ಕೋಟ: ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಬಂಧನ
ಉಡುಪಿ: ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಲು ಯತ್ನಿಸಿದ ತಂಡದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರನ್ನು ಚಿಕ್ಕಮಗಳೂರಿನ ಸಂತೋಷ್ ನಾಯಕ್ (45) ಮತ್ತು ಕಾಪು ಪೊಲಿಪು ನಿವಾಸಿ ದೇವರಾಜ್ ಸುಂದರ್ ಮೆಂಡನ್(46) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಣೂರಿನಲ್ಲಿ ಜುಲೈ 25ರಂದು ಘಟನೆ ನಡೆದಿತ್ತು. ಆ ದಿನ ಬೆಳಿಗ್ಗೆ 8.30ಕ್ಕೆ ಮಣೂರಿನ ಕವಿತಾ ಎಂಬವರ ಮನೆಗೆ ಆಗಂತುಕರ ತಂಡವು ಐಟಿ ಅಧಿಕಾರಿಗಳ ಸೋಗಿನಲ್ಲಿ ನುಗ್ಗಿತ್ತು. ಶಿಫ್ಟ್ ಮತ್ತು ಇನೋವಾ ಕಾರಿನಲ್ಲಿ ಬಂದ […]
ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನ ಹೊಸ ನಿಯಮ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು
ಉಡುಪಿ: ಪಠ್ಯೇತರ ಚಟುವಟಿಕೆಗಳಿಗೆ ಕಾಲೇಜಿನಿಂದ ಯಾವುದೇ ಪ್ರೋತ್ಸಾಹವಿಲ್ಲ ಎಂದು ಆರೋಪಿಸಿ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ನೇತೃತ್ವದಲ್ಲಿ ಇಂದು ಕಾಲೇಜು ಗೇಟ್ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿಯ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೊಸ ನಿಯಮ ವಿರುದ್ಧ ಘೋಷಣೆ ಕೂಗಿ, ಹಳೆಯ ನಿಯಮದಲ್ಲೆ ಮುಂದುರಿಯುವಂತೆ ಒತ್ತಾಯ ಮಾಡಿದರು. ವಿದ್ಯಾರ್ಥಿಗಳೇ ಹಣ ಸಂಗ್ರಹಿಸಿ ಕಾರ್ಯಕ್ರಮ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೊಸ ನಿಯಮದ […]
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಕಾರು
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಘಟನೆ ಸಂಭವಿಸಿದೆ. ಉಡುಪಿ ನಗರದ ಹೃದಯ ಭಾಗದಲ್ಲಿರುವ ಕೆ.ಎಂ.ಮಾರ್ಗದಲ್ಲಿನ ಗ್ರಹೋಪಯೋಗಿ ಮಳಿಗೆಗೆ ಕಾರು ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಮಗ್ಗಲಿಗೆ ಕಾರು ಹೋಗಿದೆ. ಶಾಪ್ ನ ಮುಂಭಾಗದಲ್ಲಿರುವ ಮೆಟ್ಟಿಲನ್ನು ಏರಿ ನಿಂತಿದೆ. ಅದೃಷ್ಟವಶಾತ್ ಅಲ್ಲಿಂದ ಮುಂದೆ ಹೋಗದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಕೂಡಲೇ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಒಟ್ಟಾಗಿ ಕಾರನ್ನು ರಸ್ತೆಗೆ ಎಳೆದು ತಂದಿದ್ದಾರೆ. ಒಳಗಿದ್ದವರು ಕೂಡ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಹೈಕೋರ್ಟ್ ನಿಂದ ಮಧ್ಯಾಂತರ ತಡೆ; ವಿಚಾರಣೆ ಸೆ.10ಕ್ಕೆ ಮುಂದೂಡಿಕೆ.
ಬೆಂಗಳೂರು: ‘ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ಎಸಗಿದ್ದಾರೆ’ ಎಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ‘ಕ್ರಿಷ್ ಆರ್ಟ್ ವರ್ಲ್ಡ್’ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.’ನನ್ನ ವಿರುದ್ಧ ಕಾರ್ಕಳ ಟೌನ್ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಹಾಗೂ ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ನ್ಯಾಯಿಕ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಬೆಂಗಳೂರಿನ ವಿಶ್ವೇಶ್ವರಯ್ಯ ಲೇ ಔಟ್ ನಿವಾಸಿಯಾದ ಕೃಷ್ಣ […]
ಕಾರ್ಕಳ: ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಮೃತ್ಯು
ಉಡುಪಿ: ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿನೋರ್ವ ಮೃತಪಟ್ಟ ದಾರುಣ ಘಟನೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಮಣಿಪಾಲ […]