ವೆಚ್ಚದಲ್ಲಿ ದೇವಸ್ಥಾನ ಜೀರ್ಣೋದ್ದಾರಗೊಂಡಿತ್ತು. ಬಾಗಿಲ ಚಿಲಕದ ಸ್ಕ್ರೂ ತೆಗೆದು ಸುತ್ತು ಪೌಳಿ ಪ್ರವೇಶಿಸಿದ ಕಳ್ಳ, ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಿದ ಸುಮಾರು 40 ಸಾವಿರಕ್ಕೂ ಅಧಿಕ ಹಣವನ್ನು ಎಗರಿಸಿದ್ದಾನೆ. ಚಪ್ಪಲಿ ಹಾಕಿಕೊಂಡೆ ಕೈ ಮುಗಿದು ಬಳಿಕ ಕಳ್ಳತನ ಕೃತ್ಯ […]
ರಾಷ್ಟ್ರೀಯ ಮಟ್ಟದ ಭರತನಾಟ್ಯ “ವರ್ಣ ಸ್ಪರ್ಧೆ”: ಉಡುಪಿಯ ಪಿ ಜಿ ಪನ್ನಗಾ ರಾವ್ ಸೀನಿಯರ್’ನಲ್ಲಿ ಪ್ರಥಮ ಹಾಗೂ ಸಾನ್ವಿ ರಾಜೇಶ್ ಜೂನಿಯರ್’ನಲ್ಲಿ ತೃತೀಯ ಸ್ಥಾನ.

ಉಡುಪಿ: ಕಳೆದ ಗುರುವಾರ ಬೆಂಗಳೂರು ಕಲಾಗ್ರಾಮದಲ್ಲಿ ಚಲನಚಿತ್ರತಾರೆ ಭಾವನಾ ರಾಮಣ್ಣ ಹಾಗೂ ಚಾರುಮತಿಯವರು ತಮ್ಮ ಹೂವು ಫೌಂಡೇಶನ್ ಫಾರ್ ಆರ್ಟ್ಸ್ ಮುಖಾಂತರ ನಡೆಸಿದ ರಾಷ್ಟ್ರೀಯ ಮಟ್ಟದ ಭರತನಾಟ್ಯ “ವರ್ಣ ಸ್ಪರ್ಧೆ”ಯಲ್ಲಿ ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ನಿರ್ದೇಶಕಿ ಡಾ.ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯೆಯರಾದ ಪಿ ಜಿ ಪನ್ನಗಾ ರಾವ್ ಸೀನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರೂ.1,00,000 ಬಹುಮಾನ ರೂಪದಲ್ಲಿ ಪಡೆದುಕೊಂಡಿದ್ದು, ಸಾನ್ವಿ ರಾಜೇಶ್ ಜೂನಿಯರ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ರೂ.30,000 ಬಹುಮಾನ […]
ಉಡುಪಿ: ಗಾಂಧಿ ಆಸ್ಪತ್ರೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ.

ಉಡುಪಿ: ಗಾಂಧಿ ಆಸ್ಪತ್ರೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲೆಯ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಧ್ವಜಾರೋಹಣ ಗೈದು ಸ್ವಾತಂತ್ರ್ಯೋತ್ಸವದ ಮಹತ್ವ, ದೇಶದ ಸಂಸ್ಕೃತಿಯ ಬಗ್ಗೆ ಮತ್ತು ಗಾಂಧಿ ಆಸ್ಪತ್ರೆಯ ಸಾಮಾಜಿಕ ಕಳಕಳಿಯ ಕಾರ್ಯಕ್ರಮವು ಎಲ್ಲರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಸ್ವಾತಂತ್ರ್ಯೋತ್ಸವದ 78ನೇ ಆಚರಣೆಯ ಅಂಗವಾಗಿ ಉಡುಪಿ ನಗರ ಸಭೆಯ ಪೌರ ಕಾರ್ಮಿಕರಾದ ವಿಶಾಲಕ್ಷಿ, ಚಿದಾನಂದ, ಸುನೀಲ್, ನಿತೇಶ್, ಮತ್ತು ತಿಪ್ಪೇಶ್ ಹಾಗೂ ತ್ಯಾಜ್ಯ ವಿಲೇವಾರಿ ಮಾಡುವ ಸಿಬ್ಬಂದಿಗಳಾದ ದಯಾನಂದ, ಚಂದ್ರು ಮತ್ತು ಮುರಳಿಧರ್‌ರವರನ್ನು […]
ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ.

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ.ವೈ.ಸುದರ್ಶನ್ ರಾವ್, ಕಂಪ್ಯೂಟರ್, ಮೊಬೈಲ್‌ಗಳ ಪರಿಣಾಮವಾಗಿ ಮನುಷ್ಯ ತನ್ನ ಮೆದುಳಿನ ಶಕ್ತಿಯನ್ನು ಕಳೆದು […]
ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ: 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ.

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇದರ ವಿದ್ಯಾರಣ್ಯ (ಲಿಟ್ಲ್ ಸ್ಟಾರ್) ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಜರುಗಿತು. ಏರ್ ಮಾರ್ಷಲ್ ರಮೇಶ್ ಕಾರ್ಣಿಕ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಸ್ಥೆಯಿಂದ ಏರ್ ಮಾರ್ಷಲ್ ರಮೇಶ್ ಕಾರ್ಣಿಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಖಜಾಂಚಿ ಭರತ್ ಶೆಟ್ಟಿ ಮುಖ್ಯ ಶಿಕ್ಷಕ ಪ್ರದೀಪ್ ಗೆ ಶಿಕ್ಷಕರು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.