ಉಡುಪಿ :ಅರಿವು ಸಾಲ ಯೋಜನೆ : ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ)ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿ.ಇ.ಟಿ, ಪಿ.ಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್,), ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ (ಬಿ.ಆರ್ಕ್, ಎಂ.ಆರ್ಕ್), ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್ಸಿ ಇನ್ ಹಾರ‍್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೇರಿ ಟೆಕ್ನಾಲಜಿ, […]
ವಿಶ್ವಕರ್ಮ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ
ಉಡುಪಿ: ಪ್ರಧಾನಮಂತ್ರಿ ವಿಶ್ವಕರ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭವು ಬುಧವಾರ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ವಿಶ್ವಕರ್ಮ ಯೋಜನೆಯ ಮಾಹಿತಿಯನ್ನು ನೀಡುವುದರೊಂದಿಗೆ ಕುಶಲಕರ್ಮಿಗಳು ವಿಶ್ವಕರ್ಮ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ, ಅಧಿಕಾರಿಗಳ ಪರಿಶ್ರಮದಿಂದ ಮಾತ್ರ ವಿಶ್ವಕರ್ಮ ಯೋಜನೆಯು ಸಫಲ ಹೊಂದಿ ಫಲಾನುಭವಿಗಳಿಗೆ ತಲುಪಲು ಸಾಧ್ಯ […]
ಸೆಪ್ಟೆಂಬರ್ 2ರಿಂದ ಜಿಲ್ಲೆಯಲ್ಲಿ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ- ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 2 ರಿಂದ ‘ಎನಿವೇರ್ ನೋಂದಣಿ ವ್ಯವಸ್ಥೆ’ಯನ್ನು ಜಾರಿಗೆ ತರಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ‘2011ರಲ್ಲಿ ಬೆಂಗಳೂರು ಹಾಗೂ 2024ರಲ್ಲಿ ತುಮಕೂರು ಮತ್ತು ಬೆಳಗಾವಿಯಲ್ಲಿ ಜಾರಿಯಾಗಿರುವ ಎನಿವೇರ್ ನೋಂದಣಿ ವ್ಯವಸ್ಥೆಯು ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 2ರಿಂದ ಜಾರಿಯಾಗಲಿದೆ. ಈ ಜಿಲ್ಲೆಗಳಲ್ಲಿ ವ್ಯವಸ್ಥೆಯ ಯಶಸ್ವಿ ಕಾರ್ಯನಿರ್ವಹಣೆಯ ಕಾರಣದಿಂದ ಉಡುಪಿ ಜಿಲ್ಲೆಯ ಉಪ-ನೋಂದಣಿ ಕಚೇರಿಗಳಿಗೂ ಈ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದರು. ಪ್ರಸ್ತುತ, ಸಾರ್ವಜನಿಕರಿಗೆ ಸ್ಥಿರಾಸ್ತಿ ಇರುವ […]
ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢ: ಶಾಸಕ ಯಶ್‌ಪಾಲ್ ಎ ಸುವರ್ಣ
ಉಡುಪಿ: ವ್ಯಕ್ತಿಯನ್ನು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವಲ್ಲಿ ಕ್ರೀಡೆಯು ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯು ನಮ್ಮನ್ನು ದೈಹಿಕವಾಗಿ ಸದೃಢರನ್ನಾಗಿ ಮಾಡುವುದರೊಂದಿಗೆ ಕ್ರಿಯಾಶೀಲರನ್ನಾಗಿ ಮಾಡುತ್ತದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪಿ.ಜಿ.ಎ.ವಿ ಹಾಲ್‌ನಲ್ಲಿ, ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ), ಲಯನ್ಸ್ ಕ್ಲಬ್ ಮಿಡ್‌ಟೌನ್ ಉಡುಪಿ, ಕಾಲೇಜಿನ […]
ಪ್ರತಿಯೊಬ್ಬರೂ ಚಾಲ್ತಿಯಲ್ಲಿರುವ ಆಧಾರ್ ಕಾರ್ಡ್ ಹೊಂದಬೇಕು: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯ ಪ್ರತಿಯೊಬ್ಬ ನಾಗರೀಕನ ದೈನಂದಿನ ಜೀವನದಲ್ಲಿ ಆಧಾರ್ ಕಾರ್ಡ್ ಮಹತ್ವದ್ದಾಗಿದ್ದು, ವ್ಯಕ್ತಿಯನ್ನು ಗುರುತಿಸುವುದು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯವಾಗಿದ್ದು ಇದನ್ನು ಪ್ರತಿಯೊಬ್ಬರು ಚಾಲ್ತಿಯಲ್ಲಿರುವ ಆಧಾರ್ ಗುರುತಿನ ಚೀಟಿ ಹೊಂದಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಭಾರತೀಯ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ […]