ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನಲ್ಲಿ ಭಾರತಕ್ಕೆ ಐದನೇ ಪದಕ: ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್.

ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಶೂಟರ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದು, ರುಬಿನಾ ಫ್ರಾನ್ಸಿಸ್ ಅವರು ಮಹಿಳೆಯರ ಏರ್ ಪಿಸ್ತೂಲ್ SH1 ಸ್ಪರ್ಧೆಯ ಫೈನಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಶೂಟಿಂಗ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಹಾಗೂ ಒಟ್ಟಾರೆ ಪದಕಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಆ.31 ರಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. […]

40 ವರ್ಷದ ಹಿಂದಿನ ಅಮ್ಮನ ಹರಕೆ ಇಂದು ಈಡೇರಿದೆ

ಉಡುಪಿ: 40 ವರ್ಷದಿಂದ ನನ್ನ ಅಮ್ಮನಿಗೆ ಒಂದು ಆಸೆ ಇತ್ತು. ಮಗನನ್ನೊಮ್ಮೆ ಕೃಷ್ಣಮಠಕ್ಕೆ ಕರೆದುಕೊಂಡು ಬರಬೇಕು ಎಂಬ ಆಸೆ ಇವತ್ತು ಈಡೇರಿದೆ. ಶ್ರಾವಣ ಮಾಸದ ವಿಶೇಷ ದಿನ ಹರಕೆ ಈಡೇರಿದ್ದು ಸಂತೋಷವಾಗಿದೆ ಎಂದು ಟಾಲಿವುಡ್ ನ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ಹೇಳಿದರು. ಉಡುಪಿ ಕೃಷ್ಣಮಠಕ್ಕೆ ಇಂದು ಭೇಟಿ ನೀಡಿದ ಅವರು ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಿಷಬ್ ಶೆಟ್ಟಿ ತುಂಬಾ ಇಷ್ಟಪಟ್ಟ ದೇವರು ಕೊಟ್ಟ ಗೆಳೆಯ. ರಿಷಬ್ ಜೊತೆ ಮಠಕ್ಕೆ […]

ನಿಟ್ಟೆ ವಿವಿಯ 14ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ

ಕಾರ್ಕಳ: ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯಗಳನ್ನು ಸುಧಾರಿಸುತ್ತದೆ. ಜತೆಗೆ ವ್ಯಕ್ತಿತ್ವ ಮತ್ತು ಮನೋಭಾವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ಶ್ರೀರಾಮ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಉಮೇಶ್ ಗೋವಿಂದ ರೇವಣ್ಕರ್ ಅಭಿಪ್ರಾಯಪಟ್ಟರು. ಅವರು ಕಾರ್ಕಳ ತಾಲೂಕಿನ ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಸದಾನಂದ ಸಭಾಂಗಣದಲ್ಲಿ ನಡೆದ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ‘ನಾವು ಅಂದುಕೊಂಡದ್ದು ನಡೆದೇ ನಡೆಯುತ್ತದೆ ಎನ್ನಲಾಗದು. ಅಂದುಗೊಂಡಂತಹ ಕಾರ್ಯ ನಡೆಯದಿದ್ದರೆ ಧೃತಿಗೆಡದೆ ಮುನ್ನಡೆಯಬೇಕು. ಶಿಕ್ಷಣ ಎಂಬುದು ಪ್ರತಿ […]

ವೈದ್ಯೇತರ ಸಿಬ್ಬಂದಿಗಳಿಗೆ ಬೇಸಿಕ್ ಲೈಫ್ ಸಪೋರ್ಟ್ ತರಬೇತಿ ಕಾರ್ಯಗಾರ

ಉಡುಪಿ: ತಾ 31.08.2024ರಂದು ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾ ಇದರ ಉಡುಪಿ ಶಾಖೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆ, ಲಯನ್ಸ್ ಕ್ಲಬ್ ನ ಉಡುಪಿ ಶಾಖೆ ಹಾಗೂ ರಾಜೀವ್ ಗಾಂಧಿ ಹೆಲ್ತ್ ಯೂನಿವರ್ಸಿಟಿ ಇವರಿಂದ ಜಂಟಿಯಾಗಿ ಉಡುಪಿಯ ಖಾಸಗಿ ಆಸ್ಪತ್ರೆಗಳ ವೈದ್ಯೇತರ ಸಿಬ್ಬಂದಿಗಳಿಗೆ ತುರ್ತು ಚಿಕಿತ್ಸೆಯ ಸಮಯದಲ್ಲಿ ಪ್ರಾಣ ಉಳಿಸುವ ಬೇಸಿಕ್ ಲೈಫ್ ಸಪೋರ್ಟ ಇದರ ತರಬೇತಿ ಕಾರ್ಯಗಾರವನ್ನು ಉಡುಪಿಯ ಐಎಂಎ ಭವನದಲ್ಲಿ ನಡೆಸಲಾಯಿತು. ಕಿಮ್ಸ್ ಹುಬ್ಬಳ್ಳಿ ಇದರ ತಜ್ಞ ವೈದ್ಯರಾದ ಡಾ.ಎಸ್ […]

ಸೆ.3ರಿಂದ ಉಡುಪಿ ಜಿಲ್ಲಾ ಸಮಾವೇಶ, 26ನೇ ಉಚಿತ ವೈದ್ಯಕೀಯ ತಪಾಸಣೆ, ಮಾಹಿತಿ ಜಾಗೃತಿ ಶಿಬಿರ

ಉಡುಪಿ: ಸೇವಾಭಾರತಿ ಸೇವಾಧಾಮ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ಮೂರು ದಿನಗಳ ಉಡುಪಿ ಜಿಲ್ಲಾ ಸಮಾವೇಶ ಹಾಗೂ 26ನೇ ಉಚಿತ ವೈದ್ಯಕೀಯ ತಪಾಸಣೆ, ಮಾಹಿತಿ ಜಾಗೃತಿ ಶಿಬಿರವನ್ನು ಸೆಪ್ಟೆಂಬರ್ 3, 4 ಮತ್ತು 5ರಂದು ಉಡುಪಿ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ದಿವ್ಯಾಂಗ ರಕ್ಷಣಾ ಸಮಿತಿಯ ಸಂಚಾಲಕ ವಿಜಯ ಕೊಡವೂರು ಹೇಳಿದರು. ಉಡುಪಿಯಲ್ಲಿಂದು ನಡೆದ […]