ಉಡುಪಿ: ಕೆಸಿಡಿಎ ಅಧ್ಯಕ್ಷರಾಗಿ ಸಚ್ಚಿದಾನಂದ ನಾಯಕ್ ಆಯ್ಕೆ

ಉಡುಪಿ: ಕರಾವಳಿ ಸಿಮೆಂಟ್ ಡೀಲರ್ಸ್ ಅಸೋಸಿಯೇಶನ್ ಮಂಗಳೂರು ಇದರ 2024-26ರ ನೂತನ ಅಧ್ಯಕ್ಷರಾಗಿ ಸಚ್ಚಿದಾನಂದ ನಾಯಕ್ ಮಣಿಪಾಲ ಅವರು ಆಯ್ಕೆಯಾಗಿದ್ದಾರೆ. ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಸಿಮೆಂಟ್ ಡೀಲರ್ಸ್ ಅಸೋಸಿಯೇಶನ್ ಉಡುಪಿಯ ಕಿದಿಯೂರು ಹೊಟೇಲ್ ಶೇಷಶಯನ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2024-26ರ ಅವಧಿಗೆ ನೂತನ ಅಧ್ಯಕ್ಷರಾಗಿ ಮಣಿಪಾಲದ ಪಿ. ಸಚ್ಛಿದಾನಂದ ನಾಯಕ್, ಉಪಾಧ್ಯಕ್ಷರಾಗಿ ಮಂಗಳೂರು ಇಸ್ಮಾಯಿಲ್ ಇಕ್ಬಾಲ್ ನೆಕ್ಕಿಲಾಡಿ, ಕಾರ್ಯದರ್ಶಿ ಮಂಗಳೂರಿನ ಪ್ರವೀಣ್ ತೋಡುವೆಲ್, ಖಜಾಂಜಿಯಾಗಿ ಉಡುಪಿಯ ಕೆ. ಗಣೇಶ್ ನಾಯಕ್ ಶಿರಿಯಾರ ಮತ್ತು ಜತೆ […]

ಬೆಂಗಳೂರು: ಯುವತಿಯನ್ನು ಮನೆಗೆ ಬಿಡುವುದಾಗಿ ಹೇಳಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್.

ಬೆಂಗಳೂರು: ಡ್ರಾಪ್ ನೀಡುವ ನೆಪದಲ್ಲಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಎಸ್ ಆರ್ ಲೇಔಟ್ ಪೊಲೀಸರು ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಿದ್ದಾರೆ. ಆ.18 ರಂದು ಮುಂಜಾನೆ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ವ್ಯಾಪ್ತಿಯ ಹೊಸೂರು ಸರ್ವಿಸ್ ರಸ್ತೆಯ ಪ್ರತ್ಯೇಕ ಸ್ಥಳದಲ್ಲಿ ಈ ಘಟನೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಸಂತ್ರಸ್ತೆಯ ಹೇಳಿಕೆ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಮಾಹಿತಿಯನ್ನು ಪಡೆದು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳ ಬಗ್ಗೆ ಹೆಚ್ಚಿನ […]

ಕಾರ್ಕಳ ವೃತ್ತ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಮಣಿಪಾಲ ಠಾಣೆಯಲ್ಲಿ ದೂರು ದಾಖಲು.

ಮಣಿಪಾಲ: ಜಿಲ್ಲಾಧಿಕಾರಿ ಕಚೇರಿಯ ಬಳಿ ಇತ್ತೀಚೆಗೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನವೀನ್‌ ಎಂಬವರು ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ.ಆರ್‌.ಅವರಿಗೆ ಅವಾಚ್ಯವಾಗಿ ನಿಂದಿಸಿದ ಕಾರಣಕ್ಕೆ ಅವರ ಮೇಲೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆ.5ರಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಪ್ರತಿಭಟನ ವೃತ್ತದಲ್ಲಿ ಪರಶುರಾಮ ಥೀಮ್‌ ಪಾರ್ಕ್‌ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ನವೀನ್‌ ಅವರು ಮಂಜಪ್ಪ ಅವರಿಗೆ ಏಕವಚನದಲ್ಲಿ ನಿಂದಿಸಿ, ಅವಮಾನ ಮಾಡಿ ಅವರ ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. […]

ಹಿರಿಯಡಕ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಹಿರಿಯಡ್ಕ ಶಾಖೆಯ ಸ್ಥಳಾಂತರ ಮತ್ತು ಸೇಫ್ ಲಾಕರ್ ಸೌಲಭ್ಯ ಉದ್ಘಾಟನೆ.

ಹಿರಿಯಡಕ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ)ನ ಹಿರಿಯಡ್ಕ ಶಾಖೆಯ ಸ್ಥಳಾಂತರ ಮತ್ತು ಸೇಫ್ ಲಾಕರ್ ಸೌಲಭ್ಯದ ಉದ್ಘಾಟನಾ ಸಮಾರಂಭವು ಆ.18ರಂದು ನಡೆಯಿತು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಸುರೇಶ ಶೆಟ್ಟಿ ಗುರ್ಮೆ ಇವರ ಅಮೃತ ಹಸ್ತದಿಂದ ಸ್ಥಳಾಂತರಿತ ಶಾಖೆಯ ಉದ್ಘಾಟನೆ ನೆರವೇರಿತು. ಹಾಗೂ ಸೇಫ್ ಲಾಕರ್ ಸೌಲಭ್ಯದ ಉದ್ಘಾಟನೆಯನ್ನು ಮಂಗಳೂರಿನ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಗೋಕುಲ್ ದಾಸ್ ನಾಯಕ್ ಅವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತಿನ ಅಧ್ಯಕ್ಷರಾದ […]

ಮಣಿಪಾಲ: KIDZEE ಯಲ್ಲಿ ಶಿಕ್ಷಕ/ಸಂಯೋಜಕರ ಹುದ್ದೆಗೆ ನೇಮಕಾತಿ.

ಉಡುಪಿ: KIDZEE ಮಣಿಪಾಲದಲ್ಲಿ ಉದ್ಯೋಗ ಅವಕಾಶವಿದ್ದು, ಶಿಕ್ಷಕ/ಸಂಯೋಜಕರ ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.959198277 ಸಂಪರ್ಕಿಸಿ.