ಕುಂದಾಪುರ: ಕಟ್ಟಿ ಹಾಕಿದ್ದ ದನವನ್ನು ಬಿಡಿಸಿಕೊಂಡು ಮನೆಗೆ ಬರುತ್ತಿದ್ದಾಗ ಮರಗಳು ಬಿದ್ದು ಮಹಿಳೆ ಮೃತ್ಯು.
ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿಯ ಕೆಂಚನೂರು ಗ್ರಾಮದ ಮಲ್ಲಾರಿ ಎಂಬಲ್ಲಿ ರವಿವಾರ ಸಂಜೆ ವೇಳೆ ಸುರಿದ ಗಾಳಿ-ಮಳೆಗೆ ಮರಗಳು ಬುಡ ಸಮೇತ ಉರುಳಿ ಬಿದ್ದು ಮಹಿಳೆ ಹಾಗೂ ಅವರು ಮನೆಗೆ ಕರೆತರುತಿದ್ದ ದನವೊಂದು ಅದರಡಿ ಸಿಲುಕಿ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಮೃತರನ್ನು ಮಲ್ಲಾರಿಯ ಅಣ್ಣಪ್ಪಯ್ಯ ಎಂಬವರ ಪತ್ನಿ ಸುಜಾತ ಆಚಾರ್ತಿ (53) ಎಂದು ಗುರುತಿಸಲಾಗಿದೆ. ಸಂಜೆ 5:30ರ ಸುಮಾರಿಗೆ ಮಳೆ ಸುರಿಯತೊಡಗಿದ್ದು, ಸುಜಾತ ಮನೆ ಸಮೀಪದಲ್ಲೇ ಮೇಯಲೆಂದು ಕಟ್ಟಿ ಹಾಕಿದ್ದ ದನವನ್ನು ಬಿಡಿಸಿಕೊಂಡು ಮನೆಗೆ ಮರಳುತಿದ್ದಾಗ […]
ಕಾರ್ಕಳ ಅತ್ಯಾಚಾರ ಪ್ರಕರಣ: ಡ್ರಗ್ಸ್ ಬಗ್ಗೆ ರಕ್ತ ಪರೀಕ್ಷೆಯಲ್ಲಿ ಯುವತಿಯ ವರದಿ ಪಾಸಿಟಿವ್, ಆರೋಪಿಗಳ ವರದಿ ನೆಗೆಟಿವ್: ಉಡುಪಿ ಎಸ್ಪಿ ಡಾ.ಅರುಣ್ ಕೆ.
ಕಾರ್ಕಳ, ಆ.25: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವತಿಯ ಬ್ಲಡ್ ಟೆಸ್ಟ್ ರಿಪೋರ್ಟ್ ನಲ್ಲಿ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದ್ದು, ಪ್ರಥಮ ಆರೋಪಿಯಾದ ಅಲ್ತಾಫ್ ಬ್ಲಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದೆ ಎಂದು ಎಸ್ಪಿ ಡಾ.ಅರುಣ್ ಮಾಹಿತಿ ನೀಡಿದ್ದಾರೆ. ಬಿಯರ್ ಬಾಟಲ್ ತಂದುಕೊಟ್ಟ ಎರಡನೇ ಆರೋಪಿಯ ಬ್ಲಡ್ ರಿಪೋರ್ಟ್ ನೆಗೆಟಿವ್ ಎಂದು ಬಂದಿರುತ್ತದೆ. ಯುವತಿಯ ಬ್ಲಡ್ ಸ್ಯಾಂಪಲ್ ನಲ್ಲಿ ಮಾದಕ ದ್ರವ್ಯ ಪಾಸಿಟಿವ್ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್ ನನ್ನು ಕಷ್ಟಡಿಗೆ […]
ಉಡುಪಿ ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಕಣ್ಮನ ಸೆಳೆಯಲಿದೆ ಸಾಂಸ್ಕೃತಿಕ-ಧಾರ್ಮಿಕ ಕಾರ್ಯಕ್ರಮಗಳು.
ಉಡುಪಿ: ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಕೃಷ್ಣಾಷ್ಟಮಿ ಆಚರಣೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಸಕಲ ಸಿದ್ಧತಾ ಕಾರ್ಯ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು (ಆ.26) ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ ನೆರವೇರಲಿದೆ. ಹಾಗೂ ರಥಬೀದಿಯಲ್ಲಿ ಆ. 27ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಕೃಷ್ಣ ಪ್ರಸಾದಕ್ಕೆ ಅಗತ್ಯ ಇರುವ ಉಂಡೆ, ಚಕ್ಕುಲಿ ತಯಾರಿಸಲಾಗಿದೆ. […]
ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೈಭವದ ಸಿದ್ಧತೆ: ಪೊಡವಿಗೊಡೆಯನ ನಾಡಲ್ಲಿ ಹರ್ಷೋದ್ಗಾರ.
ಉಡುಪಿ- ಮಂಗಳೂರು: ಇಂದು ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಯ ಸಿದ್ದತೆ ವೈಭವದಿಂದ ನಡೆಯುತ್ತಿದ್ದು, ಅಷ್ಟಮಿ ಸಂಭ್ರಮಾಚರಣೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿದ್ದತೆ ನಡೆದಿವೆ. ಹಬ್ಬದ ಹರುಷಕ್ಕೆ ಕ್ಷಣಗಣನೆ: ದಕ್ಷಿಣ ಕನ್ನಡದಲ್ಲಿ ಅಷ್ಟಮಿಗೆ ಮೂಡೆ/ಕೊಟ್ಟಿಗೆ/ ಗುಂಡ ತಿಂಡಿಗೆ ಎಲೆ ಕಟ್ಟುವುದು, ದೇವರ ಅಲಂಕಾರ ಮಾಡುವುದಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದ ಕಾರ್ ಸ್ಟ್ರೀಟ್ ನಲ್ಲಿ ಮಹಿಳೆಯರು ಮೂಡೆ, ಕೊಟ್ಟಿಗೆ, ಗುಂಡ ಎಲೆ ಕಟ್ಟಿ ಮಾರಿದರೆ, ಘಟ್ಟದ ಮೇಲಿನಿಂದ ಬಂದ ವ್ಯಾಪಾರಿಗಳು ಹೂವಿನ ಮಾರಾಟದಲ್ಲಿ ತೊಡಗಿದ್ದಾರೆ. […]