ಚಾರ ನವೋದಯದಲ್ಲಿ ಕನ್ನಡ ಗೀತಾ ಗಾನಯಾನ: ವರ್ಷವಿಡಿ ಕನ್ನಡ ಗೀತಾ ಗಾಯನ ಮಾಡಿದ ಏಕೈಕ ಸಂಸ್ಥೆ ಚಾಣಕ್ಯ- ಪ್ರಸಾದ್ ಎಸ್. ಎ.
ಹೆಬ್ರಿ: ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ಒಂದಕ್ಕೆ ಸೀಮಿತವಾಗಿರಬಾರದು ಎಂಬ ಉದ್ದೇಶವನ್ನಿಟ್ಟುಕೊಂಡು ಕನ್ನಡ ರಾಜ್ಯೋತ್ಸವದ ಸುವರ್ಣ ಕರ್ನಾಟಕದ ಅಂಗವಾಗಿ ವರ್ಷವಿಡಿ ಶಾಲಾ ಕಾಲೇಜುಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ಮಾಡುವುದರ ಮೂಲಕ ಕನ್ನಡದ ಕಂಪನ್ನು ನಾಡಿನೆಲ್ಲೆಡೆ ಪಸರಿಸುತ್ತಿರುವ ಏಕೈಕ ಸಂಸ್ಥೆ ಹೆಬ್ರಿಯ ಚಾಣಕ್ಯ ಸಂಗೀತ ತರಬೇತಿ ಕೇಂದ್ರ ಎಂದು ಹೆಬ್ರಿ ತಹಸೀಲ್ದಾರ್ ಪ್ರಸಾದ್ ಎಸ್.ಎ. ಹೇಳಿದರು. ಅವರು ಆ. 27ರಂದು ಚಾರ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸುವರ್ಣ ಕರ್ನಾಟಕದ ಅಂಗವಾಗಿ ಹೆಬ್ರಿಯ ಚಾಣಕ್ಯ […]
ಮೂಡುಬಿದಿರೆ: ಆಳ್ವಾಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ‘ಸಿಎ’ ಕೌನ್ಸೆಲಿಂಗ್ ಪ್ರೋಗ್ರಾಮ್
ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಐ.ಸಿ.ಎ.ಐ ಮಂಗಳೂರು ಚಾಪ್ಟರ್ ವತಿಯಿಂದ ಆಳ್ವಾಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಎ ವೃತ್ತಿಯ ಕುರಿತು ಮಾಹಿತಿ ಕಾರ್ಯಕ್ರಮ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ- ಇತ್ತೀಚಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಇಲ್ಲವೇ ತಾಂತ್ರಿಕ ಪದವಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ, ಆದರೆ ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನೂರಾರು ದಾರಿಗಳಿವೆ. ಅದನ್ನು ಅವರು ಅರಿತುಕೊಳ್ಳಬೇಕು […]
ಸೌಜನ್ಯ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ನ ವಿಭಾಗೀಯ ಪೀಠ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ನ್ಯಾಯಪೀಠ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಪ್ರಕರಣದ […]
ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್! ಸ್ಥಳೀಯರಿಂದ ಅಡ್ಡಿ, ಯುವತಿಯ ಆಕ್ರೋಶ
ಉಡುಪಿ: ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬರ ಬಿಕಿನಿ ಫೋಟೋಶೂಟ್ ಈಗ ವಿವಾದದ ಸ್ವರೂಪ ಪಡೆಯುತ್ತಿದೆ. ಈ ಯುವತಿ ಫೋಟೋಶೂಟ್ ಮಾಡುತ್ತಿರುವಾಗ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ ಎಂದು ಸ್ವತಃ ಯುವತಿ ಆರೋಪಿಸಿದ್ದಾರೆ. ತನ್ನ ಇನ್ ಸ್ಟಾಗ್ರಾಮ್‌ನಲ್ಲಿ ಫೋಟೋಶೂಟ್ ಮಾಡಿದ ಫೋಟೋಗಳ ಸಹಿತ ಮಾಹಿತಿಯನ್ನು ಯುವತಿ ಹಂಚಿಕೊಂಡಿದ್ದಾರೆ. ಈಕೆ ಹೊರರಾಜ್ಯದ ಮಾಡೆಲ್ ಎನ್ನಲಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸಲು ಸ್ಥಳೀಯರು ಯಾರು? ಬೀಚ್ ಸಾರ್ವಜನಿಕ ಪ್ರದೇಶದಲ್ಲಿ ಫೋಟೋಶೂಟ್ ಮಾಡಿಕೊಂಡರೆ ತಪ್ಪೇನು? ಬಿಕಿನಿ ಹಾಕಿಕೊಂಡು ಫೋಟೋಶೂಟ್ ಮಾಡುವುದು ಕಾನೂನು […]
ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀಚಕ್ರ ಮಂಡಲ ಪೂಜೆ ಸಂಪನ್ನ
ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಏಕಕಾಲ ಶ್ರೀ ಚಕ್ರ ಮಂಡಲ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ಕುಕ್ಕಿ ಕಟ್ಟೆ ವೇದಮೂರ್ತಿ ರಾಘವೇಂದ್ರ ತಂತ್ರಿ ಗಳವರ ಪ್ರಧಾನತ್ವದಲ್ಲಿ ಬಹು ವಿಜೃಂಭಣೆಯಿಂದ ಸಂಪನ್ನಗೊಂಡಿತು… ಆ ಪ್ರಯುಕ್ತ ಕ್ಷೇತ್ರದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ,, ನಂತರ ಶಾಸ್ತ್ರೋಕ್ತವಾದ ಅರಣಿಮಥನದಿಂದ ಅಗ್ನಿ ಜನನಗೊಳಿಸಿ ಆದ್ಯ ಗಣಪತಿಯಾಗ ನೆರವೇರಿಸಲಾಯಿತು.. ಶ್ರೀ ಚಕ್ರ ಮಂಡಲ ಪೂಜೆಗೆ ವಿಶೇಷವಾಗಿ […]