ಉಡುಪಿ: ಸ್ಫೋಟಕ ಪತ್ತೆಯಲ್ಲಿ ಈತ ಎಕ್ಸ್ ಪರ್ಟ್; ಹಲವು ಹೆಗ್ಗಳಿಕೆಗಳ ಪೊಲೀಸ್ ಶ್ವಾನ “ಐಕಾನ್ “..!
ಉಡುಪಿ: ಪೊಲೀಸ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಪೊಲೀಸ್ ಶ್ವಾನ “ಐಕಾನ್” ಹಲವು ಹೆಗ್ಗಳಿಕೆಯನ್ನು ಹೊಂದಿದೆ. ಲ್ಯಾಬ್ರಡಾರ್ ರಿಟ್ರೇವರ್ ತಳಿಯ ಈ ಶ್ವಾನ 2014ರ ನವೆಂಬರ್ 5ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿತ್ತು. ಬೆಂಗಳೂರಿನ ಆಡುಗೋಡಿಯಲ್ಲಿ ಸ್ಫೋಟಕ ಪತ್ತೆಯಲ್ಲಿ 9 ತಿಂಗಳು ಕಠಿಣ ತರಬೇತಿಯನ್ನು ಇದು ಪಡೆದಿತ್ತು. ಈತನಕ ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದೆ. ರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ವಿದೇಶಿ ಗಣ್ಯರು ಹಾಗೂ […]
ಉಡುಪಿ:ಅರ್ಜಿ ಆಹ್ವಾನ
ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಇ-ತ್ರಿಚಕ್ರ ವಿದ್ಯುತ್ ಚಾಲಿತ ಸುಸಜ್ಜಿತ ಪರಿಸರ ಸ್ನೇಹಿ ಕಿಯಾಸ್ಕ್ “ಮತ್ಸ್ಯ ವಾಹಿನಿ” ವಾಹನಗಳಲ್ಲಿ ತಾಜಾ ಮೀನು ಮಾರಾಟಕ್ಕೆ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಪರವಾನಗಿಆಧಾರದಲ್ಲಿ ಪಡೆಯುವ ಬಗ್ಗೆ ಜಿಲ್ಲೆಯ ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ವರ್ಗದವರಿಗೆ 0.50 ಲಕ್ಷ […]
ಸರ್ಕಾರದ ಇಲಾಖೆಗಳಲ್ಲಿನ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ ಡಾಕ್ಟರ್ ಕೆ ವಿದ್ಯಾ ಕುಮಾರಿ
ಉಡುಪಿ: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ. ಆದ್ದರಿಂದ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ, ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ […]
ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ, ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ.
ಹೆಬ್ರಿ: ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ. ಅಂಕ ಗಳಿಕೆಯ ತರಬೇತಿಯೊಂದೇ ಶಿಕ್ಷಣವಾಗದೆ ಬದುಕು ಶಿಕ್ಷಣ ನೀಡುವ ಮತ್ತು ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವ ಪ್ರಯತ್ನವನ್ನು ಶಿಕ್ಷಣದ ಜೊತೆ ಮಾಡಿದಾಗ ನಮ್ಮ ಬದುಕು ಸುಂದರವಾಗುತ್ತದೆ ಎಂದು ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ […]
ಉಡುಪಿ: ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ: ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ
ಉಡುಪಿ: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ನೀಡಿದ ಅನುಮತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ‘ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಕಛೇರಿಗೆ ನುಗ್ಗುತ್ತೇವೆ’ ಎಂಬ ಪ್ರಚೋದನಕಾರಿ, ದೇಶ ವಿರೋಧಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಹಲವಾರು ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ದೂರು ಸಲ್ಲಿಸಿದ್ದರೂ ಪೊಲೀಸ್ ಇಲಾಖೆ ಐವನ್ ಡಿಸೋಜ ವಿರುದ್ಧ ಯಾವುದೇ ಪ್ರಕರಣವನ್ನು ದಾಖಲಿಸದೇ ಇರುವುದು ಓಲೈಕೆ ರಾಜಕಾರಣದ ಪರಮಾವಧಿಯಾಗಿದೆ. […]