ಉಡುಪಿ:ಪ್ರಥಮ ಡಿ.ಇಎಲ್.ಇಡಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಡಿ.ಇಎಲ್.ಇಡಿ ಪರೀಕ್ಷೆಯು ಸೆಪ್ಟಂಬರ್ 12 ರಿಂದ 19 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾ […]
ಉಡುಪಿ: ಸೆ.12 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸೆಪ್ಟಂಬರ್ 12 ರಂದು ಬೆಳಗ್ಗೆ10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ […]
ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟ್ ಮಾಡಲು ಅವಕಾಶ: ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ

ಉಡುಪಿ: ಪ್ರವಾಸೋದ್ಯಮವನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ,ಪಾರಂಪರಿಕ, ಸೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮಸಚಿವಾಲಯದಿಂದ “ದೇಕೋ ಅಪ್ನಾ ದೇಶ್, ಪೀಪಲ್ಸ್ ಚಾಯ್ಸ್-2024” ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಸದರಿ ಕಾರ್ಯಕ್ರಮದ ಭಾಗವಾಗಿ ನಾಗರಿಕರು ಹಾಗೂ ಪ್ರವಾಸಿಗರು ಆದ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು MyGovವೇದಿಕೆಯಡಿಯಲ್ಲಿ ಸೆಪ್ಟೆಂಬರ್ 15 ರವರೆಗೆ ವೋಟ್ ಮಾಡುವ ಅವಕಾಶ […]
ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವುದಿಲ್ಲ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ಶಿಕ್ಷಕರ ಪ್ರಶಸ್ತಿ ತಡೆ ಕುರಿತಾಗಿ ಪ್ರತಿಭಟನೆ ನಡೆಸಿದ ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಉಡುಪಿ ಶಾಸಕ ಯಶಪಾಲ್ ಎ ಸುವರ್ಣ ಪ್ರತಿಕ್ರಿಯಿಸಿದ್ದಾರೆ. ಉಡುಪಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ವಿಶ್ವ ಮಾನ್ಯತೆ ಪಡೆದಿದ್ದು, ಜಿಲ್ಲೆಯ ಯುವ ಸಮುದಾಯವನ್ನು ದೇಶದ ಆಸ್ತಿಯನ್ನಾಗಿಸುವ ಶಿಕ್ಷಕರಿಗೆ ಮಾಡಿದ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ. ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ […]
ಬೈಂದೂರು-ಜಡ್ಕಲ್ ರಸ್ತೆ ದುರಸ್ತಿಗೆ ಒತ್ತಾಯಿಸಿ ಬೈಕ್ ರ್‍ಯಾಲಿ.

ಬೈಂದೂರು: ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗಾಗಿ ಬೈಂದೂರು-ಜಡ್ಕಲ್ ನಿವಾಸಿಗಳು ಕಂಕಿ-ಹಸ್ಕಲ್ಪಾರೆ-ಹಯ್ಯಂಗಾರ್ ರಸ್ತೆ ಸುಧಾರಣೆಗೆ ಆಗ್ರಹಿಸಿ ಬೈಕ್ ರ್‍ಯಾಲಿ ನಡೆಸಿದರು. ಹಲವು ವರ್ಷಗಳಿಂದ ಸ್ಥಳೀಯ ಶಾಸಕರು, ಸಂಸದರು ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದರೂ ಪರಿಣಾಮಕಾರಿ ಪರಿಹಾರ ದೊರಕಿಲ್ಲ. ಅನೇಕ ಅಲ್ಪಸಂಖ್ಯಾತರು, ಮಕ್ಕಳು ಮತ್ತು ಹಿರಿಯ ವ್ಯಕ್ತಿಗಳು ಸೇರಿದಂತೆ ಪ್ರದೇಶದ ಜನರಿಗೆ ರಸ್ತೆಯು ನಿರ್ಣಾಯಕವಾಗಿದೆ ಮತ್ತು ತೀವ್ರವಾದ ಗುಂಡಿಗಳು ಮತ್ತು ಜಾರು ಮೇಲ್ಮೈಗಳೊಂದಿಗೆ ಕಳಪೆ ಸ್ಥಿತಿಯಲ್ಲಿ ಉಳಿದಿದೆ. ಹೀಗಾಗಿ ಶಾಲೆಗಳಿಗೆ ಮತ್ತು ಆಸ್ಪತ್ರೆಗಳಿಗೆ ಪ್ರಯಾಣಿಸುವುದು ಹೆಚ್ಚು ಸವಾಲಿನ ಮತ್ತು ಅಪಾಯಕಾರಿಯಾಗಿದೆ. […]