ಉಡುಪಿ ಅಂಬಲಪಾಡಿಯ ಹೆಸರಾಂತ ಎಲ್ಇಡಿ ಪಾಯಿಂಟ್ ಲೈಟಿಂಗ್ ಶೋರೂಮ್’ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ.
ಉಡುಪಿ: ಅಂಬಲಪಾಡಿಯ ಹೆಸರಾಂತ ಎಲ್ಇಡಿ ಪಾಯಿಂಟ್ ಲೈಟಿಂಗ್ ಶೋರೂಮ್’ನಲ್ಲಿ ವಿವಿಧ ಹುದ್ದೆಗಳಿಗೆ ತಕ್ಷಣ ನೇಮಕಾತಿ ನಡೆಯಲಿದೆ. ◼️ಫಿಲಿಪ್ಸ್ ಲೈಟಿಂಗ್/ ಡೆಕೋರೇಟಿವ್ ಲೈಟ್ಸ್ ಮಾರ್ಕೆಟಿಂಗ್ ಪ್ರಮೋಟರ್- 3 ಪೋಸ್ಟ್ ◼️ಲೈಟ್ ಫಿಟ್ಟಿಂಗ್‌ಗಳೊಂದಿಗೆ ಎಲೆಕ್ಟ್ರಿಷಿಯನ್ ಕೆಲಸ -1 ಪೋಸ್ಟ್ ಉತ್ತಮ ಸಂಬಳ ಜೊತೆಗೆ ಇನ್ಸೆಂಟಿವ್ ಕೂಡ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪದವೀಧರರು ಹಾಗೂ ದ್ವಿಚಕ್ರ ವಾಹನ ಪರವಾನಿಗೆ ಕಡ್ಡಾಯ ಹೊಂದಿರಬೇಕು. ಉಡುಪಿ ಸುತ್ತಮುತ್ತಲಿನ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಕೂಡಲೇ ಸಂಪರ್ಕಿಸಿ:ಎಲ್ಇಡಿ ಪಾಯಿಂಟ್ ಅಂಬಲಪಾಡಿ, ಹೆಗ್ಡೆ […]
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ
ಉಡುಪಿ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಮಹಾಸಭೆಯು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಜೆಸಿಂತಾ ಡಿ ಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಹಕಾರಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ಮಾತನಾಡಿ, ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು ತಮ್ಮೆಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ನಮಗೆ ಸಂತೋಷವಾಗುತ್ತದೆ. ಮುಂದಿನ ಆರ್ಥಿಕ ವರ್ಷದಲ್ಲಿ ಹೊಸ ಯೋಜನೆಗಳಿಗೆ ಸದಸ್ಯರ ಸಹಕಾರವಿರಲಿ ಎಂದರು. ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ನೇರಿ ಕರ್ನೆಲಿಯೋ, […]
ಕುರಾನ್ ಪುಸ್ತಕ ಕೊಟ್ಟು ಮತಾಂತರಾಗಬೇಕೆಂದು ಒತ್ತಾಯಿಸಿದ್ದಾನೆ
ಉಡುಪಿ: ಮಣಿಪಾಲದ ವೈದ್ಯ ವಿದ್ಯಾರ್ಥಿನಿಗೆ ಸಹಪಾಠಿ ವೈದ್ಯ ಲೈಂಗಿಕ ಕಿರುಕುಳ ನೀಡಿ ಮತಾಂತರಕ್ಕೆ ಒತ್ತಾಯಿಸಿದ್ದಾಗಿ ವೈದ್ಯ ವಿದ್ಯಾರ್ಥಿನಿಯೊಬ್ಬಳು ಉಡುಪಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ,ಉಡುಪಿ ಎಸ್ ಪಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗೆ ಸೂಕ್ತ ಶಿಕ್ಷೆಯನ್ನು ನೀಡಬೇಕು. ಜಿಲ್ಲೆಯಾದ್ಯಂತ ಇರುವ ಡ್ರಗ್ಸ್ ಜಾಲದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಯುವತಿ ಸಂಸದರ ಮೂಲಕ ನನ್ನನ್ನು ಸಂಪರ್ಕ ಮಾಡಿದ್ದಾಳೆ ಎಂದಿರುವ ಶಾಸಕರು, ‘ನಿಮ್ಮ ದೇವರ […]
IC 814 ವೆಬ್ ಸೀರೀಸ್ ವಿವಾದ: ತಪ್ಪನ್ನು ಸರಿಪಡಿಸುವುದಾಗಿ ಭಾರತ ಸರ್ಕಾರಕ್ಕೆ Netflix India ಭರವಸೆ.
ನವದೆಹಲಿ: ಒಟಿಟಿ Netflix India “IC 814 ವೆಬ್ ಸೀರೀಸ್” ನ ಕಂಟೆಂಟ್ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ತಪ್ಪನ್ನು ಸರಿಪಡಿಸುವುದಾಗಿ ಭಾರತ ಸರ್ಕಾರಕ್ಕೆ ಭರವಸೆ ನೀಡಿದೆ. IC-814- ದಿ ಕಂದಹಾರ್ ಹೈಜಾಕ್ ಕುರಿತ ವೆಬ್ ಸೀರೀಸ್ ನಲ್ಲಿ ಹೈಜಾಕ್ ಮಾಡಿದವರನ್ನು ಚಿತ್ರಿಸಿದ ರೀತಿ ವಿವಾದಕ್ಕೀಡಾಗಿರುವ ಹಿನ್ನೆಲೆಯಲ್ಲಿ Netflix India ಮುಖ್ಯಸ್ಥರಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ್ದ Netflix India ಮುಖ್ಯಸ್ಥರು ಕಂಟೆಂಟ್ ನ್ನು ಪರಿಷ್ಕರಿಸುವುದಾಗಿ […]
ಉಡುಪಿ: ವೈದ್ಯನಿಂದ ಕಿರುಕುಳ ಆರೋಪ; ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದ ದೂರು
ಉಡುಪಿ: ವೈದ್ಯನೊಬ್ಬ ತನ್ನ ಸಹಪಾಠಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ಈ ಸಂಬಂಧ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕಿರುಕುಳ ನೀಡಿದ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಹೊರರಾಜ್ಯದವರಾದ ಇವರು ಆರಂಭದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗ ಡ್ಯಾನಿಷ್, ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ ಎನ್ನಲಾಗಿದೆ. ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕ್ಯಾಂಪಸ್ ನಲ್ಲಿ ಪರಿಚಯವಾಗಿತ್ತು. ನಂತರ 2024 ರ ಜನವರಿ 22 ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ […]