ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಬಾವಿ ಪರೀಕ್ಷೆ :ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಲೋಕ ಸೇವಾ ಆಯೋಗದವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ”ಎ” ಮತ್ತು ”ಬಿ” ವೃಂದದ ಹುದ್ದೆಗಳ ಪೂರ್ವಬಾವಿ ಪರೀಕ್ಷೆಗಳು ಆಗಸ್ಟ್ 27 ರಂದು ಉಡುಪಿಯ ಸರ್ವಿಸ್ ಬಸ್ ಸ್ಟ್ಯಾಂಡ್ ಹತ್ತಿರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ […]

ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಕೃಷಿ ಮೂಲಭೂತ ಸೌಕರ್ಯಾಭಿವೃದ್ಧಿ ನಿಧಿ ಯೋಜನೆಯಡಿಗೋದಾಮುಗಳು, ಆಧುನಿಕ ಸೈಲೊಗಳು, ಈ – ಮಾರ್ಕೆಟಿಂಗ್ ವೇದಿಕೆ, ಸರಬರಾಜು ಸರಪಳಿ ಸೇವೆಗಳಿಗೆ, ಪ್ಯಾಕ್ ಹೌಸ್ ಮತ್ತು ಬಾಡಿಗೆಸೇವಾ ಕೇಂದ್ರ, ಜೋಡಣೆ, ವಿಂಗಡಣೆ, ಶ್ರೇಣೀಕರಣ ಘಟಕ, ಶಿಥಲೀಕರಣ ಘಟಕ, smart and Precision agriculture ಮೂಲಭೂತ ಸೌಕರ್ಯ, refrigerated transportation ಗುಚ್ಚ ಬೆಳೆಗಳ ಸರಬರಾಜು ಸರಪಳಿ ಮೂಲಭೂತ ಸೌಕರ್ಯ, ಸಂಗ್ರಹಣಾ ಕೇಂದ್ರಗಳು, ಸಾವಯವ ಕೃಷಿ ಪರಿಕರಗಳ ಉತ್ಪಾದನಾ ಘಟಕಗಳು ಮತ್ತುಜೈವಿಕ ಪ್ರಚೋದಕ ಘಟಕಗಳು, ಹಣ್ಣು ಮಾಗಿಸುವಘಟಕಗಳು, ಸಾಮೂಹಿಕ […]

ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ:0820-2521324 ಅಥವಾ ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯಪ್ರಕಟಣೆ ತಿಳಿಸಿದೆ.

ಕಾರ್ಕಳ: ಅಮಲು ಪದಾರ್ಥ ನೀಡಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ

ಉಡುಪಿ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಜೋಡುರಸ್ತೆ ನಿವಾಸಿ ಅಲ್ತಾಫ್ ಬಂಧಿತ ಆರೋಪಿ. ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಆರೋಪಿ, ಆಕೆಗೆ ಅಮಲು ಪದಾರ್ಥ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಲಾಗಿದೆ. ತೀವ್ರ ಅಸ್ವಸ್ಥಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ