ಉಡುಪಿ: ಹುಲಿವೇಷ ಸ್ಪರ್ಧೆಯಲ್ಲಿ ಪಡುಬೈಲೂರು ಶ್ರೀ ಇಷ್ಟ ಮಹಾಲಿಂಗೇಶ್ವರ ಬಳಗ ಪ್ರಥಮ
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪರ್ಯಾಯ ಶ್ರೀಕೃಷ್ಣ ಮಠ ಏರ್ಪಡಿಸಿರುವ ಹುಲಿವೇಷ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡುಬೈಲೂರು ಶ್ರೀ ಇಷ್ಟ ಮಹಾಲಿಂಗೇಶ್ವರ ಬಳಗದವರಿಗೆ ಸಾಯಿ ರಾಧಾ ಟಿವಿಎಸ್ ಸಂಸ್ಥೆಯಿಂದ ಒಂದು ಲಕ್ಷ ರೂ. ಬೆಲೆಬಾಳುವ ಸ್ಕೂಟರ್ ಕೀಯನ್ನು ಪರ್ಯಾಯ ಮಠಾಧೀಶರಾದ ಶ್ರೀಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಸ್ತಾಂತರಿಸಿದರು. ಸ್ಪರ್ಧೆಯಲ್ಲಿ ಶ್ರೀವಿಷ್ಣು ಸೇವಾ ಬಳಗ, ಅಲೆವೂರು ತಂಡಕ್ಕೆ ದ್ವಿತೀಯ ಬಹುಮಾನ ಐವತ್ತು ಸಾವಿರ ರೂ. ಸ್ವಾಮೀಜಿ ನೀಡಿದರು.