ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್: ಚದುರಂಗದಲ್ಲಿ ರಾಜ್ಯಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನೆ

ಕುಂದಾಪುರ:  ಹಿಂದೆ ರಾಜಾಶ್ರಯದಲ್ಲಿ  ಬೆಳಕು ಕಾಣುತ್ತಿದ್ದ ಪ್ರತಿಭೆಗಳು ಇಂದು ಶಾಲೆಗಳಲ್ಲಿ ಬೆಳಕು ಕಾಣುತ್ತಿವೆ. ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರಜಗತ್ತಿಗೆ ತರಲು ಶಾಲೆಯಷ್ಟು ಒಳ್ಳೆಯ ವೇದಿಕೆ ಬೇರೆಡೆ ಸಿಗಲು ಸಾಧ್ಯವಿಲ್ಲ” ಎಂದು  ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ.ಜೀವನ್ ರಾಮ್ ಸುಳ್ಯ ಹೇಳಿದರು.  ಯಡಾಡಿ – ಮತ್ಯಾಡಿಯ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಪ್ರೌಢ ಶಾಲಾ ವಿಭಾಗದ 17 ವರ್ಷ […]

ಬ್ರಹ್ಮಾವರದಲ್ಲಿ ಕಿಚನ್ ಹೆಲ್ಪರ್ ಕೆಲಸಕ್ಕೆ ಪುರುಷರು ಹಾಗೂ ಮಹಿಳೆಯರು ಬೇಕಾಗಿದ್ದಾರೆ

ಉಡುಪಿ: ಬ್ರಹ್ಮಾವರದಲ್ಲಿ ಹಗಲು ಪಾಳಿಯಲ್ಲಿ 40 ನಿಯೋಮಿತಿ ಒಳಗಿನ ಮಹಿಳೆಯರು ಕಿಚನ್ ಹೆಲ್ಪರ್ ಕೆಲಸಕ್ಕೆ ಬೇಕಾಗಿದ್ದಾರೆ. ಮತ್ತು ರಾತ್ರಿ ಪಾಳಿಯಲ್ಲಿ ಸಂಜೆ 6 ರಿಂದ ರಾತ್ರಿ 2.30 ತನಕ ಕೆಲಸ ಮಾಡಲು ಕಿಚನ್ ಹೆಲ್ಪರ್ ಕೆಲಸಕ್ಕೆ 45 ವಯೋಮಿತಿ ಒಳಗಿನ ಪುರುಷರು ಬೇಕಾಗಿದ್ದಾರೆ. ಊಟ ಮತ್ತು ವಸತಿ ಸೌಲಭ್ಯವಿದೆ. ಸೂಕ್ತ ದಾಖಲೆಗಳೊಂದಿಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :+917349038077

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ

ಕುಂದಾಪುರ: ಸೆಪ್ಟೆಂಬರ್ 04 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಯ ಅನಾವರಣಕ್ಕಾಗಿ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು. ದೀಪ ಪ್ರಜ್ವಲನೆಯ ಜೊತೆಗೆ ಸಾಂಸ್ಕೃತಿಕ ತೇರನ್ನು ಎಳೆಯುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಆಶಯದೊಂದಿಗೆ ವಿದ್ಯುಕ್ತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಯಾವ ವ್ಯಕ್ತಿಗೆ ಕಲೆ, ಸಾಹಿತ್ಯದ ಬಗ್ಗೆ ಅರಿವಿರುವುದಿಲ್ಲವೋ ಅವರು ಪಶುವಿಗೆ ಸಮಾನ. ಶ್ರೀ ವೆಂಕಟರಮಣ ವಿದ್ಯಾಸಂಸ್ಥೆ ಓದು […]

ಆಳ್ವಾಸ್ (ಸ್ವಾಯತ್ತ) ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಮೂಡುಬಿದಿರೆ: ಸಂಗ್ರಹಿಸಿದ ವಸ್ತುಗಳನ್ನು ಕೊಡುಗೆ ನೀಡುವುದು ಅಂತಕರಣದಿಂದ ಮಾಡುವ ದಾನ. ಸಂಗ್ರಹ ಹಾಗೂ ದಾನದ ಹಿಂದಿನ ಮೌಲ್ಯ ಮಹತ್ತರ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಗ್ರಂಥಾಲಯ ವಿಭಾಗವು ಹಮ್ಮಿಕೊಂಡ ಗ್ರಂಥಪಾಲಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಮೆಸಪಟೋಮಿಯದಲ್ಲಿ ಮೊದಲ ಗ್ರಂಥಾಲಯ ಸ್ಥಾಪನೆಯಾಯಿತು ಎಂದು ಇತಿಹಾಸ ತಿಳಿಸಿದ ಅವರು, ದೇವಸ್ಥಾನ ಕಟ್ಟಿದರೆ ಭಿಕ್ಷುಕರು ಹೆಚ್ಚಾಗುತ್ತಾರೆ. ಆದರೆ, ಗ್ರಂಥಾಲಯ ಕಟ್ಟಿದರೆ ವಿದ್ವಾಂಸರು ಹುಟ್ಟುತ್ತಾರೆ ಎಂದು ಡಾ.ಬಿ.ಆರ್. […]

ಶಿಕ್ಷಕರಿಂದ ಕಲಿತ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ನಿಸ್ವಾರ್ಥ ಭಾವದಿಂದ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುವ ಶಿಕ್ಷಕರ ಸೇವೆಯನ್ನು ಶಿಕ್ಷಕರ ದಿನಾಚರಣೆಯಂದು ಮಾತ್ರವಲ್ಲದೇ ಜೀವನದುದ್ದಕ್ಕೂ ನೆನಯುವುದರ ಜೊತೆಗೆ ಅವರಿಂದ ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಕಿದಿಯೂರು ಹೋಟೆಲ್‌ನ ಶೇಷಶಯನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಇವರ ಸಹಯೋಗದಲ್ಲಿ […]