ಮತ್ತೆ ಸಿಲಿಂಡರ್ ಬೆಲೆ ದುಬಾರಿ: ಇಂದಿನಿಂದ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಹೆಚ್ಚಳ.

ದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ.14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ […]

ಉಡುಪಿ ಮಣಿಪಾಲದ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶಗಳು

ಉಡುಪಿ ಮಣಿಪಾಲದ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶಗಳು.ಇಂದೇ ಆನ್ಲೈನ್ ಮೂಲಕ ರಿಜಿಸ್ಟರ್ ಮಾಡಿ. https://docs.google.com/forms/d/e/1FAIpQLSd0RJe9MRm70Khqh1Ryx-EN8VJODcuqhwWa-ATvjcLuIaXZaA/viewform?usp=sf_link

ಉಡುಪಿ: ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ.

ಉಡುಪಿ: ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಭಾದ್ರಗಡ ದ್ವೀಪ, ಮಿಡಲ್ ದ್ವೀಪ(ಕೋಟೆ), ಮಾಡ್ತೀಗುಡ್ಡ ದ್ವೀಪ ಹಾಗೂ ಮಟ್ಟುಪಾರ್ ದ್ವೀಪ ಎಂಬ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.