ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ವಿದ್ಯಾಗಿರಿ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಮಹಿಳಾ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ಪಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಋಣಾತ್ಮಕ ಚಿಂತೆಯನ್ನು ಬಿಡಬೇಕು. ಭಾವನಾತ್ಮಕ ವಿಷಯಗಳಿಗೆ ಮಹತ್ವ ನೀಡಬಾರದು. ದೈನಂದಿನ ಬದುಕಿನಲ್ಲಿ ಶೈಕ್ಷಣಿಕವಾಗಿ ಪರಿಶ್ರಮ ಹಾಕಬೇಕು. ವಾಣಿಜ್ಯ […]
ಆರೋಗ್ಯ ನಿಗಾ ಸಹಾಯಕರ ತರಬೇತಿ(ಹೋಮ್ ನರ್ಸಿಂಗ್) : ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ,ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣ/ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ […]
ಅರೆಕಾಲಿಕ ಶಿಕ್ಷಕರ ನೇಮಕ : ಅರ್ಜಿ ಆಹ್ವಾನ

ಉಡುಪಿ:ಜಿಲ್ಲಾ ಮಕ್ಕಳ ರಕ್ಷಣಾ ಘಟಕದಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ 8, 9 ಹಾಗೂ 10 ನೇ ತರಗತಿಯಲ್ಲಿ ವ್ಯಾಸಾಂಗಮಾಡುತ್ತಿರುವ ಮಕ್ಕಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಮತ್ತು ಸಂಗೀತ ಹಾಗೂ ಕ್ರಾಫ್ಟ್ ಕಲಿಸುವ ಅರೆಕಾಲಿಕ ಶಿಕ್ಷಕರನ್ನು ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 28 ಕೊನೆಯ ದಿನ. ಅರ್ಜಿ ನಮೂನೆ […]
ಮಣಿಪಾಲ: ಆಗಸ್ಟ್ 21ರಂದು MSDC ಒರೇನ್ ಇಂಟರ್ನ್ಯಾಷನಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಮೇಕಪ್ ಕಾರ್ಯಾಗಾರ.

ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ಓರೇನ್ ಇಂಟರ್ನ್ಯಾಷನಲ್ ನಲ್ಲಿ ಆಗಸ್ಟ್ 21ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜನ್ಮಾಷ್ಟಮಿ ವಿಶೇಷ ಮೇಕಪ್ ಕಾರ್ಯಾಗಾರ ನಡೆಯಲಿದೆ. ಆಸಕ್ತ ಈ ಕಾರ್ಯಗಾರದಲ್ಲಿ ಭಾಗವಹಿಸಬಹುದು. ಮೇಕಪ್ ಆರ್ಟಿಸ್ಟ್ ನವರಿಗೆ ಪ್ರತ್ಯೇಕ ಆಫರನ್ನು ಕಲ್ಪಿಸಲಾಗಿದೆ. ಪಾವತಿ ಶುಲ್ಕ ರೂ.399. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಒರೇನ್ ಇಂಟರ್ನ್ಯಾಷನಲ್, MSDC ಕಟ್ಟಡ, 3 ನೇ ಮಹಡಿ, ಈಶ್ವರ್ ನಗರ, ಮಣಿಪಾಲ.📞 8123165068📞8123163935
ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ -ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿಯೋಜನೆಯಡಿ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳನೇಮಕಾತಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಉಡುಪಿ ದೂ.ಸಂಖ್ಯೆ:0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.