ಹೆಬ್ರಿ: ಗರ್ಭಿಣಿ ಸಂಶಯಾಸ್ಪದ ಸಾವು; ಪ್ರಕರಣ ದಾಖಲು

ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾರ್ಖಂಡ್ ಮೂಲದ ಗರ್ಭಿಣಿ ಸಂಶಯಾಸ್ಪದವಾಗಿ ಮೃತಪಟ್ಟ ಬಗ್ಗೆ ಪ್ರಕರಣ ದಾಖಲಾಗಿದೆ. ಮೃತರನ್ನು ಜಾರ್ಖಂಡ್ ಮೂಲದ ಬಿಪಿನ್ ಒರಾನ್ ಎಂಬವರ ಪತ್ನಿ ಪ್ರಿಯಾಂಕ ಒರಾನ್(24) ಎಂದು ಗುರುತಿಸಲಾಗಿದೆ. ಇವರು ಹೆಬ್ರಿ ಗ್ರಾಮದ ಬಚ್ಚಪ್ಪು ನೆಕ್ಕರ್ಕೆ ಎಂಬಲ್ಲಿರುವ ಆ್ಯಂಟೋನಿ ಕೆ.ಎ. ಎಂಬವರ ತೋಟದ ಮನೆಯಲ್ಲಿನ ಪಕ್ಕದ ರೂಮಿನಲ್ಲಿ ವಾಸವಾಗಿದ್ದರು. ಪ್ರಿಯಾಂಕ ಸುಮಾರು ಎರಡೂವರೆ ತಿಂಗಳ ಹಿಂದೆ ಇಲ್ಲಿಗೆ ಬಂದು ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ಪ್ರಸ್ತುತ ಗರ್ಬಿಣಿ ಯಾಗಿದ್ದಾರೆ. ಇಲ್ಲಿಗೆ ಹೊಸದಾಗಿ ಕೆಲಸಕ್ಕೆ ಬಂದ […]

ಮರವಂತೆ ಅಂಚೆ ಕಚೇರಿಯಲ್ಲಿ ಕಳ್ಳತನ: ಇಬ್ಬರ ಬಂಧನ

ಉಡುಪಿ: ಮರವಂತೆ ಅಂಚೆ ಕಚೇರಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತ ಬಾಲಕ ಸಹಿತ ಇಬ್ಬರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಸೆ.3ರಂದು ಬಂಧಿಸಿದ್ದಾರೆ. ಬಂಧಿತರನ್ನು ಭಟ್ಕಳದ ಫೌಜಾನ್ ಅಹಮ್ಮದ್(19) ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೋಳಗಾದ ಬಾಲಕ ಎಂದು ಗುರುತಿಸಲಾಗಿದೆ. ಆರೋಪಿ ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ ಪೊಲೀಸ್ ಠಾಣಾ ಎಸ್ಸೈಗಳಾದ ಹರೀಶ್ ಆರ್. ಮತ್ತು ಬಸವರಾಜ ಕನಶೆಟ್ಟಿ ಹಾಗೂ […]

ಮಲ್ಪೆ: ಆಳಸಮುದ್ರದ ಮೀನುಗಾರಿಕೆಗೆ ತೂಫನ್ ಅಡ್ಡಿ

ಉಡುಪಿ: ಕರಾವಳಿಯಲ್ಲಿ ಮೀನುಗಾರಿಕೆಗೆ ಋತು ಆರಂಭದಲ್ಲೇ ವಿಘ್ನ ಎದುರಾಗಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ಬೋಟುಗಳು ಲಂಗರು ಹಾಕುವಂತಾಗಿದೆ. ಗಾಳಿ ಹಾಗೂ ನೀರಿನ ಒತ್ತಡ ಒಂದು ಕಡೆಯಾದರೆ, ಕಷ್ಟಪಟ್ಟು ಮೀನುಗಾರಿಕೆ ನಡೆಸುವ ಬೋಟುಗಳಿಗೂ ಮೀನು ಸಿಗದೆ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆಗಸ್ಟ್ ಒಂದರಿಂದ ಆಳಸಮುದ್ರ ಸಹಿತ ಎಲ್ಲ ವಿಧದ ಬೋಟುಗಳು ಉತ್ಸಾಹದಿಂದ ಸಮುದ್ರಕ್ಕೆ ಇಳಿದಿದ್ದವು. ಆದರೆ ಶೇ. 95ರಷ್ಟು ಬೋಟುಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಮೀನು ಸಿಕ್ಕಿಲ್ಲ. ಇನ್ನೊಂದೆಡೆ ಏಷ್ಯಾದಲ್ಲೇ ಅತಿ ದೊಡ್ಡ ಸರ್ವ ಋತು ಬಂದರು ಖ್ಯಾತಿಯ ಮಲ್ಪೆ […]

ಉಡುಪಿ:ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ ನಿಗದಿಪಡಿಸಲಾಗಿರುವ ಘಟಕವಾರು/ವರ್ಗವಾರು ಗುರಿಗಳ ವಿವರ ಇಂತಿದೆ : ಹೊಸ ಮೀನು ಕೃಪಿ ಕೊಳಗಳ ನಿರ್ಮಾಣ (construction of biofloc Ponds for freshwater areas including inputs of Rs. 4lakhs/ha), ಕಡಲಚಿಪ್ಪು ಕೃಷಿ -ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮತ್ತು ಇತ್ಯಾದಿ (Bivalve […]

ಉಡುಪಿ: ಬಹುಮಾನ ಹಣ ಮಂಜೂರು : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ನಡೆದಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನ ಪ್ರೈಸ್ ಮನಿ ಅಪ್ಲಿಕೇಷನ್‌ನಲ್ಲಿ ಆನ್‌ಲೈನ್ ಮೂಲಕಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ […]