ಉಡುಪಿಯ ಪಾರಂಪರಿಕ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ

ಉಡುಪಿ ನಗರದ ಐತಿಹಾಸಿಕ ಕಟ್ಟಡಗಳಲ್ಲಿ ಒಂದಾದ, ಸ್ವಾತಂತ್ರ್ಯ ಪೂರ್ವದಲ್ಲಿ ಸಬ್‌ ಜೈಲ್‌ ಆಗಿದ್ದ, ಹಳೆ ತಾಲೂಕು ಕಚೇರಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಬ್ರಿಟಿಷರ ಆಳ್ವಿಕೆ ಇದ್ದ 1906ರಲ್ಲಿ ನಿರ್ಮಾಣವಾಗಿದ್ದ ಈ ಕಟ್ಟಡವನ್ನು ಪಾರಂಪರಿಕ ಕಟ್ಟಡ ಮಾನ್ಯತೆಯೊಂದಿಗೆ ಉಳಿಸಲು ನಡೆಸಿದ ಪ್ರಯತ್ನಗಳು ವಿಫ‌ಲವಾಗಿವೆ. ಇದೀಗ ಕಟ್ಟಡವನ್ನು ನೆಲಸಮಗೊಳಿಸುವ ನಿಟ್ಟಿನಲ್ಲಿ ಅದರ ಹೆಂಚುಗಳನ್ನು ತೆಗೆಯುವ ಕಾರ್ಯ ಆರಂಭಗೊಂಡಿದೆ. ಈ ಜಾಗದಲ್ಲಿ ಇನ್ನು ನಗರಸಭೆಯ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿ ಉಡುಪಿ ನಗರದಲ್ಲಿರುವ ವಿರಳ ಪಾರಂಪರಿಕ ಕಟ್ಟಡಗಳಲ್ಲಿ […]

ಮಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ನಿಶ್ಶಬ್ದ ಪ್ರತಿಭಟನೆ.

ಮಂಗಳೂರು: ಕೊಲ್ಕತ್ತಾ ವೈದ್ಯೆಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆಯ ಹಿನ್ನೆಲೆಯಲ್ಲಿ ಮತ್ತು ದೇಶಾದ್ಯಂತ ಹೆಚ್ಚುತ್ತಿರುವ ಲಿಂಗ ಆಧಾರಿತ ಹಿಂಸಾಚಾರದ ಘಟನೆಗಳಿಗೆ ಪ್ರತಿಭಟನೆಯಾಗಿ, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ, ಆಗಸ್ಟ್ 27ರಂದು ಸಂಜೆ 6:30 ಕ್ಕೆ ನಿಶ್ಶಬ್ದ ಪ್ರತಿಭಟನೆ ಆಯೋಜಿಸಿತು. ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಈ ಘಟನೆಯು ಲೈಂಗಿಕ ಹಿಂಸೆಯ ಬಲಿಪಶುಗಳ ಸ್ಮರಣಾರ್ಥವಾಗಿತ್ತು. ಎನ್‌ಎಸ್‌ಎಸ್ ಘಟಕ 5ರ ನೇತೃತ್ವದಲ್ಲಿ ಪ್ರೋಗ್ರಾಂ ಅಧಿಕಾರಿ ಶ್ರೀ ಮಹೇಶ್ ಡಿ.ಕೆ. ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸುಮಾರು 1,800 ವಿದ್ಯಾರ್ಥಿಗಳು ಮತ್ತು […]

ಪಡುಬಿದ್ರೆ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಅಸಭ್ಯ ಫೋಟೊ ಶೂಟ್ ವಿವಾದ: ಪೊಲೀಸ್ ಇಲಾಖೆ ಸ್ಪಷ್ಟನೆ.

ಉಡುಪಿ: ಪಡುಬಿದ್ರೆ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಫೋಟೊ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ಒಬ್ಬ ಯುವತಿ ಹಾಗೂ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದು, ಅದರಂತೆ ಬೀಟ್ ಕರ್ತವ್ಯದಲ್ಲಿದ್ದ ಎಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ಪಡುಬಿದ್ರೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿದ್ದ ಯುವಕ ಹಾಗೂ ಯುವತಿಯನ್ನು ಕರೆದು ಬ್ಲೂಫ್ಲ್ಯಾಗ್ ಬೀಚ್ ವಸತಿ ಪ್ರದೇಶವಾಗಿರುವ ಬಗ್ಗೆ ಮನವರಿಕೆ ಮಾಡಿದ್ದು, ಅವರು ಅಲ್ಲಿಂದ ತೆರಳಿದ್ದರು. ಅಲ್ಲಿ ಯಾವುದೇ ಅಹಿತಕರ ಘಟನೆ […]

ಉಡುಪಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ.

ಉಡುಪಿ, ಆ.30: ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಸನಿಹ ಇರುವ, ಸರಕಾರಿ ಬಾವಿ ಬಳಿ, ಅಪರಿಚಿತ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆಯು ಶುಕ್ರವಾರ ನಡೆದಿದೆ. ಶವವು ನೇಣು ಕುಣಿಕೆಯಲ್ಲಿ ಕಂಡುಬಂದಿದ್ದು, ಮೃತಪಟ್ಟು ಹತ್ತು ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ ಎಸ್.ಐ ಪುನೀತ್ ಕುಮಾರ್ ಬಿ.ಇ, ಎ.ಎಸ್.ಐ ಹರೀಶ್, ಜಾಸ್ವ, ಹಾಗೂ ರೈಲ್ವೆ ಆರ್.ಪಿ.ಎಫ್ ಸುಧೀರ್ ಶೆಟ್ಟಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊಳೆತು ಗಬ್ಬು ವಾಸನೆ ಹೊಡೆಯುತ್ತಿದ್ದ ಕಳೇಬರವನ್ನು […]

ಶುಲ್ಕ ಮರುಪಾವತಿ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಶಾನಬದ್ಧ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ –ಎಸ್.ಎಸ್.ಪಿ ತಂತ್ರಾಂಶದಲ್ಲಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ […]