ಮಣಿಪಾಲ MSDCಯಲ್ಲಿ ಕೌನ್ಸಲರ್ ಹುದ್ದೆಗೆ ನೇಮಕಾತಿ: ಅರ್ಜಿ ಆಹ್ವಾನ

ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ(ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್ ನಲ್ಲಿ(ಬ್ಯೂಟಿ & ವಲ್ನೆಸ್ ಸೆಕ್ಟರ್) ಕೌನ್ಸಲರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಪದವಿ ಶಿಕ್ಷಣ ಅನುಭವ: 1/2 ವರ್ಷ ಸಮಯ: ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಹಾಗೂ ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ತಮ್ಮ ರೆಸ್ಯೂಮ್’ಅನ್ನು ಈ ಕೆಳಗಿನ ಇಮೇಲ್ ಐಡಿಗೆ ಕಳುಹಿಸಬಹುದು. Email: [email protected]: 8123165068

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸುಧಾರಿತ ರೆಟಿನಲ್ ಇಮೇಜಿಂಗ್ ಟೆಕ್ನಾಲಜಿ: ಕ್ಲಾರಸ್ 700 ಕ್ಯಾಮೆರಾ ಉದ್ಘಾಟನೆ

ಮಣಿಪಾಲ, 28 ಆಗಸ್ಟ್ 2024: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೇತ್ರವಿಜ್ಞಾನ ವಿಭಾಗವು ಕ್ಲಾರಸ್ 700 – HD ಅಲ್ಟ್ರಾ-ವೈಡ್‌ಫೀಲ್ಡ್ ಫಂಡಸ್ ಇಮೇಜಿಂಗ್‌ ಮತ್ತು ಫ್ಲೋರೆಸ್ಸಿನ್ ಆಂಜಿಯೋಗ್ರಫಿ ಕ್ಯಾಮೆರಾದ ಉದ್ಘಾಟನೆಯೊಂದಿಗೆ ರೋಗಿಗಳ ಆರೈಕೆಯಲ್ಲಿ ಗಮನಾರ್ಹ ಮುನ್ನಡೆ ಸಾಧಿಸಿದೆ. ಝೈಸ್ ಕಂಪನಿ ಅಭಿವೃದ್ಧಿಪಡಿಸಿದ ಈ ಅತ್ಯಾಧುನಿಕ ರೆಟಿನಲ್ ಇಮೇಜಿಂಗ್ ಸಿಸ್ಟಮ್, ವಿಶೇಷವಾಗಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಿಗೆ ಕಣ್ಣಿನ ಆರೈಕೆಯಲ್ಲಿ ಕ್ರಾಂತಿಯನ್ನುಂಟು ಮಾಡುವ ಭರವಸೆ ನೀಡುತ್ತದೆ. ಕ್ಲಾರಾಸ್ 700 ಸುಧಾರಿತ ಉಪಕರಣವನ್ನು ಮಾಹೆ ಮಣಿಪಾಲದ ಆರೋಗ್ಯ ವಿಜ್ಞಾನಗಳ […]

ಕುಂದಾಪುರ: ಉಪನ್ಯಾಸಕರ ನೇಮಕಾತಿ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ: ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ ಸಹ ಈಗಾಗಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ […]

ಉಡುಪಿ: ರತ್ನಾಕರ್ ಇಂದ್ರಾಳಿ ಅವರಿಗೆ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿ.

ಉಡುಪಿ: ಕೈಮಗ್ಗದ ನೇಕಾರಿಕೆಯ ಅದ್ಭುತ ಕಲಾಕೌಶಲ್ಯವನ್ನು ಪೋಷಿಸಿ ಬೆಳೆಸಲು ನಿರಂತರವಾಗಿ ಶ್ರಮಿಸುತ್ತ, ಪುತ್ತಿಗೆ ಮಠದ ಪರ್ಯಾಯ ಮತ್ತು ಶ್ರೀ ಕೃಷ್ಣ ಮಾಸೋತ್ಸವದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೈಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಕೈಮಗ್ಗದ ಉದ್ದಿಮೆಗೆ ಮತ್ತು ಶ್ರೀ ಕೃಷ್ಣ ಮಾಸೋತ್ಸವಕ್ಕೆ ವಿಶೇಷವಾದ ಮೆರುಗನ್ನು ನೀಡಿದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷರಾದ ರತ್ನಾಕರ್ ಇಂದ್ರಾಳಿಯವರಿಗೆ ಪರ್ಯಾಯ ಪುತ್ತಿಗೆ ಶ್ರೀಗಳು ಶ್ರೀಕೃಷ್ಣ ಜಯಂತಿಯ ಅಂಗವಾಗಿ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿಯನ್ನು ನೀಡಿ […]

ಕಾಪು ಪುರಸಭೆ ನೂತನ ಅಧ್ಯಕ್ಷರಾಗಿ ಹರಿಣಾಕ್ಷೀ, ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಆಯ್ಕೆ

ಉಡುಪಿ: ಕಾಪು ಪುರಸಭೆಯ ನೂತನ ಅಧ್ಯಕ್ಷರಾಗಿ ಹರಿಣಾಕ್ಷೀ ಹಾಗೂ ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಅವರು ಆಯ್ಕೆಯಾದರು.ಕಾಪು ಪುರಸಭೆಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.