ಉಡುಪಿ:ಬಹುಮಾನ ಹಣ ಮಂಜೂರು : ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ನಡೆದಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು […]
ನಟ ‘ದರ್ಶನ್’ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್..!
ಬೆಂಗಳೂರು, ಆ.29: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ಬೆಳಗಿನ ಜಾವ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿನತ್ತ ಕರೆದೊಯ್ಯಲಾಯಿತು. ಪೊಲೀಸ್ ವಾಹನದಲ್ಲಿ ಬಿಗಿ ಭದ್ರತೆಯೊಂದಿಗೆ ದರ್ಶನ್ ಅವರನ್ನು ಕರೆದೊಯ್ಯಲಾಯಿತು. ಮಾರ್ಗದ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸ್ ಭದ್ರತೆಯನ್ನು ಕೂಡ ನಿಯೋಹಜಿಸಲಾಗಿತ್ತು. ಆರೋಪಿ ಖ್ಯಾತ ನಟನಾಗಿದ್ದ ಹಿನ್ನಲೆ ಮಾರ್ಗದ ಮಧ್ಯೆ ಅಭಿಮಾನಿಗಳು ದೌಡಯಿಸುವ ಸಾಧ್ಯತೆ ಇದೆ. ಹೀಗಾಗಿ ಹಿರಿಯ ಅಧಿಕಾರಿಗಳ […]
ಕೊರಿಯೋಗ್ರಾಫರ್ ಕೆಲಸ ಮಾಡುತ್ತಿದ್ದ ಪತ್ನಿಯನ್ನು ಚಿತ್ರಹಿಂಸೆ ಕೊಟ್ಟು ಕೊಂದ ಪಾಪಿ ಪತಿ..!
ಬೆಂಗಳೂರು: ಕೊರಿಯೋಗ್ರಾಫರ್ ಕೆಲಸ ಮಾಡುತ್ತಿದ್ದ ಪತ್ನಿಯನ್ನು ಪತಿಯೇ ಚಿತ್ರಹಿಂಸೆ ಕೊಟ್ಟು ಕೊಂದಿರುವ ಘಟನೆ ಕೆಂಗೇರಿಯ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ನವ್ಯಾ (25) ಹಾಗೂ ಕೊಲೆ ಮಾಡಿದ ಪಾಪಿ ಪತಿ ಕಿರಣ್. ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ. ಆ.28ರಂದು ಮಧ್ಯಾಹ್ನ ಸಮಯದಲ್ಲಿ ಕೊಲೆ ನಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಚಿತ್ರಹಿಂಸೆ ಕೊಟ್ಟು ಕೊಲೆ:ಭದ್ರಾವತಿ ಮೂಲದ ನವ್ಯಾ, ಚಿಕ್ಕಬಳ್ಳಾಪುರ ಮೂಲದ ಕಿರಣ್ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ನವ್ಯಾ ಸಿನಿಮಾ ರಂಗದಲ್ಲಿ […]
ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ: 16ನೇ ವರ್ಷಕ್ಕೆ ಪಾದಾರ್ಪಣೆ.
ಮಂಗಳೂರು: ಪಾವೂರಿನಲ್ಲಿರುವ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರವು ಆ.26 ರಂದು ತನ್ನ ನಿಸ್ವಾರ್ಥ ಸೇವೆಯ ಹದಿನೈದನೇ ವರ್ಷಗಳನ್ನು ಕಳೆದು ಹದಿನಾರನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಈ ಐತಿಹಾಸಿಕ ಕ್ಷಣದಲ್ಲಿ ಸ್ನೇಹಾಲಯದ ಸ್ಪೂರ್ತಿಯಾದ ಸಂತ ಮದರ್ ತೆರೆಸಾರವರ ಗ್ರೊಟ್ಟೊ ಇದರ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯ ಅಂತೆಯೇ ಸಾಂಭ್ರಮಿಕ ಬಲಿಪೂಜೆಯನ್ನು, ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಅತಿ ವಂದನೀಯ ಸ್ವಾಮಿ ಅಲೋಶಿಯಸ್ ಪಾವ್ಲ್ ಡಿಸೋಜಾ ರವರು ನೆರವೇರಿಸಿದರು. ಗಂಟೆ 11:30 ಕ್ಕೆ ಸ್ನೇಹಾಲಯದ ಸಭಾಂಗಣದಲ್ಲಿ ಪುಟ್ಟ […]
ಬುಡಕಟ್ಟು ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಬುಡಕಟ್ಟು ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು ಅವರುಗಳ ಕಲ್ಯಾಣಕ್ಕೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸರಕಾರ ಜಾರಿಗೆ ತಂದಿದೆ. ಇವುಗಳ ಸಮರ್ಪಕ ಅನುಷ್ಠಾನ ಮಾಡುವುದರೊಂದಿಗೆ ಅವರುಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿನ್ಯಾಯ ಮಹಾ ಅಭಿಯಾನ ಯೋಜನೆಯ ಕಾರ್ಯಕ್ರಮ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ […]