ಗಮನ ಸೆಳೆದ ಮಕ್ಕಳು ತಯಾರಿಸಿದ ಗಣೇಶನ ಮೂರ್ತಿಯ ವಿಸರ್ಜನ ಮೆರವಣಿಗೆ
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಈ ಬಾರಿ ಸಂಭ್ರಮದಿಂದ ಗಣೇಶ ಚತುರ್ಥಿಯನ್ನು ಆಚರಣೆ ಮಾಡಲಾಯಿತು. ನಗರ, ಗ್ರಾಮೀಣ ಭಾಗದಲ್ಲಿ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಊರವರೆಲ್ಲ ಸಂಭ್ರಮದಿಂದ ಪಾಲ್ಗೊಂಡರು. ಇನ್ನು ಕೆಲವೊಂದು ಕಡೆಗಳಲ್ಲಿ ಅದ್ಧೂರಿ ಶೋಭಯಾತ್ರೆಯ ಮೂಲಕ ಗಣಪತಿ ಮೂರ್ತಿಯ ವಿಸರ್ಜನೆ ಮೆರವಣಿಗೆ ನಡೆಯಿತು. ಆದರೆ ಉಡುಪಿಯ ಪಟ್ಲದಲ್ಲಿ ಮಕ್ಕಳೇ ತಯಾರಿ ಮಾಡಿದ ಗಣೇಶನ ಮೂರ್ತಿಯ ವಿಸರ್ಜನ ಮೆರವಣಿಗೆ ಎಲ್ಲರ ಗಮನ ಸೆಳೆದಿದೆ. ಹೌದು, ಉಡುಪಿಯ ಪಟ್ಲದ ಗಣಪತಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ತಯಾರಿಸಿದ ಗಣಪತಿ ಮೂರ್ತಿಗಳ ವಿಸರ್ಜನೆ […]
ಶಿರ್ವ: ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ ವಸ್ತುಗಳ ಹಸ್ತಾಂತರ
ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜರವರು ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ. ಫಾ. ವಲೇರಿಯನ್ ಮೆಂಡೋನ್ಸಾ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜಮುಖಿ […]
ಕಟಪಾಡಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ; ಮನಸೂರೆಗೊಂಡ ಪುಟಾಣಿಗಳ ಹುಲಿವೇಷ ಕುಣಿತ
ಉಡುಪಿ: ವರ್ಷದಿಂದ ವರ್ಷಕ್ಕೆ ಉಡುಪಿ ಜಿಲ್ಲೆಯಲ್ಲಿ ಹುಲಿ ವೇಷಗಳ ಅಬ್ಬರ ಹೆಚ್ಚುತ್ತಿದೆ. ಅಷ್ಟಮಿಯ ನಂತರ ಇದೀಗ ಗಣೇಶ ಚತುರ್ಥಿಯ ಸಂದರ್ಭದಲ್ಲಿ ವಿಸರ್ಜನಾ ಮೆರವಣಿಗೆ ವೇಳೆ ಹುಲಿವೇಷಗಳ ಭರಾಟೆ ಜೋರಾಗಿದೆ. ಅದರಲ್ಲೂ ಮರಿ ಹುಲಿಗಳ ಕಾರುಬಾರು ಜಬರ್ದಸ್ತ್ ಆಗಿದೆ. ಹೌದು, ಕರಾವಳಿಯ ಜನರಿಗೆ ಹುಲಿವೇಷವೆಂದರೆ ಅದೇನೋ ಸೆಳೆತ. ಬಾಲ್ಯದಲ್ಲೇ ಹುಲಿ ವೇಷಗಳ ಬೆನ್ನು ಹತ್ತಿ ಹೋಗಿ ಕುಣಿಯುವ ಮಕ್ಕಳು ಇಲ್ಲಿ ಸಾಮಾನ್ಯವಾಗಿ ಕಾಣಸಿಗುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಪುಟಾಣಿ ಮಕ್ಕಳು ವೇಷ ಧರಿಸಿ ಕುಣಿಯುವ ಪರಿಪಾಠ ಹೆಚ್ಚುತ್ತಿದೆ. ಹಿರಿಯ ವೇಷಧಾರಿಗಳನ್ನು […]
ಉಡುಪಿ: ಸಹಪಾಠಿ ಶ್ರೀಪಾದರೊಂದಿಗೆ ಜನ್ಮದಿನವನ್ನು ಆಚರಿಸಿದ ಪುತ್ತಿಗೆ ಶ್ರೀ
ಉಡುಪಿ: ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 63ನೇ ಜನ್ಮನಕ್ಷತ್ರದ ಶುಭಸಂದರ್ಭದಲ್ಲಿ ತಮ್ಮ ಸಹಪಾಠಿಗಳಾದ ಅದಮಾರು ಹಿರಿಯ ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರನ್ನು ಹಾಗೂ ಭಂಡಾರಕೇರಿ ಮಠಾಧೀಶರಾದ ವಿದ್ಯೇಶತೀರ್ಥ ಶ್ರೀಪಾದರನ್ನು ಗಂಧಾದ್ಯುಪಚಾರಗಳಿಂದ ಗೌರವಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡರು. ಪುತ್ತಿಗೆ ಕಿರಿಯ ಸುಶ್ರಿಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮತ್ತು ಅನೇಕ ವಿದ್ವಾಂಸರ ಹಾಗೂ ಶ್ರೀಪುತ್ತಿಗೆ ವಿದ್ಯಾಪೀಠದ ಅನೇಕ ಹಳೆವಿದ್ಯಾರ್ಥಿಗಳ ಸಮ್ಮುಖದಲ್ಲಿ ಶ್ರೀಕೃಷ್ಣಮಠದಲ್ಲಿ ಜರುಗಿದ ಈ ಸಮಾರಂಭದಲ್ಲಿ ಪರ್ಯಾಯ ಮಠದ ವತಿಯಿಂದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನಾಚಾರ್ಯ ಅವರು […]
ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಚಾರ್ಜ್ ಶೀಟ್ ವಿವರಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಹೈಕೋರ್ಟ್ ಸೂಚನೆ.
ಬೆಂಗಳೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ವಿರುದ್ಧ 3,991 ಪುಟಗಳ ಆರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿರುವ ವರದಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ. ಮುಂದಿನ ವಿಚಾರಣೆಯವರೆಗೂ ನಿರ್ಬಂಧ ಜಾರಿಯಲ್ಲಿರುತ್ತದೆ. ಚಾರ್ಜ್ ಶೀಟ್ […]