ಉಡುಪಿ: ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆ

ಉಡುಪಿ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬನ್ನಂಜೆ ಶ್ರೀ ನಾರಾಯಣಗುರು ವೃತ್ತದಿಂದ ಆರಂಭಗೊಂಡ ಮೆರವಣಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯವರೆಗೆ ಸಾಗಿಬಂತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹತ್ತಾರು ಬಿಜೆಪಿ ಕಾರ್ಯಕರ್ತರು ಮೆರವಣಿಗೆಯುದ್ಧಕ್ಕೂ ಐವನ್ ಡಿಸೋಜ ಹಾಗೂ ಕಾಂಗ್ರೆಸ್ ವಿರುದ್ಧ ದಿಕ್ಕಾರ ಕೂಗಿದರು. ಐವನ್ ಡಿಸೋಜ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. […]

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿಖಾಲಿ ಇರುವ ಒಟ್ಟು ಅಂಗನವಾಡಿ ಕಾರ್ಯಕರ್ತೆ-57 ಹಾಗೂ ಅಂಗನವಾಡಿ ಸಹಾಯಕಿಯರು-136 ಗೌರವ ಸೇವೆಯ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸ್ಥಳಗಳ ವಿವರ: ಉಡುಪಿ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 […]

ಮಹಾತ್ಮ ಗಾಂಧೀಜಿ 155ನೇ ಜಯಂತಿ : ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ /ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನುಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ […]

ಎನ್.ಎಂ.ಎಂ.ಎಸ್ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಉಡುಪಿ:Department of School Education and Literacy, ನವದೆಹಲಿಯ ಮಾರ್ಗಸೂಚಿಯಂತೆ ಎನ್.ಎಂ.ಎಂ.ಎಸ್ ಪರೀಕ್ಷೆಯನ್ನು 2024 ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿವತಿಯಿಂದ ನಡೆಸಲು ಅನ್‌ಲೈನ್ ಮೂಲಕ 2024ನೇ ಆಗಸ್ಟ್ 19 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎನ್.ಎಂ.ಎಂ.ಎಸ್ ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂ¸ ಶಾಲೆಗಳಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ […]

ಡಿ.ದೇವರಾಜ ಅರಸು ಅವರ ವಿಚಾರಧಾರೆಗಳನ್ನು ಯುವಜನತೆ ಅಳವಡಿಸಿಕೊಳ್ಳಿ : ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ರಾಜ್ಯ ಕಂಡ ಅನುಭವಿ ಪ್ರಾಮಾಣಿಕರಾಜಕಾರಣಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು ಕ್ರಾಂತಿಕಾರಿ ನಾಯಕರಾಗಿ ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾಗಿ ರಾಜ್ಯದಲ್ಲಿ ಮಹತ್ವದ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ಅವರ ವಿಚಾರಧಾರೆಗಳನ್ನು ಯುವಪೀಳಿಗೆ ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣಹೇಳಿದರು. ಅವರು ಮಂಗಳವಾರ ನಗರದ ಮಿಷನ್ ಕಂಪೌಂಡ್‌ನ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಆಶ್ರಯದಲ್ಲಿ […]