ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಅರಂಭ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ‍್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್‌ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ […]
ಉಡುಪಿ: ಸೆ.15ರಂದು 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ; 1 ಲಕ್ಷ ಜನರು ಭಾಗಿ
ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು ಸಹಿತ 1 ಲಕ್ಷ ಜನರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಗಡಿಭಾಗವಾದ ಬೈಂದೂರು ಶಿರೂರಿನಿಂದ ಹೆಜಮಾಡಿ ತನಕ ಸರಪಳಿ ಇರಲಿದೆ. ಉಡುಪಿಯ ಕಿನ್ನಿಮೂಲ್ಕಿ ಸ್ವಾಗತಗೋಪುರದಲ್ಲಿ ರಾಷ್ಟ್ರಧ್ವಜ […]
ಅನರ್ಹ ಬಿಪಿಎಲ್ ಕಾರ್ಡ್ ಪರಿಶೀಲನೆ ಆರಂಭ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್ ಪಡಿತರ ಕಾರ್ಡ್ ಗಳಿದ್ದು, 1.97 ಲಕ್ಷ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಇದರಲ್ಲಿ ಅನರ್ಹರೂ ಕಾರ್ಡ್ ಪಡೆದಿರುವ ಸಾಧ್ಯತೆ ಇದೆ. ಹೀಗಾಗಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಪರಿಶೀಲಿಸುವ ಸಲುವಾಗಿ ಸರ್ವೇ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು. ಉಡುಪಿ ಜಿಲ್ಲಾಧಿಕಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 6 ತಿಂಗಳಿಂದ ಯಾರು ಪಡಿತರ ತೆಗೆದುಕೊಂಡಿಲ್ಲವೋ ಅವರ ಕಾರ್ಡ್‌ಗಳನ್ನು ಆರಂಭದಲ್ಲಿ ಮುಟ್ಟುಗೋಲು ಹಾಕುತ್ತೇವೆ. ಹಾಗೆಯೇ 1.20 ಲಕ್ಷಕ್ಕಿಂತ ಅಧಿಕ ಆದಾಯ ಇರುವ […]
ಉಡುಪಿ ಕೃಷ್ಣಮಠದ ಗಣಪತಿಯ ವಿಸರ್ಜನೆ ಮೆರವಣಿಗೆ
ಉಡುಪಿ: ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ಕೃಷ್ಣಮಠದಲ್ಲಿ ಹಾಗೂ ಗೀತಾಮಂದಿರದಲ್ಲಿ ಪೂಜಿಸಲ್ಪಟ್ಟ ಗಣಪತಿಯ ವಿಸರ್ಜನೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಗಣಪತಿ ಮೂರ್ತಿಯನ್ನು ಆಕರ್ಷಕ ಟ್ಯಾಬ್ಲೋದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಹುಲಿವೇಷ, ರಕ್ಕಸ ವೇಷ, ವಾದ್ಯ, ಬ್ಯಾಂಡು ಮೆರವಣಿಗೆಯ ಮೆರುಗು ಹೆಚ್ಚಿಸಿತು. ತಾಸೆಯ ಸದ್ದಿಗೆ ಭಕ್ತರು ಕುಣಿದು ಕುಪ್ಪಳಿಸಿದರು. ಮೆರವಣಿಗೆಯಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಸುಶೀಂದ್ರತೀರ್ಥ ಶ್ರೀಪಾದರು, ಮಠದ ದಿವಾನ ನಾಗರಾಜ್ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಹಾಗೂ ನೂರಾರು ಮಂದಿ […]
ಉಡುಪಿ:ನೋಟರಿ ಹುದ್ದೆಗಳ ನೇಮಕಾತಿ : ಅರ್ಜಿ ಆಹ್ವಾನ
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಹೊಂದಿರುವವರು ಸೆಪ್ಟಂಬರ್ 27 ರ ಸಂಜೆ 5.30 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]