ಎಸ್ ಡಿಪಿಐ ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ

ಉಡುಪಿ: ಕೇಂದ್ರ ಸರ್ಕಾರದ ಜನಪರ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಅವರು ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಈ ಸಂದರ್ಭದಲ್ಲಿ […]
ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಉಡುಪಿ: ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ, ಸಾರಥಿ ಭವನ, ಉಡುಪಿ ಇದರ ಮಹಾಸಭೆಯು ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ 5 ವರ್ಷಗಳ ಅವಧಿಗೆ ಲೋಕೋಪಯೋಗಿ ಇಲಾಖೆಯ ಜಬಿಯುಲ್ಲಾಖಾನ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಧರ್ಮೇಂದ್ರ ಎಸ್, ಕಾರ್ಯದರ್ಶಿಯಾಗಿ ಸಮಾಜ ಕಲ್ಯಾಣ ಇಲಾಖೆಯ ದಾಮೋದರ, ಖಜಾಂಜಿಯಾಗಿ ಅಬಕಾರಿ ಇಲಾಖೆಯ ದಿನೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸಣ್ಣ ನೀರಾವರಿ ಇಲಾಖೆಯ ಟಿ.ಕೆ ದೇವದಾಸ್, ಜೊತೆ ಕಾರ್ಯದರ್ಶಿಯಾಗಿ ಆರೋಗ್ಯ ಇಲಾಖೆಯ ಸತೀಶ್ ಕೆ ಮತ್ತು […]
ಉಡುಪಿ:ಅರಿವು ಸಾಲ ಯೋಜನೆ:ಅರ್ಜಿ ಆಹ್ವಾನ

ಉಡುಪಿ:ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ)ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿ.ಇ.ಟಿ, ಪಿ.ಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್,), ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ (ಬಿ.ಆರ್ಕ್, ಎಂ. ಆರ್ಕ್), ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್ಸಿ ಇನ್ ಹಾರ‍್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೇರಿ ಟೆಕ್ನಾಲಜಿ, […]
ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಹಾಗೂ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಕ್ಷೇತ್ರ […]
ಸಾಲ ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ ಹಾಗೂ ಸಿಖ್ಖ್ಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ […]