ಕುಂದಾಪುರ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ.

ಕುಂದಾಪುರ: ತಲ್ಲೂರು ಗ್ರಾಮದ ಸುರೇಶ (65) ಅವರು ಸಾರ್ವಜನಿಕ ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅವರು ಕಾಯಿಲೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜುಗುಪ್ಸೆಗೊಂಡು ಈ ಕೃತ್ಯ ಎಸಗಿದ್ದಾಗಿ ಅವರ ಪತ್ನಿ ದೇವಕಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆ..!

ಬೆಂಗಳೂರು: ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 1 ರಿಂದ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆಯಾಗಲಿದೆ. ದರ ಇಳಿಕೆ ಮಾಡುವಂತೆ ಅಬಕಾರಿ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜುಲೈ1 ರಿಂದ ಮದ್ಯ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿತ್ತು. ಆದ್ರೆ […]

ಉಡುಪಿ: ಆನ್ ಲೈನ್ ಟ್ರೇಡಿಂಗ್ ನಲ್ಲಿ ಮೋಸ; ನಾಲ್ವರು ಆರೋಪಿಗಳ ಬಂಧನ

ಉಡುಪಿ: ಆನ್ ಲೈನ್ ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕುರಿಯ ಗ್ರಾಮದ ನಿವಾಸಿ ಮಹಮ್ಮದ್ ಮುಸ್ತಫಾ ಪಿ (36) ಕಾಸರಗೋಡು ಮಂಜೇಶ್ವರ ತಾಲೂಕಿನ ಕುಂಬ್ಳೆಯ ನಿವಾಸಿ ಖಾಲಿದ್ದ್.‌ ಬಿ (39), ಕಾಸರಗೋಡು ನೀರ್ಚಾಲ್ ಗ್ರಾಮದ ನಿವಾಸಿ ಮೊಹಮ್ಮದ್‌ ಸಫಾನ್ ಕೆ.ಎ, (22) ಹಾಗೂ ಮಂಗಳೂರು ಪ್ರಗತಿ ಬಿಜೈ ನಿವಾಸಿ ಸತೀಶ್‌ ಶೇಟ್‌ […]

ಕಂಚಿನಡ್ಕ ಟೋಲ್ ಗೇಟ್ ರದ್ದು: ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ: ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತ್ತು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸಲಾಗುವುದು ಎಂದು ಭರವಸೆ ನೀಡಿದರು. ನಿಯೋಗದಲ್ಲಿ ಉಡುಪಿ ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಮುನಿಯಾಲು ಉದಯಕುಮಾರ್ […]

ಉಡುಪಿ: ಎಸ್ ಡಿಪಿಐ ಬೆಂಬಲದೊಂದಿಗೆ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್

ಉಡುಪಿ: ಎಸ್ ಡಿಪಿಐ ಜತೆ ನಮಗೆ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನ ನಿಜ ಬಣ್ಣ ಇದರಿಂದ ಬಯಲಾಗಿದೆ. ಎಸ್ ಡಿಪಿಐ ವಿಚಾರದಲ್ಲಿ ಕಾಂಗ್ರೆಸ್ ನದು ಸದಾ ದ್ವಂದ್ವ ನಿಲುವು. ತನ್ನ ಅನುಕೂಲತೆಗೆ ತಕ್ಕಂತೆ ಈ ಸಂಬಂಧವನ್ನು ನೈತಿಕ ಹಾಗೂ ಅನೈತಿಕವಾಗಿಟ್ಟುಕೊಳ್ಳುವುದು ಕಾಂಗ್ರೆಸ್ ಗೆ ಚಾಳಿಯಾಗಿದೆ. ಎಸ್ಡಿಪಿಐ ಕಾಂಗ್ರೆಸ್ ಬಿ ಟೀಂ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಟೀಕಿಸಿದರು. ರಾಜ್ಯಪಾಲರ ನಿವಾಸಕ್ಕೆ ಬಾಂಗ್ಲಾ ಮಾದರಿಯಲ್ಲಿ ನುಗ್ಗುತ್ತೇವೆ ಎಂದ […]