ಮಲ್ಪೆ: ವ್ಯಕ್ತಿ ನಾಪತ್ತೆ.
ಮಲ್ಪೆ, ಆಗಸ್ಟ್ 19: ಆಗಸ್ಟ್ 9 ರಂದು ಮಲ್ಪೆಯ ಹೋಟೆಲ್ ಒಂದಕ್ಕೆ ಊಟಕ್ಕೆಂದು ಹೋದ ರಾಜೇಂದ್ರ ನಾಯ್ಕ್ (47) ಎಂಬ ವ್ಯಕ್ತಿಯು ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820—2573999, ಪಿ.ಎಸ್.ಐ ಮೊ.ನಂ:9480805447, ಮಲ್ಪೆ ವೃತ್ತ ಕಚೇರಿ ದೂ.ಸಂಖ್ಯೆ:0820-2520329 ಹಾಗೂ ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ […]
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆದು ಬಿಜೆಪಿ ಪ್ರತಿಭಟನೆ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಇಂದು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ದಿಕ್ಕಾರ ಕೂಗಿದರು. ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ಕೊನೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಗೆ ಏಕಾಏಕಿ ನುಗ್ಗಿದರು. ಪೊಲೀಸರನ್ನು ತಳ್ಳಿಕೊಂಡು ಮುನ್ನುಗ್ಗಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕೆಲಕಾಲ ಹೆದ್ದಾರಿ ತಡೆದು ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. […]
ಹಿರಿಯಡಕ: ಅಕ್ಷಯಾಮೃತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ತೃತೀಯ ವಾರ್ಷಿಕ ಮಹಾಸಭೆ.
ಹಿರಿಯಡಕ: ಅಕ್ಷಯಾಮೃತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ತೃತೀಯ ವಾರ್ಷಿಕ ಮಹಾಸಭೆಯು ಆ.17 ರಂದು ಸೊಸೈಟಿ ಅಧ್ಯಕ್ಷ ಶ್ರೀಕಾಂತ ಕಾಮತ್ ಅವರ ಅಧ್ಕಕ್ಷತೆಯಲ್ಲಿ ಸುರಭಿ ಸಭಾಭವನ ಕೊಟ್ನಕಟ್ಟೆಯಲ್ಲಿ ನಡೆಯಿತು. ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಶಶಿಕಾಂತ ನಾಯಕ್ ರವರು 2024 – 25ನೇ ಸಾಲಿನ ಆಯವ್ಯಯ ಆಸ್ತಿ ಜವಾಬ್ದಾರಿಯ ವಿವರವನ್ನು ಮಂಡಿಸಿದರು. ಸಭೆಯಲ್ಲಿ ಆಯವ್ಯಯವು ಸರ್ವಾನುಮತದಿಂದ ಅಂಗೀಕಾರಗೊಂಡು 2024 – 25ನೇ ಸಾಲಿನ ಬಜೆಟ್ ಮಂಡಿಸಿದರು. ಸಭೆಯಲ್ಲಿ ಬಜೆಟ್ ಅಂಗೀಕಾರಗೊಂಡಿತು. ಸಭೆಯಲ್ಲಿ ವೈದ್ಯಕೀಯ ಸೇವೆಯಲ್ಲಿ ತೊಡಗಿಸಿಕೊಂಡ ಡಾ. ಲಕ್ಷ್ಮೀ ನಾರಾಯಣ […]
ಉಡುಪಿ: ಕೆ. ರಮೇಶ್ ಐತಾಳ್ ನಿಧನ
ಉಡುಪಿ: ಉಡುಪಿ ಮೂಲದ ಕೆ.ರಮೇಶ್ ಐತಾಳ್ (78) ನಿನ್ನೆ ಫೂನಾದ ಸ್ವಗ್ರಹದಲ್ಲಿ ನಿಧನರಾದರು. ಟೆಲ್ಕೊ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂದು ವರ್ಗದವರನ್ನು ಅಗಲಿದ್ದಾರೆ.
ಉಡುಪಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ಉಡುಪಿ: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಇಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಮೆರವಣಿಗೆ ಮೂಲಕ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ಭವನದಿಂದ ಅಜ್ಜರಕಾಡು ಹುತಾತ್ಮ ಸ್ಮಾರಕವಾಗಿ ಜೋಡುಕಟ್ಟೆಗೆ ಸಾಗಿಬಂದು ಬ್ರಹ್ಮಗಿರಿ ವೃತ್ತದಲ್ಲಿ ಪ್ರತಿಭಟನಾ ಮೆರವಣಿಗೆ ಸಮಾಪನಗೊಂಡಿತು. ಮೆರವಣಿಗೆಯುದ್ದಕ್ಕೂ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಅವರಿಗೆ ಧಿಕ್ಕಾರ ಕೂಗಿದರು. ರಾಜ್ಯಪಾಲರು ಕೇಂದ್ರದ […]