ಚಾರ ನವೋದಯದಲ್ಲಿ : ಕನ್ನಡ ಗೀತಾ ಗಾನಯಾನ

ಹೆಬ್ರಿ: ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ಒಂದಕ್ಕೆ ಸೀಮಿತವಾಗಿರಬಾರದು ಎಂಬ ಉದ್ದೇಶವನ್ನಿಟ್ಟುಕೊಂಡು ಕನ್ನಡ ರಾಜ್ಯೋತ್ಸವದ ಸುವರ್ಣ ಕರ್ನಾಟಕದ ಅಂಗವಾಗಿ ವರ್ಷವಿಡಿ ಶಾಲಾ ಕಾಲೇಜುಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ಮಾಡುವುದರ ಮೂಲಕ ಕನ್ನಡದ ಕಂಪನ್ನು ನಾಡಿನೆಲ್ಲೆಡೆ ಪಸರಿಸುತ್ತಿರುವ ಏಕೈಕ ಸಂಸ್ಥೆ ಹೆಬ್ರಿಯ ಚಾಣಕ್ಯ ಸಂಗೀತ ತರಬೇತಿ ಕೇಂದ್ರ ಎಂದು ಹೆಬ್ರಿ ತಹಸೀಲ್ದಾರ್ ಪ್ರಸಾದ್ ಎಸ್.ಎ. ಹೇಳಿದರು. ಅವರು ಆ. 27ರಂದು ಚಾರ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸುವರ್ಣ ಕರ್ನಾಟಕದ ಅಂಗವಾಗಿ ಹೆಬ್ರಿಯ ಚಾಣಕ್ಯ […]

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ- ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

ಉಡುಪಿ: ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್ ಈ ಸಂಬಂಧ ಆತನ ಫೋಟೋಗಳನ್ನು ಬಿಡುಗಡೆ ಮಾಡಿದೆ. ಕಾರ್ಕಳ ಮತ್ತು ಉಡುಪಿ ಯುವ ಕಾಂಗ್ರೆಸ್ ನಾಯಕರು ಫೋಟೋ ಬಿಡುಗಡೆಗೊಳಿಸಿದ್ದು, ಬಿಜೆಪಿಯ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮೊದಲ ಆರೋಪಿ ಅಲ್ತಾಫ್ ಬಂಧನ ನಡೆದಾಗ ಬಿಜೆಪಿ ಪಟಾಲಂ ಅಬ್ಬರಿಸಿ ಬೊಬ್ಬಿರಿಯಿತು. ಸಂತ್ರಸ್ತ ಹುಡುಗಿ ಹಿಂದುವಾಗಿ ಕಂಡಳು. ಅತ್ಯಾಚಾರ ಪ್ರಕರಣವನ್ನು “ಜಿಹಾದಿ” ಕೃತ್ಯವಾಗಿ ಚಿತ್ರಿಸಲಾಯಿತು. ಸರಣಿ ಪ್ರತಿಭಟನೆ, ಪತ್ರಿಕಾ ಹೇಳಿಕೆಗಳು […]

“ಅನರ್ ಕಲಿ” ತುಳು ಸಿನಿಮಾಕ್ಕೆ ವ್ಯಾಪಕ ಪ್ರಶಂಸೆ

ಉಡುಪಿ: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ನಿರ್ಮಾಣಗೊಂಡ “ಅನರ್ ಕಲಿ” ತುಳು ಸಿನಿಮಾ ಆ. 23ರಂದು ತೆರೆಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಆ. 30ರಿಂದ ಉಡುಪಿಯ ಕಲ್ಪನಾ ಮತ್ತು ಕಾಸರಗೋಡಿನಲ್ಲಿ ತೆರೆ ಕಾಣಲಿದೆ. ಬಳಿಕ ಮುಂಬೈ, ಪೂನಾ, ಬೆಂಗಳೂರು ಹಾಗೂ ವಿದೇಶದಲ್ಲಿ ತೆರೆಕಾಣಲಿದೆ. ಈ ಕುರಿತು ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ದೇಶಕ ಹರ್ಷಿತ್ ಸೋಮೇಶ್ವರ್ ಅವರು, ‘ಅನರ್ ಕಲಿ” ಸಿನಿಮಾ ಒಂದೇ […]

ಉಡುಪಿ: ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ: ಆರೋಪಿ ಖುಲಾಸೆ.

ಉಡುಪಿ: ಬುದ್ಧಿಮಾಂದ್ಯ ಮಹಿಳೆಗೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕ್ಕುಂಜೆ ಗ್ರಾಮದ ನಿವಾಸಿ ಭಾಸ್ಕರ ಆಚಾರ್ಯ ಅವರನ್ನು ಖುಲಾಸೆಗೊಳಿಸಿ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂತ್ರಸ್ತೆ ನಿರ್ಮಾಣ ಹಂತದ ಕಟ್ಟಡದ ಮರದ ಕೆಲಸಕ್ಕೆ ಬಂದಿದ್ದ ವೇಳೆ ಆರೋಪಿ ಬುದ್ಧಿಮಾಂದ್ಯ ಮಹಿಳೆಯನ್ನು ಕಟ್ಟಡದ ಒಳಗೆ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದ. ಸಂತ್ರಸ್ತೆ ಗರ್ಭಿಣಿಯಾಗಿದ್ದರಿಂದ ಮನೆಯವರಿಗೆ ಈ ವಿಷಯ ತಿಳಿದು ಕೋಟ ಪೊಲೀಸ್‌ […]

ಉಡುಪಿ: ನದಿಯಲ್ಲಿ ಈಜಾಡಲು ಹೋಗಿದ್ದ ವಿದ್ಯಾರ್ಥಿ ಮೃತ್ಯು: ಇನ್ನೋರ್ವ ಗಂಭೀರ

ಉಡುಪಿ: ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ(ಆ 28) ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾನೆ. ಮೃತಪಟ್ಟ ವಿದ್ಯಾರ್ಥಿ ತ್ರಿವೆಂಡಮ್‌ನ ಆರೊನ್‌ ರೋಜರ್‌ ಲೀನ್‌(17). ಭಾನುವಾರ ಅಲೆವೂರಿನ ನೈಲಪಾದೆಯಲ್ಲಿ(ಆ 25) ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದಾನೆ. ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇನ್ನೋರ್ವ ಕೋಲ್ಕತ್ತಾದ ಮಾಧವ್‌(18) ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ವೇಳೆ ಇಬ್ಬರು ವಿದ್ಯಾರ್ಥಿಗಳು ಪಾರಾಗಿದ್ದರು. ನೀರಿನಲ್ಲಿ ಮುಳುಗಡೆಯಾಗಿದ್ದವರು ಸ್ಥಳೀಯರು ತುರ್ತು […]