ಕಾರ್ಕಳ: ಅವಹೇಳನಕಾರಿ ಬ್ಯಾನರ್ ಹಾಕಿದ ಪ್ರಕರಣ; ಇಬ್ಬರು ಆರೋಪಿಗಳ ಬಂಧನ.

ಕಾರ್ಕಳ: ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಸೆ.3ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮುದ್ರಿಸಿದ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಪುಷ್ಪಲತಾ ಎಂದು ಗುರುತಿಸಲಾಗಿದೆ. ಮುಸ್ಲಿಮರ ಬಗ್ಗೆ ಅವಹೇಳನಕಾರಿ ಬರಹಗಳೊಂದಿಗೆ ಹಾಕಲಾದ ಬ್ಯಾನರ್ ಸೆ.2ರಂದು ಪ್ರತ್ಯಕ್ಷವಾಗಿದ್ದು, ಇದರಲ್ಲಿ ಸತೀಶ್ ದೇವಾಡಿಗ ತನ್ನ ಹೆಸರು […]

ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ‌: ಆವೆ ಮಣ್ಣಿನಲ್ಲಿ ಗಣೇಶನ ವಿಗ್ರಹ ರಚನಾ ಸ್ಪರ್ಧೆ

ಉಡುಪಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಆಶ್ರಯದಲ್ಲಿ ರಾಜ್ಯ ಮುಖ್ಯ ಆಯುಕ್ತರಾದ ಶ್ರೀ ಪಿ.ಜಿ.ಆರ್ ಸಿಂಧ್ಯಾ ಮಾರ್ಗದರ್ಶನದಲ್ಲಿ ಸೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ಪರಿಸರ ಸ್ನೇಹಿ ಗಣಪತಿಗಳಾದ ಮಣ್ಣು, ಹಿಟ್ಟು, ಅರಶಿಣ, ಸೆಗಣಿ ಮುಂತಾದವುಗಳಿಂದ ಗಣಪತಿಯನ್ನು ಸಿದ್ಧಪಡಿಸಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವುದಾಗಿದೆ. ಇವರ ಆದೇಶದಂತೆ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಸೌಟ್ಸ್-ಗೈಡ್ಸ್ ಮಕ್ಕಳಿಗೆ ಆವೆ ಮಣ್ಣಿನಲ್ಲಿ ಗಣೇಶನ ವಿಗ್ರಹ ರಚನಾ […]

ಅತಿಥಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್,ಉಡುಪಿ ಮೊ.ನಂ:8073213310 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.