ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಚು ರೂಪಿಸಿದೆ

ಉಡುಪಿ: ದಿಲ್ಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ವಿರುದ್ಧ ಮಾಡಿದ ರೀತಿಯಲ್ಲೇ ಬಿಜೆಪಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಂಚು ರೂಪಿಸಿದೆ. ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ರಾಜ್ಯಪಾಲರ ಆದೇಶದಿಂದ ಏನೂ ಆಗುವುದಿಲ್ಲ ಎಂದು ರಾಜ್ಯ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಕಾಂಗ್ರೆಸ್ ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಸಚಿವರಾದ ಬಳಿಕ ಮೊದಲ ಬಾರಿ ಉಡುಪಿಗೆ ಆಗಮಿಸಿದ ಅವರು ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಬಿಜೆಪಿ […]

ವೈದ್ಯರಿಂದ ಕ್ಯಾಂಡೆಲ್ ಹಿಡಿದು ಮೌನ ಮೆರವಣಿಗೆ

ಉಡುಪಿ: ಕೊಲ್ಕತ್ತಾದಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಉಡುಪಿ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು. ಉಡುಪಿ ಬೋರ್ಡ್ ಹೈಸ್ಕೂಲ್ ಬಳಿಯಿಂದ ವೈದ್ಯರು, ದಂತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿನಿಯರು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಕೈಯಲ್ಲಿ ಕ್ಯಾಂಡೆಲ್ ಹಿಡಿದು, ಕಪ್ಪು ಪಟ್ಟಿ ಧರಿಸಿಕೊಂಡು ಜೋಡುಕಟ್ಟೆಯವರೆಗೆ ಮೌನ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಐಎಂಎ […]

ಮಲ್ಪೆ: ಮೀನುಗಾರಿಕೆ ವೇಳೆ ಎದೆನೋವು- ಮೀನುಗಾರ ಮೃತ್ಯು.

ಮಲ್ಪೆ: ಮಲ್ಪೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಎದೆನೋವಿನಿಂದ ಮೃತಪಟ್ಟ ಘಟಣೆ ನಡೆದಿದೆ. ಮೃತಪಟ್ಟ ವ್ಯಕ್ತಿ ಗಣೇಶನ್‌ (64). ಇವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಆ.10ರಂದು ಮೀನುಗಾರಿಕೆಗೆ ತೆರಳಿದ್ದರು. ಆ.10ರಂದು ಬೆಳಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತತ್‌ಕ್ಷಣ ಅವರನ್ನು ಮಲ್ಪೆ ಬಂದರಿಗೆ ತಂದು ಅಲ್ಲಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು ಗಣೇಶನ್‌ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.