ಬ್ರಹ್ಮಾವರದ ಕನ್ಸ್ಟ್ರಕ್ಷನ್ ಕಂಪೆನಿ ಗೆ ಅಕೌಂಟೆಂಟ್ ಬೇಕಾಗಿದ್ದಾರೆ
ಶರಣರ ಜೀವನ ಶೈಲಿಯನ್ನು ಪ್ರತಿಯೊಬ್ಬರೂ ಅನುಸರಿಸಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್
ಉಡುಪಿ: 12 ನೇ ಶತಮಾನದಲ್ಲಿ ಬಸವಣ್ಣನವರವ್ಯಕ್ತಿತ್ವ ಹಾಗೂ ವಚನಗಳಿಂದ ಪ್ರಭಾವಿತರಾಗಿ ಅವರೊಂದಿಗೆ ಇದ್ದು, ತಮ್ಮ ಕಾಯಕ ನಿಷ್ಠೆಯಿಂದ ವಚನಗಳನ್ನು ರಚಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ.ಇಂತಹ ಶರಣರ ಜೀವನ ಶೈಲಿಯನ್ನು ಪ್ರತಿಯೊಬ್ಬರೂಅನುಸರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಶ್ರೀ ನುಲಿಯ ಚಂದಯ್ಯ ಜಯಂತಿ […]
ಹಿರಿಯಡಕ: ಬಾವಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯ ಶವ ಪತ್ತೆ; ಆತ್ಮಹತ್ಯೆ ಶಂಕೆ.!
ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಿಡಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (16) ಎಂದು ಗುರುತಿಸಲಾಗಿದೆ. ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. […]
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪಕ್ಷದ ಕಚೇರಿ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ತಕ್ಷಣವೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರಿ ಬಿಟ್ಟು ತೊಲಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸಿದ್ದರಾಮಯ್ಯ ಅವರ ಮೇಲೆ ಸಾಲು ಸಾಲು ಆರೋಪಗಳು ಬಂದರೂ ಯಾವುದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಈಗ ಎಲ್ಲ ಕಡೆ ಭ್ರಷ್ಟಾಚಾರ ತಾಂಡವ […]
ಕಟಪಾಡಿ:ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ
ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡ ನಾರಾಯಣಗುರುಗಳ ಜಾಥಕ್ಕೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಿಂದ ಆರಂಭಗೊಂಡ ಜಾಥವು, ಕಟಪಾಡಿ ಪೇಟೆಯಾಗಿ ಸಾಗಿಬಂದು ರಾಷ್ಟ್ರೀಯ ಹೆದ್ದಾರಿ 66 ಕಲ್ಲಾಪು ಮಾರ್ಗವಾಗಿ ವಿಶ್ವನಾಥ ಕ್ಷೇತ್ರದಲ್ಲಿ ಸಮಾಪನಗೊಂಡಿತು. ಕಟಪಾಡಿ ವಿಶ್ವನಾಥ ಕ್ಷೇತ್ರ ಮತ್ತು ಶ್ರೀ ನಾರಾಯಣ ಗುರು ಸೇವಾದಳ ಜಂಟಿ ಆಶ್ರಯದಲ್ಲಿ ಈ ಜಾಥವನ್ನು ಆಯೋಜಿಸಲಾಗಿತ್ತು. ಸಂದೇಶ ಸಾರುವ ಈ ಜಾಥದಲ್ಲಿ ಬಿಲ್ಲವ […]