ಉಡುಪಿ: ಬನ್ನಂಜೆ ನಿವಾಸಿ ನಾಪತ್ತೆ.

ಉಡುಪಿ, ಸೆಪ್ಟೆಂಬರ್ 12: ಉಡುಪಿ ತಾಲೂಕು ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನ ಮನೆ (31) ಎಂಬ ವ್ಯಕ್ತಿಯು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಗಮಂಗಲ ಗಲಭೆ ಎನ್.ಐ. ಎ. ತನಿಖೆಗೆ ವಹಿಸಿ : ಯಶ್ ಪಾಲ್ ಸುವರ್ಣ ಆಗ್ರಹ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಮತಾಂಧ ಮುಸ್ಲಿಂ ಮತೀಯವಾದಿಗಳು ಪೆಟ್ರೋಲ್ ಬಾಂಬ್, ಕಲ್ಲುತೂರಾಟ ನಡೆಸಿ ಹಿಂಸಾಚಾರ ಅಶಾಂತಿ ಸೃಷ್ಟಿಸಿದ ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ರಾಷ್ಟೀಯ ತನಿಖಾ ದಳಕ್ಕೆ ವಹಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ನಾಗಮಂಗಲ ಘಟನೆ ಜ್ವಲಂತ ನಿದರ್ಶನವಾಗಿದ್ದು, ಕಾಂಗ್ರೆಸ್ ಸರಕಾರದ ಮುಸ್ಲಿಂ ಓಲೈಕೆಯಿಂದ ಜಿಹಾದಿ ಮಾನಸಿಕತೆಯ ಶಕ್ತಿಗಳು ಸಮಾಜಘಾತುಕ ಕೃತ್ಯಗಳನ್ನು ರಾಜಾರೋಷವಾಗಿ ನಡೆಸುತ್ತಿವೆ. ಸಾರ್ವಜನಿಕ ರಸ್ತೆಯಲ್ಲಿ ನಮಾಜ್ […]

ಉಡುಪಿ: ಬಸ್ ನಿಲ್ದಾಣದಲ್ಲಿ ಹಣ ಯಾಚಿಸುತ್ತಿದ್ದ ‘ನಾಪತ್ತೆಯಾಗಿದ್ದ’ ಬಾಲಕನ ರಕ್ಷಣೆ

ಉಡುಪಿ: ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನ ಅನುಮಾನಸ್ಪದ ಚಲನವಲನ ಗಮನಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಬಾಲಕನನ್ನು ವಶಕ್ಕೆ ಪಡೆದು, ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿರುವ ಘಟನೆ ಇಂದು ಸಂಭವಿಸಿದೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯದಲ್ಲಿದ್ದವನು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಬಾಲಕ ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದ. ಬಾಲಕ ಕಾಣೆಯಾಗಿರುವ […]

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ವಿಶ್ವ ಪೌಷ್ಟಿಕಾಂಶ ವಾರ.

ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ವಿಶ್ವ ಪೌಷ್ಟಿಕಾಂಶ ವಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜೆನ್ನಿಫರ್ ಫ್ರೀಡಾ ಮಿನಿಜಸ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಉಪ ಪ್ರಾಂಶುಪಾಲರಾದ ರೂಪ ಶ್ರೀ ಕೆಎಸ್ ಹಾಗೂ ಬೋಧಕ ವೃಂದದವರು ಉಪಸ್ಥಿತರಿದ್ದರು. ಇದರ ಪ್ರಯುಕ್ತ ಪ್ರಥಮ ವರ್ಷದ ಬಿಎಸ್ಎ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಪೋಸ್ಟಿಕಾಂಶದ ಆಹಾರವನ್ನು ತಯಾರಿಸಿ ಅದರ ಪ್ರಾಮುಖ್ಯತೆಯನ್ನು ತಿಳಿಸಿದರು. ಕುಮಾರ ಆಸಿಫ್ ಕಾರ್ಯಕ್ರಮವನ್ನು ನಿರೂಪಿಸಿದನು.

ಉಡುಪಿ: ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು

ಉಡುಪಿ: ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಗುರುವಾರ ನಡೆದಿದೆ. ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಮೃತ ಶಿಕ್ಷಕಿ. ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ. ಸ್ಥಳಕ್ಕೆ ನಗರ ಠಾಣಾ ಅಧಿಕಾರಿ ಪುನೀತ್ […]