ಪರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಶೇ.15% ಡಿವಿಡೆಂಡ್ ಘೋಷಣೆ.
ಉಡುಪಿ: ಸೊಸೈಟಿಯ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 1ರಂದು ಮಣಿಪಾಲದ ಆರ್.ಎಸ್.ಬಿ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಅಶೋಕ್ ಕಾಮತ್ ಕೊಡಂಗೆರವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಸ್ಥೆಯ ಉಪಾಧ್ಯಕ್ಷರಾದ ಪಾಂಡುರಂಗ ಕಾಮತ್ ಸ್ವಾಗತಿಸಿದರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ನಾಯಕ್ ವಾರ್ಷಿಕ ವರದಿ ,ಲೆಕ್ಕಪತ್ರ, ಮುಂದಿನ ಸಾಲಿನ ಆಯವ್ಯಯ ಮಂಡಿಸಿದರು. ಸಂಘದ ಪಾಲುಬಂಡವಾಳ ರೂ.1.80 ಕೋಟಿ, ಠೇವಣಿ ರೂ.116.86 ಕೋಟಿ, ಸ್ವಂತ ನಿಧಿ ರೂ.11.68 ಕೋಟಿ , ಹೊರಬಾಕಿ ಸಾಲಗಳು ರೂ.82.45 ಕೋಟಿ ಹೊಂದಿ ರೂ.2.59 ಕೋಟಿ ನಿವ್ವಳ […]
ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಜೂನಿಯರ್ ಎನ್ ಟಿಆರ್, ರಿಷಬ್ ಶೆಟ್ಟಿ ಭೇಟಿ
ಉಡುಪಿ: ತೆಲುಗಿನ ಖ್ಯಾತ ನಟ ಜೂನಿಯರ್ ಎನ್ ಟಿಆರ್ ಹಾಗೂ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ಮೂಡಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು. ಜ್ಯೂನಿಯರ್ ಎನ್ ಟಿಆರ್, ರಿಷಬ್ ಶೆಟ್ಟಿ ಅವರು ಬೆಟ್ಟದ ತಪ್ಪಲಿನಲ್ಲಿ ಓಡಾಡುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಮ್ಮನ ಆಸೆ ತೀರಿಸಲು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಜ್ಯೂ.ಎನ್ ಟಿ ಆರ್ ಅವರು, ಗೆಳೆಯ ರಿಷಬ್ ಜೊತೆ ತನ್ನ […]
ತ್ರಿಶಾ ಕ್ಲಾಸಸ್ : ಸಿ ಎಸ್ ಎಕ್ಸಿಕ್ಯೂಟಿವ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
ಮಂಗಳೂರು : ಸಿ ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಗಳೂರಿನ ತ್ರಿಶಾ ಕ್ಲಾಸಸ್ ವತಿಯಿಂದ ಸನ್ಮಾನ ಕಾರ್ಯಕ್ರಮವು ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ನ ಸಭಾಂಗಣದಲ್ಲಿ ಆಗಸ್ಟ್ 31 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ.ನಾರಾಯಣ್ ಕಾಯರ್ಕಟ್ಟೆ ಇವರು ವಿದ್ಯಾರ್ಥಿಗಳು ವಿಷಯಗಳನ್ನು ಪ್ರಾಯೋಗಿಕವಾಗಿ ಕಲಿಯಬೇಕು. ಷೇರು ಮಾರುಕಟ್ಟೆಯಲ್ಲಿ ಮತ್ತು ಕಾನೂನುಗಳಲ್ಲಿ ಆಗುವ ನಿರಂತರ ಬದಲಾವಣೆಗಳನ್ನು ತಿಳಿದುಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವಕಾಶಗಳು ಹಲವು, ಅವುಗಳಲ್ಲಿ ಯಶಸ್ವಿಯಾಗಲು […]
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಹಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್.ಎಸ್.ಪಿತಂತ್ರಾಂಶದಲ್ಲಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ […]
ಬಹುಮಾನ ಹಣ ಮಂಜೂರು : ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ನಡೆದಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು […]