ಉಡುಪಿ: ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಸಮಸ್ತ ಬಂಟ ಸಮಾಜದ ಅಭಿನಂದನೆ.
ಉಡುಪಿ : ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇದರ ಉಡುಪಿ ತಾಲೂಕು ಸಮಿತಿ ವತಿಯಿಂದ ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಿ ಸನ್ಮಾನಿಸಲಾಯಿತು. ಸಮಿತಿ ವತಿಯಿಂದ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಭಾನುವಾರ ನಡೆದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ ಇವರಿಂದ ಬಡಗುತಿಟ್ಟು […]
ಉಡುಪಿಯ ಪ್ರತಿಷ್ಠಿತ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್ /ವಿಡಿಯೋ ಎಡಿಟರ್ ತಕ್ಷಣ ಬೇಕಾಗಿದ್ದಾರೆ
ಉಡುಪಿ: ಉಡುಪಿಯ ಪ್ರತಿಷ್ಠಿತ ಜಾಹೀರಾತು ಕಂಪೆನಿಗೆ ವಿಡಿಯೋ ಎಡಿಟರ್/ ಗ್ರಾಫಿಕ್ ಡಿಸೈನರ್ ತಕ್ಷಣ ಬೇಕಾಗಿದ್ದಾರೆ. ಕಮರ್ಷಿಯಲ್ ಗ್ರಾಫಿಕ್ ಡಿಸೈನ್ನಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವವಿದ್ದು ಫೋಟೋಶಾಪ್ ಕೊರಿಯಲ್ ಸ್ಟೇಟಸ್ ಮತ್ತು ವಿಡಿಯೋ ಎಡಿಟಿಂಗ್ ನಲ್ಲಿ ಪ್ರಾವೀಣತೆ ಹೊಂದಿರಬೇಕು.ಉತ್ತಮ ವೇತನ ನೀಡಲಾಗುವುದು. ಉಡುಪಿಯಸು ಪಾಸಿನವರಿಗೆ ಮೊದಲ ಆದ್ಯತೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448379989 ಉತ್ತಮ ವೇ ಉತ್ತಮ ವೇತನ ನೀಡಲಾಗುವುದು
ಉಡುಪಿ: ಆನ್‌ಲೈನ್ ವಂಚನೆ ಪ್ರಕರಣ; ಆರೋಪಿ ಸೆರೆ, 1,56,100 ರೂ. ನಗದು ವಶ.
ಉಡುಪಿ: ಆನ್‌ಲೈನ್ ಸೈಬರ್ ವಂಚನೆ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ 1,56,100 ರೂಪಾಯಿ ನಗದು ವಶಪಡಿಸಿಕೊಳ್ಳುವಲ್ಲಿ ಉಡುಪಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಒಡಿಶಾದ ಗಂಜಾಂ ಜಿಲ್ಲೆಯ ನಿವಾಸಿ ವಿಶಾಲ್ ಕೊನಪಾಲ (30). ವಿದೇಶದಲ್ಲಿ ಉದ್ಯೋಗದಲ್ಲಿರುವ ದೂರುದಾರ ಬೆಳ್ಮಣ್‌ನ ಜಯ ಶೆಟ್ಟಿ ಅವರ ಪುತ್ರ ಪ್ರಶಾಂತ್ ಶೆಟ್ಟಿ ಅವರು ಬೆಳ್ಮಣ್ ಶಾಖೆಯ ಯೂನಿಯನ್ ಬ್ಯಾಂಕ್‌ನಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾರೆ. ಈ ಖಾತೆಗಳನ್ನು ಪೇಟಿಎಂನ ಆನ್‌ಲೈನ್ ಪಾವತಿ ವ್ಯವಸ್ಥೆಗೆ ಲಿಂಕ್ ಮಾಡಲಾಗಿದೆ. ಈ […]
ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಅಮೂಲ್ಯಗೆ ತೃತೀಯ ಸ್ಥಾನ.
ಉಡುಪಿ: ಟ್ರಸ್ಟ್ ಫಾರ್ ರೂರಲ್ ಅಪ್ಲಿಫ್ಟ ಮೆಂಟ್ ಸ್ಟ್ರಾಟಜೀಸ್ ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆಯನ್ನು ಎಲ್ ಕೆ ಜಿ ಇಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದು, ಕುಂದಾಪುರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ “ಅಮೂಲ್ಯ ” (6ನೇ ತರಗತಿ) ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ/ ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಹೆಬ್ರಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಹೆಬ್ರಿ: ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಹೆಬ್ರಿ ಸರಕಾರಿ ಪ. ಪೂ. ಕಾಲೇಜಿನ ಪ್ರೌಢಶಾಲೆ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕ ಬಹುಮುಖ ಪ್ರತಿಭೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಶಿಕ್ಷಣ […]