ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ “ಕ್ರಿಯೇಟಿವ್ ಗುರುದೇವೋಭವ” ಕಾರ್ಯಕ್ರಮವನ್ನು ಶಿಕ್ಷಕರ ದಿನಾಚರಣೆಯಂದು ಹಮ್ಮಿಕೊಳ್ಳಲಾಯಿತು. ಜ್ಞಾನಜ್ಯೋತಿಯನ್ನು ಬೆಳಗಿ, ಡಾ.ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಗುರುವಂದನೆಯನ್ನು ಸ್ವೀಕರಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರಪ್ಪಾಡಿ, ನಲ್ಲೂರಿನ ನಿವೃತ್ತ ಮುಖ್ಯ ಗುರುಗಳಾದ ಶ್ರೀಮತಿ ಪೂರ್ಣಿಮಾ ರಮೇಶ್ ಶೆಣೈರವರು ಮಾತನಾಡಿ ‘ ಪ್ರತಿ ವ್ಯಕ್ತಿಯೂ ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಒಬ್ಬ ಗುರುವಿಗೆ ನೀಡುತ್ತಾರೆ. ಉತ್ತಮ ಶಿಕ್ಷಣ ನೀಡುವುದರ […]

ಉಡುಪಿ: ಕಿರಿಯ ಆರೋಗ್ಯ ವೀಕ್ಷಣಾಧಿಕಾರಿ ಖಾಸಗಿ ಲಾಡ್ಜ್ ನಲ್ಲಿ ಅನುಮಾನಾಸ್ಪದ ಸಾವು

ಉಡುಪಿ: ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬ ಖಾಸಗಿ ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕುಂದಾಪುರದ ಜೆಕೆ ಟವರ್ಸ್ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮೂಲದ ಪ್ರಶಾಂತ್ ವಿವಾಹಿತನಾಗಿದ್ದು, ಒಂದು ಪುಟ್ಟ ಮಗುವಿದೆ. ಈತನಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. 2010ರಲ್ಲಿ ಆರೋಗ್ಯ […]

ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ:ಶೈಕ್ಷಣಿಕ ಪ್ರವೇಶಾತಿಗೆ ಅರ್ಜಿ ಆಹ್ವಾನ

ವಿದ್ಯಾಗಿರಿ: ಆಳ್ವಾಸ್ ಪದವಿ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರವರ್ತಿತ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು 2024 – 2025 ರ ಜುಲೈ ಆವೃತ್ತಿಯ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಈ ಕೇಂದ್ರದ ಮೂಲಕ ವಿದ್ಯಾರ್ಥಿಗಳು ಸ್ನಾತಕ(ಯುಜಿ)ದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸಿ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಸ್ಸಿ (ಸಂಯೋಜನೆಗಳು), ಬಿ.ಎಸ್‌ಸಿಹೋಮ್ – ಇನ್ಫಾರ್ಮೇಷನ್ ಟೆಕ್ನಾಲಜಿ, ಬಿ.ಸಿ.ಎ ಬ್ಯಾಚುರಲ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ಪದವಿಗಳನ್ನು ಪಡೆಯಬಹುದಾಗಿದೆ. ಸ್ನಾತಕೋತ್ತರ (ಪಿಜಿ)ದಲ್ಲಿ ಎಂ.ಎ- ಶಿಕ್ಷಣ, ಕನ್ನಡ,ಇಂಗ್ಲಿಷ್, ಹಿಂದಿ, […]

ಮಣಿಪಾಲ ಜ್ಞಾನಸುಧಾ : ನಿವೃತ್ತ ಶಿಕ್ಷಕರಿಗೆ ಗೌರವ ವಂದನೆ

ಮಣಿಪಾಲ : ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಗುರುವಾರ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲೆಯ ನಿವೃತ್ತ ಉಪನಿರ್ದೇಶಕರಾದ ಶ್ರೀ ಆರ್.ಬಿ. ನಾಯಕ್ ಇವರು ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದೊಂದಿಗೆ ಮುನ್ನಡೆಯಬೇಕು, ಶಿಸ್ತುಬದ್ಧ ಶಿಕ್ಷಣ ಸಾಧನೆಗೆ ಮೂಲಮಂತ್ರವಾಗಿದ್ದು ಜ್ಞಾನಸುಧಾ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಶುಭ ಹಾರೈಸಿದರು. ನಿವೃತ್ತ ಶಿಕ್ಷಕರಾದ ವಿವೇಕಾನಂದ ಸರಕಾರಿ ಹಿ.ಪ್ರಾ.ಶಾಲೆಯ ಶ್ರೀ ಸದಾನಂದ ಕೆ.ಎಸ್, ಸರಕಾರಿಹಿ.ಪ್ರಾ.ಶಾಲೆ ರಾಜೀವ ನಗರದ ಶ್ರೀಮತಿ ಕಲ್ಪನ,ಎಮ್.ಜೆ.ಸಿಯ ಶ್ರೀಮತಿ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಉಡುಪಿ:ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಹಪಠ್ಯೇತರ ಘಟಕ ಮತ್ತು ಸಾಂಸ್ಕ್ರತಿಕ ಘಟಕದ ಸಹಯೋಗದೊಂದಿಗೆ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05ಸೆಪ್ಟೆಂಬರ್ 2024 ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಪ್ರೊಫೆಸರ್ ಕೆ ಸದಾಶಿವ ರಾವ್ಮಾತನಾಡಿ ಭಾರತೀಯ ನಾಗರೀಕತೆಯನ್ನು ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ಶಿಕ್ಷಕರು ತಮ್ಮ ವೃತ್ತಿಯನ್ನು ಕೇವಲ ಸಂಪಾದನೆಯ ದೃಷ್ಟಿಯಿಂದ ನೋಡದೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಅವರ […]