ಬಂಟ್ವಾಳ: ನವದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿ ಗಂಭೀರ.
ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರ ಗಾಯಗೊಂಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಘಟನೆಯಲ್ಲಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದು, ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ […]
ಉಡುಪಿ: ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ- ಪ್ರಾಣಾಪಾಯದಿಂದ ಪಾರು
ಉಡುಪಿ: ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಕೈಮುರಿತಗೊಂಡ ವೈದ್ಯಕೀಯ ವಿದ್ಯಾರ್ಥಿನಿಯನ್ನು ರಕ್ಷಿಸಿ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ರಕ್ಷಿಸಲ್ಪಟ್ಟ ವಿದ್ಯಾರ್ಥಿನಿಯನ್ನು ಕೇರಳ ಪಾಲಕ್ಕಾಡಿನ ಅನುಶ್ರೀ ಬಿ. (22) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ರೈಲು ನಿಲುಗಡೆಗೆ ಬಂದಾಗ ನಿದ್ದೆಯ ಮಂಪರಿನಲ್ಲಿದ್ದಳು. ರೈಲು ನಿಲುಗಡೆ ನೀಡಲು ನಿಧಾನಗತಿಯಲ್ಲಿ ಚಲಿಸುತ್ತಿರುವಾಗ ಇಳಿದಿದ್ದರಿಂದ ಅವಘಡ ಸಂಭವಿಸಿದೆ. ಕಾರ್ಯಾಚರಣೆಗೆ ರೈಲ್ವೆ ಮಹಿಳಾ ಆರ್ ಪಿಎಫ್ ಸಹಕರಿಸಿದ್ದಾರೆ.
ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿದೂಷಕರ ವೇಷಧರಿಸಿ 14.33 ಲಕ್ಷ ರೂಪಾಯಿ ಸಂಗ್ರಹಿಸಿ ಅನಾಥಾಶ್ರಮಕ್ಕೆ ದೇಣಿಗೆ ನೀಡಿದ ಯುವಕರ ತಂಡ
ಕಾಪು: ಇಲ್ಲೊಂದು ಯುವಕರ ತಂಡ ಅನಾಥಾಶ್ರಮಕ್ಕೆ ನೆರವಾಗುವುದಕ್ಕಾಗಿಯೇ ಅಷ್ಟಮಿ ವೇಳೆ ವೇಷ ಧರಿಸಿ ಊರೂರು ಸುತ್ತಿ ಹಣ ಸಂಗ್ರಹಿಸಿದೆ. ವಿದೂಷಕರ ವೇಷ ಧರಿಸಿದ ಕಾಪುವಿನ ಸಚಿನ್ ಶೆಟ್ಟಿ ನೇತೃತ್ವದ ತಂಡ ಸಂಗ್ರಹಿಸಿದ 14.33 ಲ.ರೂ.ಯನ್ನು ಕಾರ್ಕಳ ತಾಲೂಕಿನ ಬೈಲೂರು ಕೌಡೂರಿನಲ್ಲಿರುವ ಹೊಸ ಬೆಳಕು ಅನಾಥಾಶ್ರಮದ ಮುಖ್ಯಸ್ಥೆ ತನುಲಾ ತರುಣ್ ಅವರಿಗೆ ಬುಧವಾರ ಹಸ್ತಾಂತರಿಸಿದರು. ತಂಡದ ಸಚಿನ್, ಚೇತನ್, ನಿತೇಶ್, ಸುದೀಪ್, ಅಭಿಷೇಕ್ ಅವರು ತಮ್ಮ ಸಂಗಡಿಗರ ಜತೆ ವೇಷ ಧರಿಸಿ ಉಡುಪಿ ಮತ್ತು ಮಂಗಳೂರಿನಲ್ಲಿ ತಿರುಗಾಡಿ ದೇಣಿಗೆ […]
ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗಣೇಶ ಚತುರ್ಥಿ ಆಚರಣೆ
ಉಡುಪಿ: ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಪ್ರಸನ್ನ ಗಣಪತಿ ಸನ್ನಿಧಾನದಲ್ಲಿ ಅಷ್ಟೋತ್ತರ ಶತ ನಾಳಿಕೇರ ಗಣಯಗ ಹಾಗೂ ಮೂಡು ಗಣಪತಿ ಸೇವೆ ರಂಗಪೂಜೆ ಮಹಾ ಅನ್ನಸಂತರ್ಪಣೆ ನೆರವೇರಿತು.
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಗಣೇಶ ಚತುರ್ಥಿ ಹಬ್ಬ ಆಚರಣೆ
ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ಗಣಪತಿಯ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದರೆ, ಸಾರ್ವಜನಿಕ ಗಣೇಶೋತ್ಸವದಿಂದ ಆಚರಣೆಗೆ ಹೊಸ ಕಳೆ ಬಂದಿದೆ. ಉಡುಪಿ ಜಿಲ್ಲೆಯ ಸುಮಾರು 472 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗುತ್ತಿದೆ. ಇಂದು ಮುಂಜಾನೆ ಗಣೇಶ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಪುನಸ್ಕಾರಗಳನ್ನು ನಡೆಸಲಾಗುತ್ತಿದೆ. ಗಣ ಹೋಮ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ .ಕೆಲವು ಕಡೆ ಒಂದು ದಿನ ಮಾತ್ರ ಗಣಪತಿ ಇಟ್ಟರೆ, ಇನ್ನು ಹಲವಡೆ ಎರಡರಿಂದ 9 ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತದೆ. ಪ್ರತಿದಿನ ಒಂದಲ್ಲ […]